
ಸಿಡ್ನಿ(ಅ.24): ಮಸಾಜ್ ಮಾಡುವ ವೇಳೆ ಮಹಿಳಾ ಥೆರಪಿಸ್ಟ್'ಗೆ ಗುಪ್ತಾಂಗ ಪ್ರದರ್ಶಿಸಲಾಗಿತ್ತು ಎಂದು ತಮ್ಮ ವಿರುದ್ಧ ಕೇಳಿ ಬಂದಿದ್ದ ಆರೋಪವನ್ನು ವೆಸ್ಟ್'ಇಂಡೀಸ್‌ನ ಸ್ಫೋಟಕ ಬ್ಯಾಟ್ಸ್'ಮನ್ ಕ್ರೀಸ್ ಗೇಲ್ ತಳ್ಳಿಹಾಕಿದ್ದಾರೆ.
ಇದರ ಜತೆಗೆ ತಮ್ಮ ಕುರಿತು ಸುಳ್ಳು ಸುದ್ದಿ ಪ್ರಕಟಿಸಿವೆ ಎಂದು ಆಸ್ಟ್ರೇಲಿಯಾದ ಮಾಧ್ಯಮಗಳ ವಿರುದ್ಧ ಮಾನನಷ್ಟ ಮೊಕದ್ದಮೆ ಸಹ ದಾಖಲಿಸಿದ್ದಾರೆ.
2015ರ ವಿಶ್ವಕಪ್ ವೇಳೆ ಮಸಾಜ್ ಮಾಡಲು ಬಂದಿದ್ದ ಮಹಿಳೆಗೆ ಗೇಲ್ ತಮ್ಮ ಗುಪ್ತಾಂಗ ಪ್ರದರ್ಶಿಸಿದ್ದರು ಎಂದು ಆಸ್ಟ್ರೇಲಿಯಾದ ಕೆಲ ಮಾಧ್ಯಮಗಳು ಗಂಭೀರವಾಗಿ ಆರೋಪಿಸಿದ್ದವು. ಆಸ್ಟ್ರೇಲಿಯಾದ ಬಿಗ್ ಬ್ಯಾಶ್ ಟಿ20 ಲೀಗ್ ವೇಳೆಯೂ ಗೇಲ್ ಭಾರೀ ವಿವಾದಕ್ಕೆ ಸಿಲುಕಿದ್ದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.