
ಚೆನ್ನೈ(ಜ.09): ಚೆನ್ನೈ ಮಂದಿಯ ಹೃದಯವನ್ನು ಆಳುತ್ತಿರುವ ಎರಡು ರಂಗಗಳೆಂದರೆ ಒಂದು ಸಿನಿಮಾ ಮತ್ತೊಂದು ಕ್ರಿಕೆಟ್. ಅದರಲ್ಲೂ ಐಪಿಎಲ್'ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಕೂಡಿಕೊಂಡ ಎಂ.ಎಸ್. ಧೋನಿ ಹಾಗೂ ರಾಜಕೀಯಕ್ಕೆ ಕಾಲಿಟ್ಟ ಸೂಪರ್ ಸ್ಟಾರ್ ರಜನಿಕಾಂತ್ ಅಸಂಖ್ಯಾತ ಅಭಿಮಾನಿಗಳ ಹೃದಯ ಗೆದ್ದಿದ್ದಾರೆ ಎಂದು ಪ್ರತ್ಯೇಕವಾಗಿ ಹೇಳಬೇಕಿಲ್ಲ.
ಭ್ರಷ್ಟಾಚಾರದ ಆರೋಪದಡಿ ಎರಡು ವರ್ಷಗಳ ನಿಷೇಧದ ಬಳಿಕ ಸಿಎಸ್'ಕೆ 'ಮಿಲಿಯನ್ ಡಾಲರ್ ಟೂರ್ನಿ' ಐಪಿಎಲ್'ಗೆ ಮರಳಿದೆ. ಎರಡು ಬಾರಿ ಸಿಎಸ್'ಕೆ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸಿರುವ ಮಾಹಿ, ತಮಿಳುನಾಡಿನಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಇನ್ನೂ ಸೂಪರ್ ಸ್ಟಾರ್ ರಜನಿಕಾಂತ್ ತಮಿಳುನಾಡು ಮಾತ್ರವಲ್ಲ ದೇಶಾದ್ಯಂತ ಅಭಿಮಾನಿಗಳನ್ನು ಹೊಂದಿರುವುದನ್ನು ಪ್ರತ್ಯೇಕವಾಗಿ ವಿವರಿಸಬೇಕಿಲ್ಲ.
ಇತ್ತೀಚೆಗಷ್ಟೇ ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸೂಪರ್ ಸ್ಟಾರ್ ರಜನಿಕಾಂತ್'ಗೆ ನಿಮ್ಮ ನೆಚ್ಚಿನ ಕ್ರಿಕೆಟಿಗ ಯಾರು ಎಂದು ಕೇಳಿದ್ದಾರೆ. ಇದಕ್ಕೆ ತಲೈವಾ ತಡ ಮಾಡದೇ ಧೋನಿ ಎಂದು ಹೇಳಿದ್ದಾರೆ. ಆ ವಿಡಿಯೋವೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.