RCB ಸತತ ಸೋಲು- ಕೊಹ್ಲಿ ಬೆಂಬಲಕ್ಕೆ ನಿಂತ ಆಸಿಸ್ ಕ್ರಿಕೆಟಿಗ!

Published : Apr 12, 2019, 09:12 PM ISTUpdated : Apr 12, 2019, 09:49 PM IST
RCB ಸತತ ಸೋಲು- ಕೊಹ್ಲಿ ಬೆಂಬಲಕ್ಕೆ ನಿಂತ ಆಸಿಸ್ ಕ್ರಿಕೆಟಿಗ!

ಸಾರಾಂಶ

ರಾಯಲ್ ಚಾಲೆಂಜರ್ಸ್ ಬೆಂಗಳೂರು ನಾಯಕ ವಿರಾಟ್ ಕೊಹ್ಲಿ ವಿರುದ್ಧ ಟೀಕೆ ವ್ಯಕ್ತವಾಗುತ್ತಿದೆ.  ಇದರ ಬೆನ್ನಲ್ಲೇ ಆಸಿಸ್ ಕ್ರಿಕೆಟಿಗ ಕೊಹ್ಲಿ ಬೆಂಬಲಕ್ಕೆ ನಿಂತಿದ್ದಾರೆ. ಕೊಹ್ಲಿ ಐಪಿಎಲ್ ಪ್ರದರ್ಶನ ಹಾಗೂ ಟೀಂ ಇಂಡಿಯಾ ವಿಶ್ವಕಪ್ ಟೂರ್ನಿ ಕುರಿತು ಆಸಿಸ್ ಕ್ರಿಕೆಟಿಗ ಹೇಳಿದ್ದೇನು? ಇಲ್ಲಿದೆ ವಿವರ.

ಮೊಹಾಲಿ(ಏ.12): ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸತತ ಸೋಲಿಗೆ ಟೀಕೆಗಳು ವ್ಯಕ್ತವಾಗುತ್ತಿದೆ. ಸೋಲಿಗೆ ನಾಯಕತ್ವವೇ ಕಾರಣ ಅನ್ನೋ ವಾದ ಒಂದಡೆಯಾದರೆ, ಕೊಹ್ಲಿಗೆ ವಿಶ್ರಾಂತಿ ನೀಡಿ ಅನ್ನೋ ವಾದ ಮತ್ತೊಂದಂಡೆ. ಆದರೆ ಪ್ರತಿ ಪಂದ್ಯದ ಬಳಿಕ ಕೊಹ್ಲಿ ನಾಯಕತ್ವದ ಕುರಿತು ಅಪಸ್ವರ ಕೇಳಿಬರುತ್ತಿದೆ. ಇದೀಗ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧದ ಪಂದ್ಯಕ್ಕೂ ಮೊದಲು ಕೊಹ್ಲಿಗೆ ಬೆಂಬಲ ವ್ಯಕ್ತವಾಗಿದೆ.

ಇದನ್ನೂ ಓದಿ: RCB ತಂಡಕ್ಕೆ ಆಫ್ರಿಕಾ ವೇಗಿ ಡೇಲ್‌ ಸ್ಟೈನ್‌ ಎಂಟ್ರಿ?

ಆಸಿಸ್ ಕ್ರಿಕೆಗ ಬ್ರಾಡ್ ಹಾಗ್, ನಾಯಕ ವಿರಾಟ್ ಕೊಹ್ಲಿ ಬೆಂಬಲಕ್ಕೆ ನಿಂತಿದ್ದಾರೆ. RCB ತಂಡ ಸಂಪೂರ್ಣವಾಗಿ ಕೊಹ್ಲಿಯನ್ನು ಅವಲಂಬಿತವಾಗಿದೆ. ಹೀಗಾಗಿ ಸೋಲು ಅನುಭವಿಸಿತ್ತಿದೆ. ಆದರೆ ಈ ಪ್ರದರ್ಶನ ನಾಯಕ ವಿರಾಟ್ ಕೊಹ್ಲಿಯ ವಿಶ್ವಕಪ್ ಪ್ರದರ್ಶನ ಹಾಗೂ ನಾಯಕತ್ವಕ್ಕೆ ಯಾವುದೇ ತೊಡಕಾಗುವುದಿಲ್ಲ ಎಂದು ಹಾಗ್ ಹೇಳಿದ್ದಾರೆ.

ಇದನ್ನೂ ಓದಿ: ಸಿಕ್ಸರ್ ಬಾರಿಸಿದ ಜಡೇಜಾ ತಲೆ ಮೇಲೆ ಹೊಡೆದ ಧೋನಿ!

RCB ಡೆತ್ ಓವರ್‌ನಲ್ಲಿ ಸಮಸ್ಯೆ ಎದುರಿಸುತ್ತಿದೆ. ಬೌಲರ್‌ಗಳು ಪರಿಣಾಮಕಾರಿಯಾಗುತ್ತಿಲ್ಲ. ಇತ್ತ  ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳು ಅಬ್ಬರಿಸುತ್ತಿಲ್ಲ ಎಂದು ಹಾಗ್ ಹೇಳಿದ್ದಾರೆ. ಬ್ರಾಡ್ ಹಾಗ್ ಐಪಿಎಲ್ ಟೂರ್ನಿಯಲ್ಲಿ ಕೋಲ್ಕತಾ ನೈಟ್ ರೈಡರ್ಸ್ ಹಾಗೂ ರಾಜಸ್ಥಾನ ರಾಯಲ್ಸ್ ತಂಡವನ್ನು ಪ್ರತಿನಿಧಿಸಿದ್ದರು.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕ್ರೈಸ್ಟ್‌ಚರ್ಚ್ ಪವಾಡ: ಕಿವೀಸ್ ಎದುರು ಐತಿಹಾಸಿಕ ಡ್ರಾ ಸಾಧಿಸಿದ ವೆಸ್ಟ್ ಇಂಡೀಸ್!
20 ಮ್ಯಾಚ್ ಬಳಿಕ ಕೊನೆಗೂ ಟಾಸ್ ಗೆದ್ದ ಭಾರತ! ದಕ್ಷಿಣ ಆಫ್ರಿಕಾ ತಂಡದಲ್ಲಿ 2 ಬದಲಾವಣೆ!