
ಬೆಂಗಳೂರು(ಜೂನ್.6): ಟೀಮ್ಇಂಡಿಯಾದ ಕ್ಲಾಸ್ ಪ್ಲೇಯರ್ ಅಜಿಂಕ್ಯ ರಹಾನೆಗೆ ಇಂದು ಹುಟ್ಟುಹಬ್ಬದ ಸಂಭ್ರಮ. 30ನೇ ವಸಂತಕ್ಕೆ ಕಾಲಿಟ್ಟ ರಹಾನೆಗೆ, ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಸೇರಿದಂತೆ ಹಲವು ಕ್ರಿಕೆಟಿಗರು ಶುಭ ಹಾರೈಸಿದ್ದಾರೆ.
ಜೂನ್ 6, 1988ರಲ್ಲಿ ಹುಟ್ಟಿದ ರಹಾನೆ, 2011ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದರು. ಟೆಸ್ಟ್ ಮಾದರಿಯಲ್ಲಿ ಹೆಚ್ಚಿನ ಯಶಸ್ಸು ಕಂಡಿರುವ ರಹಾನೆ, ಜುಲೈ 14 ರಿಂದ ಆರಂಭಗೊಳ್ಳಲಿರುವ ಅಫ್ಘಾನಿಸ್ತಾನ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವನ್ನ ಮುನ್ನಡೆಸಲಿದ್ದಾರೆ.
44 ಟೆಸ್ಟ್ ಪಂದ್ಯಗಳಿಂದ 2883 ರನ್ ಸಿಡಿಸಿರುವ ರಹಾನೆ, 9 ಶತಕ ಹಾಗೂ 12 ಅರ್ಧಶತಕ ಸಿಡಿಸಿದ್ದಾರೆ. ವಿಶೇಷ ಅಂದರೆ, ವಿದೇಶಿ ಪಿಚ್‌ಗಳಲ್ಲಿ ರಹಾನೆ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. 90 ಏಕದಿನ ಪಂದ್ಯಗಳಿಂದ 2962 ರನ್ ದಾಖಲಿಸಿರುವ ರಹಾನೆ, 3 ಶತಕ ಹಾಗೂ 24 ಅರ್ಧಶತಕ ಬಾರಿಸಿದ್ದಾರೆ.
31ನೇ ವರ್ಷಕ್ಕೆ ಕಾಲಿಟ್ಟಿರುವ ರಹಾನೆಗೆ ಈ ವರ್ಷ ಸಂತಸತ ತರಲಿ. ಇಷ್ಟೇ ಅಲ್ಲ ಅತ್ಯುತ್ತಮ ಪ್ರದರ್ಶನದ ಮೂಲಕ ಮೂರು ಮಾದರಿಯಲ್ಲೂ ಸ್ಥಾನ ಭದ್ರಪಡಿಸಿಕೊಳ್ಳಲಿ ಅನ್ನೋದೆ ಅಭಿಮಾನಿಗಳ ಆಶಯ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.