
ಬೆಂಗಳೂರು(ಸೆ.21): ಸೌತ್ ಆಫ್ರಿಕಾ ವಿರುದ್ಧದ 3ನೇ ಟಿ20 ಪಂದ್ಯಕ್ಕಾಗಿ ಬೆಂಗಳೂರಿನಲ್ಲಿರುವ ಟೀಂ ಇಂಡಿಯಾ ಕಠಿಣ ಅಭ್ಯಾಸ ನಡೆಸಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಭ್ಯಾಸ ಮುಗಿಸಿ ಪೆವಿಲಿಯನ್‌ತ್ತ ಹಿಂದಿರುಗುತ್ತಿದ್ದ ನಾಯಕ ವಿರಾಟ್ ಕೊಹ್ಲಿ ಸೇರಿದಂತೆ ಟೀಂ ಇಂಡಿಯಾ ಕ್ರಿಕೆಟಿಗರ ಆಟೋಗ್ರಾಫ್‌ಗಾಗಿ ಅಭಿಮಾನಿಗಳು ಮುಗಿಬಿದ್ದರು.
ಇದನ್ನೂ ಓದಿ: INDvSA T20: ಬೆಂಗಳೂರು ಪಂದ್ಯಕ್ಕೆ ಬದಲಾವಣೆ; ಕನ್ನಡಿಗನಿಗೆ ಸ್ಥಾನ?
ಸೆ.22 ರಂದು ನಡೆಯಲಿರುವ ಅಂತಿಮ ಟಿ20 ಪಂದ್ಯಕ್ಕಾಗಿ ಭಾರತ ತಂಡ ಅಭ್ಯಾಸ ನಡೆಸಿತ್ತು. ಟೀಂ ಇಂಡಿಯಾ ಕ್ರಿಕೆಟಿಗರ ಪ್ರಾಕ್ಟೀಸ್ ನೋಡಲು ಅಭಿಮಾನಿಗಳು ಜಮಾಯಿಸಿದ್ದರು. ಅಭ್ಯಾಸ ಮುಗಿಸಿ ವಾಪಾಸ್ಸಾಗುತ್ತಿದ್ದ ವೇಳೆ ನಾಯಕ ವಿರಾಟ್ ಕೊಹ್ಲಿ ಅಭಿಮಾನಿಗಳಿಗೆ ಆಟ್ರೋಗ್ರಾಫ್ ನೀಡದರು. ಇನ್ನು ಸೆಲ್ಫಿ ಕೂಡ ಕ್ಲಿಕ್ಕಿಸಿಕೊಂಡರು.
ಇದನ್ನೂ ಓದಿ: #INDvSA ಬೆಂಗಳೂರು ಪಂದ್ಯ; ಮಳೆ ಬರುತ್ತಾ? ಬಿಸಿಲು ಇರುತ್ತಾ?
ಹಾರ್ದಿಕ್ ಪಾಂಡ್ಯ, ಶಿಖರ್ ಧವನ್, ರೋಹಿತ್ ಶರ್ಮಾ ಸೇರಿದಂತೆ ಟೀಂ ಇಂಡಿಯಾದ ಬಹುತೇಕ ಕ್ರಿಕೆಟಿಗರು ಬೆಂಗಳೂರು ಅಭಿಮಾನಿಗಳ ಜೊತೆ ಫೋಟೋ ಕ್ಲಿಕ್ಕಿಸಿಕೊಂಡರು. ನೆಚ್ಚಿನ ಕ್ರಿಕೆಟಿಗರ ಆಟೋಗ್ರಾಫ್ ಹಾಗೂ ಫೋಟೋ ಪಡೆದ ಅಭಿಮಾನಿಗಳು ಸಂತಸದಲ್ಲಿ ತೇಲಾಡಿದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.