
ಚಿಕ್ಕಬಳ್ಳಾಪುರ(ಮಾ.23): ಆಸ್ಪತ್ರೆಯಲ್ಲಿ ರಾತ್ರಿ ಪಾಳಿ ಕರ್ತವ್ಯ ನಿರ್ವಹಿಸುತ್ತಿದ್ದ ಶುಶ್ರೂಷಕಿಯ ಬಳಿ ಸರ್ಕಾರಿ ನೌಕರನೊಬ್ಬ ಕಾಂಡೋಮ್ ಕೇಳಿ ಗೂಸಾ ತಿಂದಿರುವ ಘಟನೆ ತಾಲೂಕಿನ ಪೆರೇಸಂದ್ರ ಆಸ್ಪತ್ರೆಯಲ್ಲಿ ತಡವಾಗಿ ನಡೆದಿದೆ.
ಪೆರೇಸಂದ್ರದ ಸರ್ಕಾರಿ ಆಸ್ಪತ್ರೆಗೆ ಬಂದ ಸರ್ಕಾರಿ ನೌಕರ, ಶುಶ್ರೂಷಕಿಯನ್ನು ಕಾಂಡೋಂ ನೀಡುವಂತೆ ಕೇಳಿದ್ದಾನೆ. ಅದಕ್ಕೆ ಅವರು ಪಕ್ಕದಲ್ಲಿರುವ ಪೆಟ್ಟಿಗೆಯಲ್ಲಿ ಕಾಂಡೋಮ್‌ಗಳಿದ್ದು, ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ.
ಇದಕ್ಕೆ ಒಪ್ಪದ ಆರೋಪಿ, ನೀವೇ ತೆಗೆದುಕೊಡಿ ಎಂದು ಕುಡಿದ ಅಮಲಿನಲ್ಲಿ ಜಗಳವಾಡಿದ್ದಾನೆ. ಇದರಿಂದ ಗಾಬರಿಗೊಂಡ ಶುಶ್ರೂಷಕಿ ತನ್ನ ಪತಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಕೂಡಲೇ ಆಸ್ಪತ್ರೆಗೆ ಬಂದ ಪತಿ, ಆರೋಪಿಗೆ ಗೂಸಾ ನೀಡಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಬಳಿಕ ಗ್ರಾಮಸ್ಥರು ಮಧ್ಯಪ್ರವೇಶಿಸಿ ರಾಜೀ-ಸಂಧಾನ ಮಾಡಿಸಿದ್ದಾರೆ ಎಂದು ತಿಳಿದುಬಂದಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.