
ಚೀನಾ(ನ.08): ಭಾರತದ ಅಗ್ರ ಶಟ್ಲರ್ ಕಿದಂಬಿ ಶ್ರೀಕಾಂತ್, ಚೀನಾ ಓಪನ್ ವಿಶ್ವ ಟೂರ್ ಬ್ಯಾಡ್ಮಿಂಟನ್ ಟೂರ್ನಿಯ ಪುರುಷರ ಸಿಂಗಲ್ಸ್ ಪ್ರಿ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ. ಆದರೆ ಎಚ್.ಎಸ್.ಪ್ರಣಯ್ ಮೊದಲ ಸುತ್ತಿನಲ್ಲೇ ಸೋಲುಂಡು ಹೊರಬಿದ್ದಿದ್ದಾರೆ.
5ನೇ ಶ್ರೇಯಾಂಕಿತ ಶ್ರೀಕಾಂತ್ ಬುಧವಾರ ನಡೆದ ಪಂದ್ಯದಲ್ಲಿ 9ನೇ ಶ್ರೇಯಾಂಕಿತ ಫ್ರಾನ್ಸ್‌ನ ಲುಕಾಸ್ ಕೊರ್ವಿ ವಿರುದ್ಧ 21-12, 21-16 ಗೇಮ್‌ಗಳಲ್ಲಿ ಗೆಲುವು ಸಾಧಿಸಿದರು. ಕ್ವಾರ್ಟರ್‌ನಲ್ಲಿ ಸ್ಥಾನಕ್ಕಾಗಿ ಶ್ರೀಕಾಂತ್ ಇಂಡೋನೇಷ್ಯಾದ ಟಾಮಿ ಸುಗಿಯಾರ್ಟೊ ವಿರುದ್ಧ ಸೆಣಸಲಿದ್ದಾರೆ.
ಇದೇ ವೇಳೆ ಏಷ್ಯನ್ ಗೇಮ್ಸ್ ಚಿನ್ನ ವಿಜೇತ ಇಂಡೋನೇಷ್ಯಾದ ಜೊನಾಥನ್ ಕ್ರಿಸ್ಟಿವಿರುದ್ಧ ಪ್ರಣಯ್ 11-21, 14- 21 ಗೇಮ್‌ಗಳಲ್ಲಿ ಸೋಲುಂಡರು. ಮಹಿಳಾ ಸಿಂಗಲ್ಸ್‌ನ ಮೊದಲ ಸುತ್ತಿನಲ್ಲಿ ಮಂಗಳವಾರ ಸುಲಭ ಗೆಲುವು ಸಾಧಿಸಿದ ಪಿ.ವಿ.ಸಿಂಧು 2ನೇ ಸುತ್ತಿಗೇರಿದರೆ, ಬುಧವಾರ ನಡೆದ ಪಂದ್ಯದಲ್ಲಿ ವೈಷ್ಣವಿ ರೆಡ್ಡಿ ಸೋಲುಂಡು ಹೊರಬಿದ್ದರು.
ಮಿಶ್ರ ಡಬಲ್ಸ್‌ನಲ್ಲಿ ಸಾತ್ವಿಕ್ ಸಾಯಿರಾಜ್ ಜತೆ ಆಡಿದ ಅಶ್ವಿನಿ ಪೊನ್ನಪ್ಪ ಮೊದಲ ಸುತ್ತಲ್ಲೇ ಸೋತರೆ, ಮಹಿಳಾ ಡಬಲ್ಸ್‌ನಲ್ಲಿ ಸಿಕ್ಕಿ-ಅಶ್ವಿನಿ ಜೋಡಿ ಆರಂಭಿಕ ಸುತ್ತಲ್ಲೇ ಸೋಲುಂಡಿತು.
ಸಾತ್ವಿಕ್-ಚಿರಾಗ್‌ಗೆ ಜಯ: ಪುರುಷರ ಡಬಲ್ಸ್‌ನಲ್ಲಿ ವಿಶ್ವ ನಂ.6 ಡೆನ್ಮಾರ್ಕ್ನ ಪೀಟರ್‌ಸನ್ ಹಾಗೂ ಕೊಲ್ಡಿಂಗ್ ಜೋಡಿ ವಿರುದ್ಧ ಭಾರತದ ಸಾತ್ವಿಕ್ ಹಾಗೂ ಚಿರಾಗ್ ಶೆಟ್ಟಿಜೋಡಿ 23-21, 24-22 ಗೇಮ್‌ಗಳ ರೋಚಕ ಗೆಲುವು ಸಾಧಿಸಿ 2ನೇ ಸುತ್ತಿಗೇರಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.