
ವಿಶಾಖಪಟ್ಟಣಂ[ಡಿ.22]: ಭಾರತ ಕ್ರಿಕೆಟ್ ತಂಡದ ಪ್ರಧಾನ ಕೋಚ್ ಆಗಿ ಮುಂದುವರಿಯುವಂತೆ ನಾವು ಕೇಳಿಕೊಂಡಿದ್ದೆವು, ಆದರೆ ಅನಿಲ್ ಕುಂಬ್ಳೆ ರಾಜೀನಾಮೆ ನಿರ್ಧಾರವೇ ಸರಿ ಎಂದು ಹೊರನಡೆದರು ಎಂದು ಬಿಸಿಸಿಐ ಕ್ರಿಕೆಟ್ ಸಲಹಾ ಸಮಿತಿ ಸದಸ್ಯ ಹಾಗೂ ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಹೇಳಿದ್ದಾರೆ.
ರವಿ ಶಾಸ್ತ್ರಿ ಹಾಗೂ ಕೊಹ್ಲಿಗಾಗಿ ನಿಯಮ ಉಲ್ಲಂಘಿಸಿದ ಬಿಸಿಸಿಐ!
ಇಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಕೊಹ್ಲಿ ಮಿತಿ ಮೀರಿದರು ಎಂದು ನನಗನಿಸಲಿಲ್ಲ. ಆದರೆ ಕುಂಬ್ಳೆಗೆ ಸಿಗಬೇಕಾದ ಗೌರವ ಸಿಗಲಿಲ್ಲ. ಇದೊಂದು ಕಹಿ ಅನುಭವ. ಕುಂಬ್ಳೆ ಹಾಗೂ ಕೊಹ್ಲಿ ನಡುವೆ ಹೊಂದಾಣಿಕೆ ಕಂಡುಬರದೆ ಇದ್ದಿದ್ದು ವಿಪರ್ಯಾಸ’ ಎಂದು ಹೇಳಿದ್ದಾರೆ.
ದಾದಾ ಅಲ್ಲ, ಧೋನಿಯೂ ಅಲ್ಲ, ಗಂಭೀರ್ ಬೆಸ್ಟ್ ಕ್ಯಾಪ್ಟನ್ ಯಾರು?
ಸಚಿನ್ ತೆಂಡುಲ್ಕರ್, ಸೌರವ್ ಗಂಗೂಲಿ ಹಾಗೂ ವಿವಿಎಸ್ ಲಕ್ಷ್ಮಣ್ ನೇತೃತ್ವದ ಬಿಸಿಸಿಐ ಕ್ರಿಕೆಟ್ ಸಲಹಾ ಸಮಿತಿ 2016ರಲ್ಲಿ ಅನಿಲ್ ಕುಂಬ್ಳೆ ಅವರನ್ನು ಭಾರತ ಕ್ರಿಕೆಟ್ ತಂಡದ ಕೋಚ್ ಆಗಿ ನೇಮಿಸಿತ್ತು. 2017ರಲ್ಲಿ ಇಂಗ್ಲೆಂಡ್’ನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿ ಬಳಿಕ ಕೊಹ್ಲಿ-ಕುಂಬ್ಳೆ ನಡುವೆ ಸರಿಯಾಗಿ ಹೊಂದಾಣಿಕೆಯಾಗದ ಕಾರಣ ಕುಂಬ್ಳೆ ಕೋಚ್ ಹುದ್ದೆಗೆ ರಾಜೀನಾಮೆ ನೀಡಿದ್ದರು. ಆ ಬಳಿಕ ರವಿಶಾಸ್ತ್ರಿ ಟೀಂ ಇಂಡಿಯಾ ಕೋಚ್ ಆಗಿ ಆಯ್ಕೆಯಾಗಿದ್ದಾರೆ. ರವಿಶಾಸ್ತ್ರಿ ಮಾರ್ಗದರ್ಶನದಲ್ಲಿ ಭಾರತ ತಂಡವು ಏಷ್ಯಾಕಪ್ ಚಾಂಪಿಯನ್ ಆಗಿ ಹೊರಹೊಮ್ಮಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.