
ಮೆಲ್ಬರ್ನ್(ಜ.01): ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಿಂದಲೂ ಇಂಗ್ಲೆಂಡ್'ನ ಆಲ್ರೌಂಡರ್ ಬೆನ್ ಸ್ಟೋಕ್ಸ್'ರನ್ನು ಕೈಬಿಡಲಾಗಿದೆ.
ಬಾರ್'ವೊಂದರ ಬಳಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಗುರಿಯಾದ ಕಾರಣ, ತಂಡದಿಂದ ಸ್ಟೋಕ್ಸ್'ರನ್ನು ತಾತ್ಕಾಲಿಕವಾಗಿ ವಜಾಗೊಳಿಸಲಾಗಿತ್ತು.
ಇದರಿಂದಾಗಿ ಆ್ಯಷಸ್ ಟೆಸ್ಟ್ ಸರಣಿಗೆ ಸ್ಟೋಕ್ಸ್ ಅಲಭ್ಯರಾಗಿದ್ದರು. ಇದಾದ ಬಳಿಕ ಸ್ಟೋಕ್ಸ್ ಮೇಲೆ ವಿಧಿಸಿದ್ದ ನಿಷೇಧವನ್ನು ಹಿಂಪಡೆಯಲಾಗಿತ್ತು. ನಂತರ ನ್ಯೂಜಿಲೆಂಡ್'ಗೆ ತೆರಳಿದ್ದ ಸ್ಟೋಕ್ಸ್ ಅಲ್ಲಿ ಕೆಲ ದಿನ ಅಭ್ಯಾಸ ನಡೆಸಿ ತವರಿಗೆ ಮರಳಿದ್ದರು.
ಇದೀಗ ಬೆನ್ ಸ್ಟೋಕ್ಸ್ ಡೇವಿಡ್ ಮಲಾನ್ ಇಂಗ್ಲೆಂಡ್ ತಂಡ ಕೂಡಿಕೊಂಡಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿ ಜನವರಿ 14ರಿಂದ ಆರಂಭವಾಗಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.