IPL 2019: ಫೈನಲ್- ಪ್ಲೇ ಆಫ್ ಪಂದ್ಯಕ್ಕೆ ಕ್ರೀಡಾಂಗಣ ಫಿಕ್ಸ್!

Published : Apr 05, 2019, 05:17 PM IST
IPL 2019: ಫೈನಲ್- ಪ್ಲೇ ಆಫ್ ಪಂದ್ಯಕ್ಕೆ ಕ್ರೀಡಾಂಗಣ ಫಿಕ್ಸ್!

ಸಾರಾಂಶ

IPL ಟೂರ್ನಿಯ ಪ್ಲೇ ಆಫ್ ಹಾಗೂ ಫೈನಲ್ ಪಂದ್ಯದ ವೇಳಾಪಟ್ಟಿ ಬಿಡುಗಡೆ ಮಾಡಲು ಬಿಸಿಸಿಐ ಮುಂದಾಗಿದೆ. ಪ್ಲೇ ಆಫ್ ಹಾಗೂ ಫೈನಲ್ ಪಂದ್ಯ ಆಯೋಜಿಸಲು ಕ್ರೀಡಾಂಗಣವನ್ನು ಆಯ್ಕೆ ಮಾಡಲಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ಇಲ್ಲಿದೆ.  

ಮುಂಬೈ(ಏ.05): 12ನೇ ಐಪಿಎಲ್ ಟೂರ್ನಿ 2ನೇ ವಾರಕ್ಕೆ ಕಾಲಿಟ್ಟಿದೆ. 8 ತಂಡಗಳು ಪ್ರಶಸ್ತಿಗಾಗಿ ಹೋರಾಟ ನಡೆಸುತ್ತಿದೆ. ಲೀಗ್ ಹಂತದ ವೇಳಾಪಟ್ಟಿ ಬಿಡುಗಡೆ ಮಾಡಿರುವ ಬಿಸಿಸಿಐ ಇದೀಗ ಪ್ಲೇ ಆಫ್ ಹಾಗೂ ಫೈನಲ್ ಪಂದ್ಯದ ವೇಳಾಪಟ್ಟಿ ಬಿಡುಗಡೆ ಮಾಡಲಿದೆ. ಬಿಸಿಸಿಐ ಮೂಲಗಳ ಪ್ರಕಾರ ಐಪಿಎಲ್ ಫೈನಲ್ ಪಂದ್ಯಕ್ಕೆ ಚೆನ್ನೈ ಆತಿಥ್ಯ ವಹಿಸಿದ್ದರೆ, ಪ್ಲೇ ಆಫ್ ಪಂದ್ಯಗಳು ಚೆನ್ನೈ ಹಾಗೂ ಹೈದರಾಬಾದ್‌ನಲ್ಲಿ ನಡೆಯಲಿದೆ.

ಇದನ್ನೂ ಓದಿ: IPL 2019: ಇಲ್ಲಿದೆ KKR ವಿರುದ್ಧದ ಪಂದ್ಯಕ್ಕೆ RCB ಸಂಭವನೀಯ ತಂಡ!

ಮೇ 7 ರಂದು ಮೊದಲ ಪ್ಲೇ ಆಫ್ ಪಂದ್ಯ ಆಯೋಜನೆಗೊಳ್ಳಲಿದೆ. ಇನ್ನು ಮೇ 8 ರಂದು ಎಲಿಮಿನೇಟರ್ ಪಂದ್ಯ,  ಮೇ. 10ಕ್ಕೆ 2ನೇ ಪ್ಲೇ ಆಫ್ ಹಾಗೂ ಮೇ.12ಕ್ಕೆ ಫೈನಲ್ ಪಂದ್ಯ ನಡೆಯಲಿದೆ ಎಂದು ಬಿಸಿಸಿಐ ಮೂಲಗಳು ಹೇಳಿವೆ. ಶೀಘ್ರದಲ್ಲೇ ಬಿಸಿಸಿಐ ಅಧಿಕೃತ ವೇಳಾಪಟ್ಟಿ ಬಿಡುಗಡೆ ಮಾಡಲಿದೆ.

ಇದನ್ನೂ ಓದಿ: 12 ಗಂಟೆಗಳಲ್ಲಿ 2 ಪಂದ್ಯಗಳನ್ನು ಆಡಿದ ಲಸಿತ್‌ ಮಾಲಿಂಗ!

ವಿಶಾಖಪಟ್ಟಣಂ ಕ್ರೀಡಾಂಗಣವನ್ನು ಸ್ಟಾಂಡ್ ಬೈ ಆಗಿ ಆಯ್ಕೆ ಮಾಡಲಾಗಿದೆ. ಅಂತಿಮ ಕ್ಷಣದಲ್ಲಿ ಬದಲಾವಣೆಗಳಾದಲ್ಲಿ ಪ್ಲೇ ಆಫ್ ಪಂದ್ಯಗಳು ವಿಶಾಖಪಟ್ಟಣಂಕ್ಕೆ ಸ್ಥಳಾತಂರಗೊಳಿಸಲು ಆಲೋಚನೆಯಲ್ಲಿದೆ. 12ನೇ ಆವೃತ್ತಿ ಐಪಿಎಲ್ ಟೂರ್ನಿಯ ಉದ್ಘಾಟನಾ ಪಂದ್ಯ ಕೂಡ ಚೆನ್ನೈನಲ್ಲಿ ಆಯೋಜಿಸಲಾಗಿತ್ತು. ಇದೀಗ ಫೈನಲ್ ಪಂದ್ಯ ಕೂಡ ಚೆನ್ನೈನಲ್ಲಿ ಆಯೋಜಿಸಲು ಬಿಸಿಸಿಐ ಮುಂದಾಗಿದೆ.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಭಾರತ ತಂಡ ಪ್ರತಿನಿಧಿಸಿದ ಪಾಕಿಸ್ತಾನ ಕಬಡ್ಡಿ ಪಟು, ಇಸ್ಲಾಮಾಬಾದ್‌ನಲ್ಲಿ ಕೋಲಾಹಲ
ಐಪಿಎಲ್ ಹರಾಜಿನ ಬಳಿಕ 4 ಬಲಿಷ್ಠ ತಂಡ ಆಯ್ಕೆ ಮಾಡಿದ ಆರ್. ಅಶ್ವಿನ್; ಚೆನ್ನೈ ಸೂಪರ್ ಕಿಂಗ್ಸ್‌ ತಂಡಕ್ಕಿಲ್ಲ ಸ್ಥಾನ!