ಲಾರಾ ಮನೆಯಲ್ಲಿ ಕೊಹ್ಲಿ ಬಾಯ್ಸ್‌ಗೆ ಪಾರ್ಟಿ;ಕೆರಿಬಿಯನ್ ಮಸ್ತಿಗಿಲ್ಲ ಸರಿಸಾಟಿ!

Published : Aug 18, 2019, 03:05 PM ISTUpdated : Aug 18, 2019, 03:08 PM IST
ಲಾರಾ ಮನೆಯಲ್ಲಿ ಕೊಹ್ಲಿ ಬಾಯ್ಸ್‌ಗೆ ಪಾರ್ಟಿ;ಕೆರಿಬಿಯನ್ ಮಸ್ತಿಗಿಲ್ಲ ಸರಿಸಾಟಿ!

ಸಾರಾಂಶ

ವಿಂಡೀಸ್ ದಿಗ್ಗಜ ಕ್ರಿಕೆಟಿಗ ಬ್ರಿಯಾನ್ ಲಾರಾ ತಮ್ಮ ಮನೆಯಲ್ಲಿ ಟೀಂ ಇಂಡಿಯಾ ಕ್ರಿಕೆಟಿಗರಿಗೆ ಭರ್ಜರಿ ಪಾರ್ಟಿ ನೀಡಿ ಸುದ್ದಿಯಾಗಿದ್ದಾರೆ. ಲಾರಾ ಆಯೋಜಿಸಿದ್ದ ಪಾರ್ಟಿಯಲ್ಲಿ ಕೊಹ್ಲಿ ಬಾಯ್ಸ್ ಹಾಗೂ ವೆಸ್ಟ್ ಇಂಡೀಸ್ ತಂಡದ ಹಾಲಿ ಹಾಗೂ ಮಾಜಿ ಕ್ರಿಕೆಟಿಗರು ಪಾಲ್ಗೊಂಡಿದ್ದರು.

ಆ್ಯಂಟಿಗುವಾ(ಆ.18): ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಟೀಂ ಇಂಡಿಯಾ 3 ದಿನಗಳ ಅಭ್ಯಾಸ ಪಂದ್ಯ ಆಡುತ್ತಿದೆ. ಏಕದಿನ ಸರಣಿ ಗೆದ್ದ ಬೆನ್ನಲ್ಲೇ ಆ್ಯಂಟಿಗುವಾಗೆ ಆಗಮಿಸಿದ ಭಾರತ ತಂಡಕ್ಕೆ ವೆಸ್ಟ್ ಇಂಡೀಸ್ ಮಾಜಿ ದಿಗ್ಗಜ ಕ್ರಿಕೆಟಿಗ ಬ್ರಿಯಾನ್ ಲಾರಾ ಬರ್ಜರಿ ಪಾರ್ಟಿ ಆಯೋಜಿಸಿದ್ದರು. ಈ ಪಾರ್ಟಿಯಲ್ಲಿ ವಿಂಡೀಸ್ ಕ್ರಿಕೆಟಿಗರು ಕೂಡ ಪಾಲ್ಗೊಂಡಿದ್ದರು.

ಇದನ್ನೂ ಓದಿ: ಅಭ್ಯಾಸ ಪಂದ್ಯ: ಪೂಜಾರ ಭರ್ಜರಿ ಶತಕ

ಕೆರಿಬಿಯನ್ ನಾಡಿನಲ್ಲಿ ಪಾರ್ಟಿ, ಮೋಜು ಮಸ್ತಿ ಸಾಮಾನ್ಯ. ಲಾರಾ ತಮ್ಮ ಮನೆಯಲ್ಲಿ ಆಯೋಜಿಸಿದ್ದ ಔತಣಕೂಟದಲ್ಲಿ ಟೀಂ ಇಂಡಿಯಾ ಕ್ರಿಕೆಟಿಗರೆಲ್ಲಾ ಪಾಲ್ಗೊಂಡಿದ್ದರು. ವೆಸ್ಟ್ ಇಂಡೀಸ್‌ನ ಮಾಜಿ ಕ್ರಿಕೆಟಿಗ ಡ್ವೇನ್ ಬ್ರಾವೋ, ಸ್ಫೋಟಕ ಬ್ಯಾಟ್ಸ್‌ಮನ್ ಕ್ರಿಸ್ ಗೇಲ್, ಕೀರನ್ ಪೊಲಾರ್ಡ್, ಸುನಿಲ್ ನರೈನ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

 

ಇದನ್ನೂ ಓದಿ: ಒಂದು ದಶಕದಲ್ಲಿ ಕೊಹ್ಲಿ 20 ಸಾವಿರ ರನ್; ದಿಗ್ಗಜರ ದಾಖಲೆ ಪುಡಿ ಪುಡಿ!

ಪಾರ್ಟಿ ಬಳಿಕ ಡ್ವೇನ್ ಬಾರ್ವೋ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಪೋಸ್ಟ್ ಮಾಡಿದ್ದಾರೆ. ಸದ್ಯ ವಿಂಡೀಸ್ ವಿರುದ್ಧದ ಅಭ್ಯಾಸ ಪಂದ್ಯ ಆಡುತ್ತಿರುವ ಟೀಂ ಇಂಡಿಯಾ, ಆಗಸ್ಟ್ 22 ರಿಂದ 2 ಪಂದ್ಯಗಳ ಟೆಸ್ಟ್ ಸರಣಿ ಆಡಲಿದೆ. ಟಿ20 ಹಾಗೂ ಏಕದಿನ ಸರಣಿ ಗೆದ್ದಿರುವ ಟೀಂ ಇಂಡಿಯಾ ಇದೀಗ ಟೆಸ್ಟ್ ಸರಣಿ ಕೈವಶ ಮಾಡಲು ಸಜ್ಜಾಗಿದೆ. 
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ತಲೆಗೆ 20 ಹೊಲಿಗೆ, ಭುಜಕ್ಕೆ ಬಲವಾದ ಪೆಟ್ಟು! ಕ್ರಿಕೆಟ್ ತಂಡಕ್ಕೆ ಆಯ್ಕೆ ಮಾಡದ್ದಕ್ಕೆ ಕೋಚ್‌ ಮೇಲೆ ಆಟಗಾರರ ಮಾರಣಾಂತಿಕ ಹಲ್ಲೆ!
ಆ ಒಂದು ಫೋಟೋ: ಪಾಪರಾಜಿಗಳ ಮೇಲೆ ಹಾರ್ದಿಕ್ ಪಾಂಡ್ಯ ಕೆಂಡಾಮಂಡಲ!