
ಮುಂಬೈ(ಮಾ.09): ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ನಡೆಸದೆ ಹೋದರೆ, ಸರಿಸುಮಾರು 2,500 ಸಾವಿರ ಕೋಟಿಗೂ ಹೆಚ್ಚಿನ ನಷ್ಟವಾಗಿ ಅದು ದಿವಾಳಿಯಾಗಲಿದೆ ಎಂದು ‘ಕ್ರಿಕ್ ಬುಜ್’ ವೆಬ್ ಜಾಲ ಹೇಳಿದೆ.
ನ್ಯಾ. ಲೋಧಾ ಸಮಿತಿ ಶಿಫಾರಸುಗಳ ಅನುಷ್ಠಾನ ವಿಷಯದಲ್ಲಿ ಸುಪ್ರೀಂ ಕೋರ್ಟ್ ನೇಮಿತ ಆಡಳಿತ ಸಮಿತಿ ಮತ್ತು ರಾಜ್ಯ ಕ್ರಿಕೆಟ್ ಸಂಸ್ಥೆಗಳ ನಡುವಿನ ಸಮರ ಇನ್ನೂ ಮುಕ್ತಾಯ ಕಾಣದಂತಾಗಿದ್ದು, ಒಂದೊಮ್ಮೆ ಇದು ವಿಪರೀತಕ್ಕೆ ಹೋದರೆ ಐಪಿಎಲ್ ಮೇಲೆ ಕರಿನೆರಳು ಬೀರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಸದ್ಯ, ಐಪಿಎಲ್ ಪಂದ್ಯಗಳ ಆಯೋಜನೆಗೆ ಪ್ರತಿ ರಾಜ್ಯ ಸಂಸ್ಥೆಗಳಿಂದ ಬಿಸಿಸಿಐಗೆ 60 ಲಕ್ಷ ರೂಪಾಯಿ ಮತ್ತು ಫ್ರಾಂಚೈಸಿಗಳಿಂದ 30 ಲಕ್ಷ ರೂಪಾಯಿಗಳ ಅನುದಾನ ದೊರೆಯುತ್ತಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.