
ಬೆಂಗಳೂರು(ಜು.17): ಮಿಸ್ಟರ್ ಯೂನಿವರ್ಸ್, ವೆಸ್ಟ್ ಇಂಡಿಸ್ ಸ್ಫೋಟಕ ಬ್ಯಾಟ್ಸ್'ಮನ್ ಕ್ರಿಸ್ ಗೇಲ್ ಇತ್ತೀಚೆಗಷ್ಟೇ ರಾಷ್ಟ್ರೀಯ ತಂಡಕ್ಕೆ ಕಮ್'ಬ್ಯಾಕ್ ಮಾಡಿದ್ದಾರೆ. ಸದಾ ಒಂದಿಲ್ಲೊಂದು ಕಾರಣಗಳಿಂದ ಸುದ್ದಿಯಲ್ಲಿರುವ ಗೇಲ್ ಈಗ ಮತ್ತೆ ಸದ್ದು ಮಾಡುತ್ತಿದ್ದಾರೆ.
ರಾಷ್ಟ್ರೀಯ ತಂಡಕ್ಕೆ ಮರಳಿದ ಗೇಲ್ ಸಖತ್ ಜಾಲಿ ಮೂಡ್'ನಲ್ಲಿದ್ದು ಬಾಲಿವುಡ್ ಚಿತ್ರ ರಯೀಸ್'ನ ಲೈಲಾ ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ್ದಾರೆ. ಸ್ವತಃ ಸನ್ನಿ ಲಿಯೋನ್ ಕೂಡ ನಾಚುವಂತೆ ಗೇಲ್ ಡ್ಯಾನ್ಸ್ ಮಾಡಿದ್ದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ.
ತಾವು ಲೈಲಾ ಹಾಡಿಗೆ ಮಾಡಿರುವ ಡ್ಯಾನ್ಸ್'ನ್ನು ಸಾಮಾಜಿಕ ಜಾಲತಾಣ ಇನ್'ಸ್ಟಾಗ್ರಾಮ್ ಖಾತೆಯಲ್ಲಿ ಫೋಸ್ಟ್ ಮಾಡಿದ್ದು, ಇದೇ ರೀತಿ ಸ್ಟೆಪ್ ಹಾಕಿ ಪೋಸ್ಟ್ ಮಾಡಿ ನನಗಿಂತ ಹೆಚ್ಚಿನ ಲೈಕ್ ಪಡೆದವರಿಗೆ 5 ಸಾವಿರ ಅಮೆರಿಕನ್ ಡಾಲರ್ ಬಹುಮಾನ್ ನೀಡುವುದಾಗಿ ಸವಾಲು ಹಾಕಿದ್ದಾರೆ.
ನೀವೂ 5 ಸಾವಿರ ಡಾಲರ್ ಗೆಲ್ಲೋಕೆ ಟ್ರೈ ಮಾಡಿ...
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.