
ರಾಜ್'ಕೋಟ್(ನ.11): ಚೇತೇಶ್ವರ್ ಪೂಜಾರ, ‘ಬಿ’ ಗುಂಪಿನಲ್ಲಿ ಗುಜರಾತ್ ವಿರುದ್ಧದ ರಣಜಿ ಪಂದ್ಯದ ಮೊದಲ ಇನ್ನಿಂಗ್ಸ್'ನಲ್ಲಿ 182 ರನ್ ಗಳಿಸುವ ಮೂಲಕ ಮತ್ತೊಂದು ದಾಖಲೆ ಬರೆದಿದ್ದಾರೆ.
ಪ್ರಥಮ ದರ್ಜೆ ಕ್ರಿಕೆಟ್'ನಲ್ಲಿ ಪೂಜಾರ 21 ಬಾರಿ 150ಕ್ಕೂ ಹೆಚ್ಚು ರನ್ ಗಳಿಸಿದ ಮೊದಲ ಆಟಗಾರ ಎನಿಸಿದರು. ಪೂಜಾರ ಮೂರು ಬಾರಿ 300ಕ್ಕೂ ಹೆಚ್ಚು ರನ್, 9 ಬಾರಿ 200ಕ್ಕೂ ಹೆಚ್ಚು ರನ್ ಗಳಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ.
ಇತ್ತೀಚೆಗಷ್ಟೇ 12ನೇ ದ್ವಿಶತಕ ಸಿಡಿಸುವ ಮೂಲಕ ಪ್ರಥಮ ದರ್ಜೆ ಕ್ರಿಕೆಟ್'ನಲ್ಲಿ ಅತಿಹೆಚ್ಚು ದ್ವಿಶತಕ ಸಿಡಿಸಿದ ಆಟಗಾರ ಎನ್ನುವ ಖ್ಯಾತಿಗೆ ಪೂಜಾರ ಪಾತ್ರರಾಗಿದ್ದರು.
ಕೆಲತಿಂಗಳ ಹಿಂದಷ್ಟೇ ಶ್ರೀಲಂಕಾ ಪ್ರವಾಸದಲ್ಲಿನ ಮೊದಲೆರಡು ಟೆಸ್ಟ್ ಪಂದ್ಯಗಳಲ್ಲಿ 153 ಹಾಗೂ 133 ರನ್ ಸಿಡಿಸಿದ್ದರು. ಇದೀಗ ಮೂರು ಪಂದ್ಯಗಳ ಟೆಸ್ಟ್ ಸರಣಿಯು ನವೆಂಬರ್ 16ರಿಂದ ಆರಂಭವಾಗಲಿದ್ದು, ಉತ್ತಮ ಪ್ರದರ್ಶನ ತೋರುವ ನಿರೀಕ್ಷೆಯಲ್ಲಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.