ಭಾರತ ವಿರುದ್ಧದ ಏಕದಿನ ಸರಣಿಗೆ ಮರಳಿದ ಇಂಗ್ಲೆಂಡ್ ಆಲ್‌ರೌಂಡರ್ ಬೆನ್ ಸ್ಟೋಕ್ಸ್

Published : Jun 29, 2018, 07:01 PM IST
ಭಾರತ ವಿರುದ್ಧದ ಏಕದಿನ ಸರಣಿಗೆ ಮರಳಿದ ಇಂಗ್ಲೆಂಡ್ ಆಲ್‌ರೌಂಡರ್ ಬೆನ್ ಸ್ಟೋಕ್ಸ್

ಸಾರಾಂಶ

ಭಾರತ ವಿರುದ್ಧದ ಏಕದಿನ ಸರಣಿಗೆ ಇಂಗ್ಲೆಂಡ್ ಆಯ್ಕೆ ಸಮಿತಿ ತಂಡ ಪ್ರಕಟಿಸಿದೆ. ಗಾಯಗೊಂಡಿದ್ದ ಬೆನ್ ಸ್ಟೋಕ್ಸ್‌ ಮತ್ತೆ ತಂಡ ಸೇರಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಸ್ಟೋಕ್ಸ್ ವಾಪಾಸ್ಸಾತಿಯಿಂದ ಇಂಗ್ಲೆಂಡ್ ತಂಡ ಮತ್ತಷ್ಟು ಬಲಿಷ್ಠಗೊಂಡಿದೆ.ಇಂಗ್ಲೆಂಡ್ ತಂಡ ಹೇಗಿದೆ? ಇಲ್ಲಿದೆ ವಿವರ.  

ಇಂಗ್ಲೆಂಡ್(ಜೂ.29): ಇಂಜುರಿಯಿಂದ ಚೇತರಿಸಿಕೊಂಡಿರುವ ಇಂಗ್ಲೆಂಡ್ ಆಲ್‌ರೌಂಡರ್ ಬೆನ್ ಸ್ಟೋಕ್ಸ್ ತಂಡಕ್ಕೆ ವಾಪಾಸ್ಸಾಗಿದ್ದಾರೆ.  ಭಾರತ ವಿರುದ್ಧದ 3 ಏಕದಿನ ಸರಣಿಗೆ ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ತಂಡ ಪ್ರಕಟಿಸಿದೆ.  ಬೆನ್ ಸ್ಟೋಕ್ಸ್‌ಗೆ ಸ್ಥಾನ ಕಲ್ಪಿಸಿರುವ ಆಯ್ಕೆ ಸಮಿತಿ ಬಲಿಷ್ಠ ತಂಡವನ್ನೇ ಕಣಕ್ಕಿಳಿಸಿದೆ.

ಪಾಕಿಸ್ತಾನ ವಿರುದ್ಧದ ಟೆಸ್ಟ್ ಪಂದ್ಯದ ವೇಳೆ ಗಾಯಗೊಂಡ ಸ್ಟೋಕ್ಸ್, ಆಸ್ಟ್ರೇಲಿಯಾ ವಿರುದ್ಧದ ಏಕದಿನ ಹಾಗೂ ಟಿ-ಟ್ವೆಂಟಿ ಸರಣಿಯಿಂದ ಹೊರಗುಳಿದಿದ್ದರು. ಇದೀಗ ಗಾಯದಿಂದ ಚೇತರಿಸಿಕೊಂಡಿರುವ ಸ್ಟೋಕ್ಸ್ ತಂಡಕ್ಕೆ ಮರಳಿದ್ದಾರೆ.

ಜುಲೈ 3 ರಿಂದ ಭಾರತ ಹಾಗೂ ಇಂಗ್ಲೆಂಡ್ ನಡುವಿನ ಸರಣಿ ಆರಂಭಗೊಳ್ಳಲಿದೆ. 3 ಟಿ20, 3 ಏಕದಿನ ಹಾಗೂ 5 ಟೆಸ್ಟ್ ಪಂದ್ಯಗಳ ಸರಣಿ ಭಾರತದ ಪಾಲಿಗೆ ಮಹತ್ವದ್ದಾಗಿದೆ. ಇದೀಗ ಇಂಗ್ಲೆಂಡ್ ತಂಡ ಪ್ರಕಟಿಸೋ ಮೂಲಕ ಭರ್ಜರಿ ತಯಾರಿಗೆ ಮುಂದಾಗಿದೆ.

ಇಂಗ್ಲೆಂಡ್ ತಂಡ: ಇಯಾನ್ ಮಾರ್ಗನ್(ನಾಯಕ), ಮೊಯಿನ್ ಆಲಿ ಜಾನಿ ಬೈರಿಸ್ಟೋ, ಜೇಕ್ ಬಾಲ್, ಜೋಸ್ ಬಟ್ಲರ್, ಟಾಮ್ ಕುರ್ರನ್, ಅಲೆಕ್ಸ್ ಹೇಲ್ಸ್, ಲಿಯಾಮ್ ಪ್ಲೆಂಕೆಟ್, ಆದಿಲ್ ರಶಿದ್, ಜೋ ರೂಟ್ ಜೇಸನ್ ರಾಯ್, ಬೆನ್ ಸ್ಟೋಕ್ಸ್, ಡೇವಿಡ್ ವಿಲೆ ಹಾಗೂ ಮಾರ್ಕ್ ವುಡ್

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಂಡರ್ 19 ಏಷ್ಯಾಕಪ್‌ ಭಾರತ-ಶ್ರೀಲಂಕಾ ಸೆಮಿಫೈನಲ್ ರದ್ದಾದ್ರೆ ಫೈನಲ್‌ಗೇರೋದು ಯಾರು?
ಸಯ್ಯದ್‌ ಮುಷ್ತಾಕ್‌ ಅಲಿ ಟಿ20: ಜಾರ್ಖಂಡ್‌ಗೆ ಚೊಚ್ಚಲ ಕಿರೀಟ, ಶತಕ ಚಚ್ಚಿ ಅಪರೂಪದ ದಾಖಲೆ ಬರೆದ ಇಶಾನ್ ಕಿಶನ್!