ಚೆಹಲ್ ದಾಳಿಗೆ ಆಸಿಸ್ ತತ್ತರ; ಅಲ್ಪ ಮೊತ್ತಕ್ಕೆ ಆಲೌಟ್

Published : Jan 18, 2019, 12:19 PM ISTUpdated : Jan 18, 2019, 12:24 PM IST
ಚೆಹಲ್ ದಾಳಿಗೆ ಆಸಿಸ್ ತತ್ತರ; ಅಲ್ಪ ಮೊತ್ತಕ್ಕೆ ಆಲೌಟ್

ಸಾರಾಂಶ

ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಆಸ್ಟ್ರೇಲಿಯಾದ ಆರಂಭ ಅಷ್ಟೇನೂ ಉತ್ತಮವಾಗಿರಲಿಲ್ಲ.ಮೂರನೇ ಓವರ್’ನಲ್ಲೇ ಅಲೆಕ್ಸ್ ಕ್ಯಾರಿ ವಿಕೆಟ್ ಪಡೆದ ಭುವಿ ಟೀಂ ಇಂಡಿಯಾಗೆ ಮೊದಲ ಯಶಸ್ಸು ದೊರಕಿಸಿಕೊಟ್ಟರು.

ಮೆಲ್ಬರ್ನ್[ಜ.18]: ಮಣಿಕಟ್ಟು ಸ್ಪಿನ್ನರ್ ಯುಜುವೇಂದ್ರ ಚೆಹಲ್ ಮಿಂಚಿನ ದಾಳಿಗೆ ತತ್ತರಿಸಿದ ಆಸ್ಟ್ರೇಲಿಯಾ ಕೇವಲ 230 ರನ್’ಗಳಿಗೆ ಸರ್ವಪತನ ಕಂಡಿದೆ. ನಿರ್ಣಾಯಕ ಪಂದ್ಯದಲ್ಲಿ ಆಸಿಸ್ ಬೆನ್ನೆಲುಬು ಮುರಿದ ಚೆಹಲ್ 6 ವಿಕೆಟ್ ಕಬಳಿಸಿದರೆ, ವೇಗಿಗಳಾದ ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ ತಲಾ 2 ವಿಕೆಟ್ ಪಡೆದರು. ಈ ಪಂದ್ಯ ಉಭಯ ತಂಡಗಳ ಪಾಲಿಗೆ ನಿರ್ಣಾಯಕವಾಗಿದ್ದು, ಭಾರತ 231 ರನ್ ಗುರಿ ತಲುಪಿದರೆ ಸರಣಿ ಕೈವಶ ಮಾಡಿಕೊಳ್ಳಲಿದೆ. ಭಾರತ ಇದುವರೆಗೂ ಆಸಿಸ್ ನೆಲದಲ್ಲಿ ದ್ವಿಪಕ್ಷೀಯ ಸರಣಿ ಜಯಿಸಿಲ್ಲ. ಈ ಪಂದ್ಯವನ್ನು ವಿರಾಟ್ ಪಡೆ ಜಯಿಸಿದರೆ ಹೊಸ ಇತಿಹಾಸ ನಿರ್ಮಾಣವಾಗಲಿದೆ.

ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಆಸ್ಟ್ರೇಲಿಯಾದ ಆರಂಭ ಅಷ್ಟೇನೂ ಉತ್ತಮವಾಗಿರಲಿಲ್ಲ.ಮೂರನೇ ಓವರ್’ನಲ್ಲೇ ಅಲೆಕ್ಸ್ ಕ್ಯಾರಿ ವಿಕೆಟ್ ಪಡೆದ ಭುವಿ ಟೀಂ ಇಂಡಿಯಾಗೆ ಮೊದಲ ಯಶಸ್ಸು ದೊರಕಿಸಿಕೊಟ್ಟರು. ಇದಾದ ಕೆಲಹೊತ್ತಿನಲ್ಲೇ ಫಿಂಚ್ ಕೂಡಾ ಭುವಿಗೆ ಎರಡನೇ ಬಲಿಯಾದರು. ಈ ಸರಣಿಯಲ್ಲಿ ಫಿಂಚ್ ಮೂರನೇ ಬಾರಿಗೆ ಭುವಿಗೆ ವಿಕೆಟ್ ಒಪ್ಪಿಸಿದರು. 

ಜಾದೂ ಮಾಡಿದ ಚೆಹಲ್: ಪಂದ್ಯದ 24ನೇ ಓವರ್’ನಲ್ಲಿ ದಾಳಿಗಿಳಿದ ಚೆಹಲ್ ಮೊದಲ ಓವರ್’ನಲ್ಲೇ 2 ವಿಕೆಟ್ ಕಬಳಿಸುವ ಮೂಲಕ ಆಸಿಸ್’ಗೆ ಎಚ್ಚರಿಕೆ ನೀಡಿದರು. ಇದಾದ ಬಳಿಕ  ನಿರಂತರ ವಿಕೆಟ್ ಕಬಳಿಸುತ್ತಾ ಸಾಗಿದ ಚೆಹಾಲ್ ಎರಡನೇ ಬಾರಿಗೆ 5+ ವಿಕೆಟ್ ಸಾಧನೆ ಮಾಡಿದರು. ಕೇವಲ 42 ರನ್ ನೀಡಿ ಆಸಿಸ್’ನ ಪ್ರಮುಖ 6 ವಿಕೆಟ್ ಕಬಳಿಸುವಲ್ಲು ಚೆಹಲ್ ಯಶಸ್ವಿಯಾದರು. ಈ ಮೂಲಕ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಪಂದ್ಯವೊಂದರಲ್ಲಿ 6 ವಿಕೆಟ್ ಕಬಳಿಸಿದ ಮೊದಲ ಭಾರತೀಯ ಸ್ಪಿನ್ನರ್ ಎನ್ನುವ ಕೀರ್ತಿಗೆ ಚೆಹಲ್ ಪಾತ್ರರಾದರು. ಈ ಮೊದಲು 1991ರಲ್ಲಿ ರವಿಶಾಸ್ತ್ರಿ 15 ರನ್ ನೀಡಿ 5 ವಿಕೆಟ್ ಕಬಳಿಸಿದ್ದರು. 

ಪೀಟರ್ ಹ್ಯಾಂಡ್ಸ್’ಕಂಬ್ ಏಕಾಂಗಿ ಹೋರಾಟ: ಆಸಿಸ್ ಪರ ಖ್ವಾಜಾ, ಮಾರ್ಷ್ ಉತ್ತಮ ಜತೆಯಾಟವಾಡಿದಾದರೂ ದೊಡ್ಡ ಮೊತ್ತ ಪೇರಿಸಲು ವಿಫಲವಾದರು. ಆದರೆ ಪೀಟರ್ ಹ್ಯಾಂಡ್ಸ್’ಕಂಬ್ 58 ರನ್ ಬಾರಿಸಿ ತಂಡಕ್ಕೆ ಆಸರೆಯಾದರು. ಹ್ಯಾಂಡ್ಸ್’ಕಂಬ್, ಚೆಹಲ್’ಗೆ ವಿಕೆಟ್ ಒಪ್ಪಿಸುವ ಮುನ್ನ 63 ಎಸೆತಗಳನ್ನು ಎದುರಿಸಿ 2 ಬೌಂಡರಿ ಸಹಿತ 58 ರನ್ ಬಾರಿಸಿದರು. 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದೇಶದ ಅಗ್ರ ಟಿ20 ಟೂರ್ನಿಯಲ್ಲೇ ಮ್ಯಾಚ್‌ ಫಿಕ್ಸಿಂಗ್‌, ನಾಲ್ವರು ಕ್ರಿಕೆಟಿಗರ ಸಸ್ಪೆಂಡ್‌ ಮಾಡಿ ತನಿಖೆಗೆ ಆದೇಶಿಸಿದ ಬಿಸಿಸಿಐ!
ಹೃತಿಕ್‌ ರೋಶನ್‌ 'ಕ್ರಿಶ್‌' ಸಿನಿಮಾದಲ್ಲಿ ಬಾಲನಟಿಯಾಗಿದ್ರಾ ಧೋನಿ ಪತ್ನಿ ಸಾಕ್ಷಿ?