ಬಜೆಟ್ 2019: ರಾಷ್ಟ್ರೀಯ ಕ್ರೀಡಾ ಶಿಕ್ಷಣ ಮಂಡಳಿ ರಚನೆಗೆ ಸಮ್ಮತಿ

By Web DeskFirst Published Jul 6, 2019, 10:09 AM IST
Highlights

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕ್ರೀಡೆಗೂ ಸಹ ಒತ್ತು ನೀಡಿದ್ದು, ಖೇಲೋ ಇಂಡಿಯಾ ಕಾರ್ಯಕ್ರಮದಡಿಯಲ್ಲಿ ‘ರಾಷ್ಟ್ರೀಯ ಕ್ರೀಡಾ ಶಿಕ್ಷಣ ಮಂಡಳಿ’ (ಎನ್‌ಇಎಸ್‌ಬಿ) ರಚನೆಗೆ ಬಜೆಟ್‌ನಲ್ಲಿ ಅನುಮೋದನೆ ನೀಡಲಾಗಿದೆ. ಈ ಕುರಿತ ವರದಿ ಇಲ್ಲಿದೆ ನೋಡಿ... 

ವಿಶ್ವಕಪ್ ಟೂರ್ನಿಯ ಪ್ರತಿಕ್ಷಣದ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ...

ನವದೆಹಲಿ(ಜು.06): ದೇಶದಲ್ಲಿ ಕ್ರೀಡಾ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿವಿಧ ಯೋಜನೆಗಳಿಗೆ ಅಸ್ತು ಎಂದಿದೆ. ಇದರಲ್ಲಿ ಪ್ರಮುಖವಾಗಿ ಖೇಲೋ ಇಂಡಿಯಾ ಕಾರ್ಯಕ್ರಮದಡಿಯಲ್ಲಿ ‘ರಾಷ್ಟ್ರೀಯ ಕ್ರೀಡಾ ಶಿಕ್ಷಣ ಮಂಡಳಿ’ (ಎನ್‌ಇಎಸ್‌ಬಿ) ರಚನೆಗೆ ಬಜೆಟ್‌ನಲ್ಲಿ ಅನುಮೋದನೆ ನೀಡಿದೆ. 

ಬಜೆಟ್ ಬಗೆಗಿನ ಸಂಪೂರ್ಣ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ

ಶುಕ್ರವಾರ ಕೇಂದ್ರ ಬಜೆಟ್ ಮಂಡಿಸಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಕ್ರೀಡಾಪಟುಗಳು ಹಾಗೂ ಎಲ್ಲಾ ತರಹದ ಕ್ರೀಡೆಗಳ ಸರ್ವತೋಮುಖ ಅಭಿವೃದ್ಧಿಗಾಗಿ ವಿವಿಧ ಯೋಜನೆಗಳನ್ನು ರೂಪಿಸಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು. ಕ್ರೀಡಾಪಟುಗಳು ವಿವಿಧ ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಭಾರತ ಸರ್ಕಾರ 2017ರ ಅಕ್ಟೋಬರ್‌ನಲ್ಲಿ ಖೇಲೋ ಇಂಡಿಯಾ ಕಾರ್ಯಕ್ರಮವನ್ನು ನಡೆಸಿತ್ತು. 

ಪ್ರತಿ ವರ್ಷ ಕೂಡ ಈ ಕೂಟವನ್ನು ಕೇಂದ್ರ ಸರ್ಕಾರ ಆಯೋಜಿ ಸುತ್ತಿದೆ. ಈ ಕಾರ್ಯ ಕ್ರಮದ ಅಡಿಯಲ್ಲಿ ‘ರಾಷ್ಟ್ರೀಯ ಕ್ರೀಡಾ ಶಿಕ್ಷಣ ಮಂಡಳಿ’ ರಚನೆಯಾಗಲಿದೆ ಎಂದು ಸಚಿವರು ಹೇಳಿದರು. ಮುಂದಿನ ದಿನಗಳಲ್ಲಿ ಇಂತಹ ಮತ್ತಷ್ಟು ಕಾರ‌್ಯಕ್ರಮಗಳು ದೇಶಾ ದ್ಯಂತ ಕ್ರೀಡೆಯನ್ನು ಉತ್ತೇಜಿಸಲು ಸರ್ಕಾರ ಬದ್ಧವಾಗಿದೆ ಎಂದು ಸಚಿವರು ಹೇಳಿದರು.
 

click me!