12ನೇ ಆವೃತ್ತಿ ಐಪಿಎಲ್ ಟೂರ್ನಿ ಆಯೋಜನೆಗೆ ಹೆಣಗಾಡುತ್ತಿರುವ ಬಿಸಿಸಿಐ ಇದೀಗ ಕಾದು ನೋಡುವ ತಂತ್ರ ಅನುಸರಿಸುತ್ತಿದೆ. ಕೇಂದ್ರ ಚುನಾವಣಾ ಅಯೋಗ ಲೋಕಸಭಾ ಚುನಾವಣಾ ದಿನಾಂಕ ಪ್ರಕಟಿಸಲು ಬಿಸಿಸಿಐ ಕಾಯುತ್ತಿದೆ.
ಮುಂಬೈ(ಫೆ.12): ಐಪಿಎಲ್ ಟೂರ್ನಿ ಆಯೋಜನೆ ಕುರಿತು ಬಿಸಿಸಿಐಗೆ ಇನ್ನೂ ಸ್ಪಷ್ಟ ನಿರ್ಧಾರ ಕೈಗೊಳ್ಳಲು ಸಾಧ್ಯವಾಗಿಲ್ಲ. 2019ರ ಲೋಕಸಭಾ ಚುನಾವಣೆಯಿಂದಾಗಿ ಐಪಿಎಲ್ ವೇಳಾಪಟ್ಟಿ ಇನ್ನೂ ಪ್ರಕಟಗೊಂಡಿಲ್ಲ. ಸದ್ಯ ಕೇಂದ್ರ ಚುನಾವಣಾ ಆಯೋಗ ಚುನಾವಣಾ ದಿನಾಂಕ ಪ್ರಕಟಿಸಿದ ಬಳಿಕ ಐಪಿಎಲ್ ವೇಳಾ ಪಟ್ಟಿ ಪ್ರಕಟಿಸಲು ಬಿಸಿಸಿಐ ನಿರ್ಧರಿಸಿದೆ.
ಇದನ್ನೂ ಓದಿ: 2019ರ ವಿಶ್ವಕಪ್‌ಗೆ ಆಸ್ಟ್ರೇಲಿಯಾ ತಂಡ ಪ್ರಕಟಿಸಿದ ಶೇನ್ ವಾರ್ನ್!
undefined
12ನೇ ಆವೃತ್ತಿ ಐಪಿಎಲ್ ಟೂರ್ನಿಯನ್ನ ಭಾರತದಲ್ಲೇ ನಡೆಸಲು ಬಿಸಿಸಿಐ ಹರಸಾಹಸ ಪಡುತ್ತಿದೆ. ಆದರೆ ಲೋಕಸಭಾ ಚುನಾವಣೆ ಹಾಗೂ 2019ರ ವಿಶ್ವಕಪ್ ಟೂರ್ನಿಯಿಂದಾಗಿ ಬಿಸಿಸಿಐ ಇಕ್ಕಟ್ಟಿನಲ್ಲಿ ಸಿಲುಕಿದೆ. ಮಾರ್ಚ್ 23 ರಿಂದ ಐಪಿಎಲ್ ಆರಂಭಗೊಳ್ಳಲಿದೆ ಎಂದು ಈಗಾಗಲೇ ಬಿಸಿಸಿಐ ಸ್ಪಷ್ಟಪಡಿಸಿದೆ. ಆದರೆ ವೇಳಾಪಟ್ಟಿ ಮಾತ್ರ ಪ್ರಕಟಿಸಿಲ್ಲ.
ಇದನ್ನೂ ಓದಿ: ರೋಹಿತ್ ಶರ್ಮಾ ಮುದ್ದು ಮಗಳ ವಿಡಿಯೋ ವೈರಲ್ !
ಚುನಾವಣೆ ದಿನಾಂಕ ಆಧರಿ, ಐಪಿಎಲ್ ಪಂದ್ಯಗಳ ವೇಳಾಪಟ್ಟಿ ಸಿದ್ಧಪಡಿಸಲಾಗುವುದು ಎಂದು ಬಿಸಿಸಿಐ ಹೇಳಿದೆ. 2009ರ ಲೋಕಸಭಾ ಚುನಾವಣೆಯಿಂದಾಗಿ ಐಪಿಎಲ್ ಟೂರ್ನಿಯನ್ನ ಸೌತ್ಆಫ್ರಿಕಾದಲ್ಲಿ ಆಯೋಜಿಸಲಾಗಿತ್ತು. ಇನ್ನು 2014ರಲ್ಲಿ ಆರಂಭಿಕ ಪಂದ್ಯಗಳು ಯುಎಇನಲ್ಲಿ ಆಯೋಜಿಸಲಾಗಿತ್ತು. ಹಲವು ಅಡೆತಡೆಗಳನ್ನ ಎದುರಿಸುತ್ತಿರುವ ಬಿಸಿಸಿಐ ಇದೀಗ ಐಪಿಎಲ್ ಆಯೋಜನೆಗೆ ತಲೆನೋವಾಗಿ ಪರಿಣಮಿಸಿದೆ.