
ಮೆಲ್ಬೋರ್ನ್(ನ.22): ಭಾರತ ವಿರುದ್ಧದ ಮೊದಲ ಟಿ20 ಪಂದ್ಯದ ಗೆಲುವಿನ ಬೆನ್ನಲ್ಲೇ, ಇದೀಗ ಆರಂಭಿಕ 2 ಟೆಸ್ಟ್ ಪಂದ್ಯಕ್ಕೆ ತಂಡ ಪ್ರಕಟಿಸಿದೆ. 14 ಸದಸ್ಯರ ತಂಡ ಪ್ರಕಟಿಸಿರುವ ಕ್ರಿಕೆಟ್ ಆಸ್ಟ್ರೇಲಿಯಾ, ಪೀಟರ್ ಹ್ಯಾಂಡ್ಸ್‌ಕಾಂಬ್‌ಗೆ ಮತ್ತೆ ಸ್ಥಾನ ನೀಡಿದೆ.
ಶೆಫೀಲ್ಡ್ ಶೀಲ್ಡ್ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ಮಾರ್ಕಸ್ ಹ್ಯಾರಿಸ್ ಇದೇ ಮೊದಲ ಬಾರಿಗೆ ಆಸ್ಟ್ರೇಲಿಯಾ ತಂಡಕ್ಕ ಆಯ್ಕೆಯಾಗಿದ್ದಾರೆ. ಇಂಜುರಿಯಿಂದ ಚೇತರಿಸಿಕೊಂಡಿರುವ ಉಸ್ಮಾನ್ ಖವಾಜ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಮೊದಲೆರಡು ಟೆಸ್ಟ್‌ಗೆ ಆಸ್ಟ್ರೇಲಿಯಾ ತಂಡ:
ಟಿಮ್ ಪೈನೆ(ನಾಯಕ), ಆ್ಯರೋನ್ ಫಿಂಚ್, ಪ್ಯಾಟ್ ಕಮಿನ್ಸ್, ಪೀಟರ್ ಹ್ಯಾಂಡ್ಸ್‌ಕಾಂಬ್, ಮಾರ್ಕಸ್ ಹ್ಯಾರಿಸ್, ಜೋಶ್ ಹೇಜಲ್‌ವುಡ್, ಟ್ರಾವಿಸ್ ಹೆಡ್, ಉಸ್ಮಾನ್ ಖವಾಜ, ನಥನ್ ಲಿಯೋನ್, ಮಿಚೆಲ್ ಮಾರ್ಶ್, ಶಾನ್ ಮಾರ್ಶ್, ಮಿಚೆಲ್ ಸ್ಟಾರ್ಕ್, ಕ್ರಿಸ್ ಟ್ರೆಮೈನ್, ಪೀಟರ್ ಸಿಡಲ್
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.