ವಿಶ್ವಕಪ್ ತಯಾರಿ ಬೆನ್ನಲ್ಲೇ ಭಾರತಕ್ಕೆ ಆಘಾತ- ಪ್ರಮುಖ ವೇಗಿ ಮೇಲೆ ಚಾರ್ಜ್‌ಶೀಟ್!

Published : Mar 14, 2019, 06:06 PM IST
ವಿಶ್ವಕಪ್ ತಯಾರಿ ಬೆನ್ನಲ್ಲೇ ಭಾರತಕ್ಕೆ ಆಘಾತ- ಪ್ರಮುಖ ವೇಗಿ ಮೇಲೆ ಚಾರ್ಜ್‌ಶೀಟ್!

ಸಾರಾಂಶ

2019ರ ವಿಶ್ವಕಪ್ ಟೂರ್ನಿಗೆ ಟೀಂ ಇಂಡಿಯಾ ಹೆಚ್ಚು ತಲೆಕೆಡಿಸಿಕೊಂಡಿದೆ. ಆಸ್ಟ್ರೇಲಿಯಾ ವಿರುದ್ಧದ ಸರಣಿ ಸೋಲು ಭಾರತಕ್ಕೆ ಹೆಚ್ಚಿನ ತಲೆನೋವು ತಂದಿದೆ. ಇದರ ಬೆನ್ನಲ್ಲೇ ಟೀಂ ಇಂಡಿಯಾ ಪ್ರಮುಖ ವೇಗಿ ಮೇಲೆ ಚಾರ್ಜ್‌ಶೀಟ್ ದಾಖಲಾಗಿದೆ. 

ಕೋಲ್ಕತಾ(ಮಾ.14): ಆಸ್ಟ್ರೇಲಿಯಾ ಸರಣಿ ಮುಗಿಸಿರುವ ಟೀಂ ಇಂಡಿಯಾ ಇದೀಗ 2019ರ ವಿಶ್ವಕಪ್ ಟೂರ್ನಿಗೆ ಆಟಗಾರರ ಆಯ್ಕೆ ಕಸರತ್ತು ನಡೆಸುತ್ತಿದೆ. ಇನ್ನು ಕೆಲ ದಿನಗಳಲ್ಲೇ ಐಪಿಎಲ್ ಟೂರ್ನಿ ಕೂಡ ಆರಂಭಗೊಳ್ಳಲಿದೆ. ಇದರ ಬೆನ್ನಲ್ಲೇ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ ವಿರುದ್ದ ವರದಕ್ಷಣಿ, ಲೈಂಗಿಕ ಕಿರುಕುಳ ಕುರಿತು ಚಾರ್ಜ್‌ಶೀಟ್ ಸಲ್ಲಿಕೆಯಾಗಿದೆ.

ಇದನ್ನೂ ಓದಿ: ವಿಶ್ವಕಪ್ ಟೂರ್ನಿಗೆ ಟೀಂ ಇಂಡಿಯಾ ರೆಡಿ -ಸೀಕ್ರೆಟ್ ಬಿಚ್ಚಿಟ್ಟ ಕೊಹ್ಲಿ!

ಮೊಹಮ್ಮದ್ ಶಮಿ ವಿರುದ್ಧ ಪತ್ನಿ ಹಸೀನ್ ಜಹಾನ್ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಕಳೆದ ವರ್ಷ ಶಮಿ ವಿರುದ್ಧ ಸರಣಿ ಆರೋಪ ಮಾಡಿರುವ ಜಹಾನ್ ದೂರು ದಾಖಲಿಸಿದ್ದಾರೆ. ಬೇರೆ ಮದುವೆ ಮಾಡಿಕೊಂಡಿದ್ದಾರೆ ಎಂದು ವಂಚನೆ ಪ್ರಕರಣ ಕೂಡ ದಾಖಲಿಸಿದ್ದಾರೆ.  ಶಮಿ ವಿರುದ್ಧದ IPC 498A and 354A ಪ್ರಕರಣ ದಾಖಲಿಸಿಕೊಂಡಿದ್ದ ಕೋಲ್ಕತ್ತಾ  ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದ್ದಾರೆ.

ಇದನ್ನೂ ಓದಿ: ಧೋನಿ ನೆರವಿನಿಂದ ವಿಶ್ವಕಪ್ ಗೆಲ್ಲಲ್ಲಿದ್ದಾರೆ ಕೊಹ್ಲಿ!

2019ರ ವಿಶ್ವಕಪ್ ಟೂರ್ನಿಯ ಪ್ರಮುಖ ವೇಗಿಯಾಗಿ ಗುರುತಿಸಿಕೊಂಡಿರುವ ಮೊಹಮ್ಮದ್ ಶಮಿ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡರೆ ಅನಿವಾರ್ಯವಾಗಿ ಶಮಿ ತಂಡದಿಂದ ಹೊರಗುಳಿಯುವ ಸಾಧ್ಯತೆ ಇದೆ. ಇಷ್ಟೇ ಅಲ್ಲ ಐಪಿಎಲ್ ಟೂರ್ನಿಯಿಂದಲೂ ಹೊರಗುಳಿಯಲಿದ್ದಾರೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸೈಲೆಂಟ್ ಆದ ಸೌತ್ ಆಫ್ರಿಕಾ , 74 ರನ್‌ಗೆ ಆಲೌಟ್ ಮಾಡಿ 101 ರನ್ ಗೆಲುವು ದಾಖಲಿಸಿದ ಭಾರತ
100 ಸಿಕ್ಸರ್ ದಾಖಲೆ ಬರೆದ ಹಾರ್ದಿಕ್ ಪಾಂಡ್ಯ, ಸೌತ್ ಆಫ್ರಿಕಾಗೆ 176 ರನ್ ಟಾರ್ಗೆಟ್