
ಬೆಂಗಳೂರು[ಮೇ.18]: ಇದೇ ಶನಿವಾರ ಕರ್ನಾಟಕದ ಪಾಲಿಗೆ ಮಹತ್ವದ ದಿನ. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಬಹುಮತ ಸಾಬೀತು ಪಡಿಸುತ್ತಾ ಎಂಬ ಕುತೂಹಲ ಒಂದೆಡೆಯಾದರೆ, ಮತ್ತೊಂದೆಡೆ ರಾಜಸ್ಥಾನ ರಾಯಲ್ಸ್ ತಂಡವನ್ನು ಮಣಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇ ಆಫ್ ಪ್ರವೇಶಿಸುತ್ತಾ ಎಂಬ ಕುತೂಹಲಕ್ಕೆ ತೆರೆ ಬೀಳಲಿದೆ.
ಹೌದು, ಈ ಎರಡೂ ಘಟನೆಗಳಿಗೆ ನಾಳೆ[ಶನಿವಾರ, ಮೇ.19] ಸಂಜೆ ನಾಲ್ಕು ಗಂಟೆಗೆ ಚಾಲನೆ ದೊರಕಲಿದೆ. ಈಗಾಗಲೇ 15ನೇ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು ಬಿಜೆಪಿ ಅತಿದೊಡ್ಡ ಪಕ್ಷ[104 ಸ್ಥಾನ]ವಾಗಿ ಹೊರಹೊಮ್ಮಿದ್ದರೆ, ಕಾಂಗ್ರೆಸ್ 78 ಹಾಗೂ ಜೆಡಿಎಸ್ 38 ಹಾಗೂ ಇತರೆ 2 ಸ್ಥಾನಗಳು ಬಂದಿವೆ. ಈಗಾಗಲೇ ಮುಖ್ಯಮಂತ್ರಿ ಆಗಿ ಪ್ರಮಾಣವಚನ ಸ್ವೀಕರಿಸಿರುವ ಬಿ.ಎಸ್. ಯಡಿಯೂರಪ್ಪ ಮುಂದೆ ಅಗ್ನಿ ಪರೀಕ್ಷೆ ಎದುರಾಗಿದ್ದು ನಾಳೆ ಸಂಜೆ ನಾಲ್ಕು ಗಂಟೆಗೆ ವಿಧಾನಸೌಧದಲ್ಲಿ ಬಹುಮತ ಸಾಭೀತು ಪಡೆಸಬೇಕಿದೆ. ಹೀಗಾಗಿ ಕರ್ನಾಟಕದ ದೃಷ್ಠಿ ನಾಳೆ ಸಂಜೆ 4 ಗಂಟೆಗೆ ವಿಧಾನಸೌಧದತ್ತ ನೆಟ್ಟಿದೆ.
ಇನ್ನು ಮತ್ತೊಂದೆಡೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಈ ಬಾರಿಯ ಐಪಿಎಲ್’ನಲ್ಲಿ ಈ ಸಲ ಕಪ್ ನಮ್ದೆ ಎಂಬ ಹುಮ್ಮಸ್ಸಿನಲ್ಲಿ ಕಣಕ್ಕಿಳಿದು ಸಾಕಷ್ಟು ಏಳು-ಬೀಳುಗಳ ಬಳಿಕ ಸತತ ಮೂರು ಪಂದ್ಯಗಳನ್ನು ಗೆದ್ದು ಪ್ಲೇ ಆಫ್ ಹಂತ ಪ್ರವೇಶಿಸುವ ಉತ್ಸಾಹದಲ್ಲಿದೆ. ಇದೀಗ ನಾಳೆ ಸಂಜೆ 4 ಗಂಟೆಯಿಂದ ಆರಂಭವಾಗಲಿರುವ ರಾಜಸ್ಥಾನ ರಾಯಲ್ಸ್ ವಿರುದ್ಧ ಆರ್’ಸಿಬಿ ಮಾಡು-ಇಲ್ಲವೇ-ಮಡಿ ಪಂದ್ಯದಲ್ಲಿ ಸೆಣಸಲಿದೆ. ರಾಜಸ್ಥಾನ ರಾಯಲ್ಸ್ ವಿರುದ್ಧ ವಿರಾಟ್ ಪಡೆ ಗೆದ್ದರಷ್ಟೇ ಪ್ಲೇ ಆಫ್ ಹಂತ ಪ್ರವೇಶಿಸಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.