ವಿಂಡೀಸ್ ವಿರುದ್ಧದ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಪ್ರಕಟ

Published : Sep 29, 2018, 09:41 PM ISTUpdated : Sep 30, 2018, 05:51 PM IST
ವಿಂಡೀಸ್ ವಿರುದ್ಧದ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಪ್ರಕಟ

ಸಾರಾಂಶ

ಬೌಲರ್ ಗಳಾದ ಜಾಸ್ಪ್ರಿತ್ ಬುಮ್ರಾ,ಭುವನೇಶ್ವರ್ ಕುಮಾರ್ ಹಾಗೂ ಏಕದಿನ ಪಂದ್ಯಗಳ ಆರಂಭಿಕ ಬ್ಯಾಟ್ಸ್ ಮೆನ್ ಶಿಖರ್ ಧವನ್ ಅವರಿಗೆ ವಿಶ್ರಾಂತಿ ನೀಡಲಾಗಿದ್ದು ಕರ್ನಾಟಕದ ಇಬ್ಬರು ಸ್ಥಾನ ಪಡೆದಿದ್ದಾರೆ. 

ಮುಂಬೈ[ಸೆ.29]: ಅಕ್ಟೋಬರ್ 4ರಿಂದ ಸ್ವದೇಶದಲ್ಲಿ ಆರಂಭವಾಗುವ 2 ಪಂದ್ಯಗಳ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಕ್ರಿಕೆಟ್ ಸರಣಿಗೆ ವಿರಾಟ್ ಕೊಹ್ಲಿ ನಾಯಕತ್ವದ 15 ಸದಸ್ಯರ ಭಾರತ ತಂಡವನ್ನು ಆಯ್ಕೆ ಮಾಡಲಾಗಿದೆ. ಕೊಹ್ಲಿ 3 ವಾರಗಳ ವಿಶ್ರಾಂತಿ ನಂತರ ಮತ್ತೇ ತಂಡಕ್ಕೆ ಮರಳಿದ್ದಾರೆ. 

ಬೌಲರ್ ಗಳಾದ ಜಾಸ್ಪ್ರಿತ್ ಬುಮ್ರಾ,ಭುವನೇಶ್ವರ್ ಕುಮಾರ್ ಹಾಗೂ ಏಕದಿನ ಪಂದ್ಯಗಳ ಆರಂಭಿಕ ಬ್ಯಾಟ್ಸ್ ಮೆನ್ ಶಿಖರ್ ಧವನ್ ಅವರಿಗೆ ವಿಶ್ರಾಂತಿ ನೀಡಲಾಗಿದ್ದು ಕರ್ನಾಟಕದ ಇಬ್ಬರು ಸ್ಥಾನ ಪಡೆದಿದ್ದಾರೆ. ರಾಜ್ ಕೋಟ್ ನಲ್ಲಿ ಅ.4 ಮೊದಲ, ಹೈದರಾಬಾದ್ ನಲ್ಲಿ ಅ.12 ರಂದು ದ್ವಿತೀಯ ಟೆಸ್ಟ್ ನಡೆಯಲಿದೆ.  

ಟೀಂ ಇಂಡಿಯಾ ತಂಡ:  ವಿರಾಟ್ ಕೊಹ್ಲಿ (ನಾಯಕ), ಕೆ.ಎಲ್.ರಾಹುಲ್, ಪೃಥ್ವಿ ಶಾ, ಮಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ, ಅಜಿಂಕ್ಯಾ ರಹಾನೆ, ಹನುಮ ವಿಹಾರಿ, ರಿಷಬ್ ಪಂತ್, ಆರ್. ಅಶ್ವಿನ್, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ಉಮೇಶ್ ಯಾದವ್, ಮೊಹಮ್ಮದ್ ಸಿರಾಜ್ , ಶಾರ್ದೂಲ್ ಠಾಕೂರ್

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸೌತ್ ಆಫ್ರಿಕಾ ವಿರುದ್ದ 3ನೇ ಟಿ20 ಗೆದ್ದ ಟೀಂ ಇಂಡಿಯಾ, ಸರಣಿಯಲ್ಲಿ 2-1 ಮುನ್ನಡೆ
U19 ಏಷ್ಯಾಕಪ್, 150 ರನ್‌ಗೆ ಪಾಕಿಸ್ತಾನ ಆಲೌಟ್ ಮಾಡಿದ ಟೀಂ ಇಂಡಿಯಾಗೆ 90 ರನ್ ಗೆಲುವು