
ಗಾಲೆ[ನ.06]: ಶ್ರೀಲಂಕಾ-ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ರಂಗನಾ ಹೆರಾತ್ ಪಾಲಿನ ವಿದಾಯದ ಪಂದ್ಯವಾಗಿದ್ದು, ಎಡಗೈ ಸ್ಪಿನ್ನರ್ ಈ ಪಂದ್ಯವನ್ನು ಸ್ಮರಣೀಯವಾಗಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಗಾಲೆ ಅಂತರಾಷ್ಟ್ರೀಯ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಹೆರಾತ್ ಇತಿಹಾಸ ಬರೆದಿದ್ದು, ಈ ಮೈದಾನದಲ್ಲೇ ನೂರು ವಿಕೆಟ್ ಕಬಳಿಸಿದ ಸಾಧನೆ ಮಾಡಿದ್ದಾರೆ. ಇದರೊಂದಿಗೆ ದಿಗ್ಗಜ ಕ್ರಿಕೆಟಿಗರಾದ ಮುತ್ತಯ್ಯ ಮುರುಳೀಧರನ್, ಜೇಮ್ಸ್ ಆ್ಯಂಡರ್’ಸನ್ ಬಳಿಕ ಮೈದಾನವೊಂದರಲ್ಲಿ ನೂರು ವಿಕೆಟ್ ಕಬಳಿಸಿದ ವಿಶ್ವದ ಮೂರನೇ ಬೌಲರ್ ಎನ್ನುವ ಹೆಗ್ಗಳಿಕೆಗೆ ಹೆರಾತ್ ಪಾತ್ರರಾಗಿದ್ದಾರೆ.
ಇದನ್ನು ಓದಿ: ಒಂದೇ ಔಟ್’ಗೆ ಆ್ಯಂಡರ್’ಸನ್ ಖಾತೆಗೆ 4 ದಾಖಲೆ ಸೇರ್ಪಡೆ
ಟೆಸ್ಟ್ ಕ್ರಿಕೆಟ್’ನಲ್ಲಿ 800 ವಿಕೆಟ್ ಕಬಳಿಸಿದ ಸಾಧನೆ ಮಾಡಿರುವ ಮುತ್ತಯ್ಯ ಗಾಲೆ[111], ಕ್ಯಾಂಡಿ[117] ಹಾಗೂ ಕೊಲಂಬೊ[166] ಮೈದಾನದಲ್ಲಿ ನೂರು ವಿಕೆಟ್ ಕಬಳಿಸಿದ ಸಾಧನೆ ಮಾಡಿದ್ದರೆ, ಜೇಮ್ಸ್ ಆ್ಯಂಡರ್’ಸನ್ ಲಾರ್ಡ್ಸ್[103] ಮೈದಾನದಲ್ಲಿ ನೂರು ವಿಕೆಟ್ ಕಬಳಿಸಿದ ಸಾಧನೆ ಮಾಡಿದ್ದಾರೆ. ಇದೀಗ ಈ ಪಟ್ಟಿಗೆ ರಂಗನಾ ಹೆರಾತ್[100*] ಸೇರ್ಪಡೆಯಾಗಿದ್ದಾರೆ.
ಇಂದಿನಿಂದ ಆರಂಭವಾದ ಶ್ರೀಲಂಕಾ-ಇಂಗ್ಲೆಂಡ್ ನಡುವಿನ ಮೊದಲ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಆರಂಭಿಸಿರುವ ಇಂಗ್ಲೆಂಡ್ ಊಟದ ವಿರಾಮದ ವೇಳೆಗೆ 5 ವಿಕೆಟ್ ಕಳೆದುಕೊಂಡು 113 ರನ್ ಬಾರಿಸಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.