ಅಂಧರ ಕ್ರಿಕೆಟ್: ಶ್ರೀಲಂಕಾ ವಿರುದ್ಧ ಭಾರತಕ್ಕೆ ಸರಣಿ ಗೆಲುವು

Published : Jul 25, 2018, 01:19 PM IST
ಅಂಧರ ಕ್ರಿಕೆಟ್: ಶ್ರೀಲಂಕಾ ವಿರುದ್ಧ ಭಾರತಕ್ಕೆ ಸರಣಿ ಗೆಲುವು

ಸಾರಾಂಶ

ಶ್ರೀಲಂಕಾ ವಿರುದ್ಧ ದ್ವಿಪಕ್ಷೀಯ ಅಂಧರ ಕ್ರಿಕೆಟ್ ಟೂರ್ನಿಯಲ್ಲಿ ಟೀಂ ಇಂಡಿಯಾ ಮೇಲುಗೈ ಸಾಧಿಸಿದೆ. ಟಿ20 ಸರಣಿ ಗೆಲುವು ಸಾಧಿಸಿದ ಟೀಂ ಇಂಡಿಯಾ ಏಕದಿನ ಸರಣಿ ಸೋಲಿಗೆ ಸೇಡು ತೀರಿಸಿಕೊಂಡಿದೆ. ರೋಚಕ ಪಂದ್ಯದ ವಿವರ ಇಲ್ಲಿದೆ.

ಕೊಲಂಬೊ(ಜು.25): ಇಲ್ಲಿ ಮಂಗಳವಾರ ಮುಕ್ತಾಯವಾದ ಅಂಧರ ಟಿ20 ಕ್ರಿಕೆಟ್ ಟೂರ್ನಿಯ 5ನೇ ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು 10 ವಿಕೆಟ್‌ಗಳಿಂದ ಸೋಲಿಸಿದ ಭಾರತ ತಂಡ ಚಾಂಪಿಯನ್ ಆಗಿ ಹೊರ ಹೊಮ್ಮಿತು.

ಇದರೊಂದಿಗೆ ಭಾರತ 4-1 ಅಂತರದಿಂದ ಸರಣಿ ಜಯಿಸಿದೆ. ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ 5 ವಿಕೆಟ್‌ಗೆ 189 ರನ್‌ಗಳಿಸಿತು. ಇದಕ್ಕುತ್ತರವಾಗಿ ಭಾರತ ಸುನಿಲ್ ರಮೇಶ್ (103) ಶತಕದ ನೆರವಿನಿಂದ 16 ಓವರ್‌ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 190 ರನ್‌ಗಳಿಸಿ ಜಯಗಳಿಸಿತು. ಕಾರಣಾಂತರಗಳಿಂದ ಮಂಗಳವಾರವೇ ನಡೆದ 4ನೇ ಪಂದ್ಯದಲ್ಲಿ ಲಂಕಾ ವಿರುದ್ಧ ಭಾರತ 8 ವಿಕೆಟ್‌ಗಳ ಜಯ ಪಡೆಯಿತು.

ಟಿ20 ಸರಣಿಗೂ ಮೊದಲು ಶ್ರೀಲಂಕಾ ವಿರುದ್ಧದ ದ್ವಿಪಕ್ಷೀಯ ಸರಣಿಯಲ್ಲಿ ಭಾರತ ಸೋಲು ಅನುಭವಿಸಿತ್ತು. 3 ಏಕದಿನ ಪಂದ್ಯಗಳ ಸರಣಿಯಲ್ಲಿ ಶ್ರೀಲಂಕಾ 2-1 ಅಂತರದಲ್ಲಿ ಸರಣಿ ಗೆಲುವು ಸಾಧಿಸಿತ್ತು. ಇದೀಗ ಏಕದಿನ ಸರಣಿ ಸೋಲಿಗೆ ಭಾರತ ಟಿ20 ಸರಣಿ ಗೆದ್ದು ಸೇಡು ತೀರಿಸಿಕೊಂಡಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನಿಮಗೇನು ಹುಚ್ಚು ಹಿಡಿದಿದೆಯಾ? Virat Kohli ಹೀಗಂದಿದ್ದು ಯಾರಿಗೆ? ವಿಡಿಯೋ ವೈರಲ್
2027ರ ವಿಶ್ವಕಪ್‌ ತಂಡದಲ್ಲಿ Virat Kohli ಸ್ಥಾನ ಕನ್ಫರ್ಮ್‌! ಆದ್ರೆ Rohit Sharma ಸ್ಥಾನ?