
ಮುಂಬೈ(ಏ.17): ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯ ಗೆದ್ದು ಆತ್ಮವಿಶ್ವಾಸ ಹೆಚ್ಚಿಸಿಕೊಂಡಿರುವ ಮುಂಬೈ ಇಂಡಿಯನ್ಸ್ ಇದೀಗ ಡೆಲ್ಲಿ ಕ್ಯಾಪಿಟಲ್ಸ್ ಹೋರಾಟಕ್ಕೆ ಸಜ್ಜಾಗಿದೆ. ದೆಹಲಿಯ ಫಿರೋಜ್ ಶಾ ಕೋಟ್ಲಾ ಮೈದಾನದಲ್ಲಿ ಈ ಪಂದ್ಯ ನಡೆಯಲಿದೆ. ಆದರೆ ಐಪಿಎಲ್ ಟೂರ್ನಿ ನಡುವೆ ಮುಂಬೈ ತಂಡಕ್ಕೆ ನಡುಕ ಶುರುವಾಗಿದೆ.
ಇದನ್ನೂ ಓದಿ: ಹರ್ಷಲ್ ಪಟೇಲ್ ಔಟ್, ಕನ್ನಡಿಗನಿಗೆ ಹೊಡೆಯಿತು ಜಾಕ್’ಪಾಟ್..!
ಭುಜದ ಗಾಯದ ಸಮಸ್ಯೆಯಿಂದಾಗಿ ಮುಂಬೈ ಇಂಡಿಯನ್ಸ್ ತಂಡದ ವೇಗಿ ಅಲ್ಜಾರಿ ಜೋಸೆಫ್ 12ನೇ ಆವೃತ್ತಿಯ ಐಪಿಎಲ್‌ನಿಂದ ಹೊರಬಿದ್ದಿದ್ದಾರೆ. ಏ.13 ರಂದು ರಾಜಸ್ಥಾನ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಕ್ಷೇತ್ರರಕ್ಷಣೆ ವೇಳೆ ಜೋಸೆಫ್ ಗಾಯಗೊಂಡಿದ್ದರು. ನ್ಯೂಜಿಲೆಂಡ್ ವೇಗಿ ಆ್ಯಡಮ್ ಮಿಲ್ನೆ ಗಾಯಗೊಂಡಿದ್ದ ಕಾರಣ ಅವರ ಬದಲಿಗೆ ಜೋಸೆಫ್ ಮುಂಬೈ ತಂಡದಲ್ಲಿ ಸ್ಥಾನ ಪಡೆದಿದ್ದರು.
ಇದನ್ನೂ ಓದಿ: ನನ್ನ ಬೆಂಬಲ ನರೇಂದ್ರ ಮೋದಿಗೆ-ಜಡೇಜಾ ಟ್ವೀಟ್‌ಗೆ ಪ್ರತಿಕ್ರಿಯಿಸಿದ ಪ್ರಧಾನಿ!
ಏ.6 ರಂದು ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಐಪಿಎಲ್‌ಗೆ ಪಾದಾರ್ಪಣೆ ಮಾಡಿದ್ದ ವಿಂಡೀಸ್ ವೇಗಿ 12 ರನ್‌ಗೆ 6 ವಿಕೆಟ್ ಪಡೆದು ದಾಖಲೆ ಬರೆದಿದ್ದರು. ಇಷ್ಟೇ ಅಲ್ಲ ಮುಂಬೈಗೆ ಭರ್ಜರಿ ಗೆಲುವಿನ ರೂವಾರಿಯಾಗಿದ್ದರು. ಇದೀಗ ಜೊಸೆಫ್ ಅಲಭ್ಯತೆ ಮುಂಬೈ ತಂಡಕ್ಕೆ ತೀವ್ರ ಹೊಡೆತ ಬೀಳಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.