
ಅಡಿಲೇಡ್[ಡಿ.11]: ಭಾರತದ ಆರಂಭಿಕ ಹಾಗೂ ಯುವ ಆಟಗಾರ ಪೃಥ್ವಿ ಶಾ, ನೋವಿನಿಂದ ಶೀಘ್ರವಾಗಿ ಚೇತರಿಸಿಕೊಳ್ಳುತ್ತಿದ್ದು ಶುಕ್ರವಾರದಿಂದ ಆರಂಭವಾಗಲಿರುವ 2ನೇ ಟೆಸ್ಟ್‌ಗೆ ಮರಳುವ ಸಾಧ್ಯತೆಗಳಿವೆ.
ಆಸ್ಟ್ರೇಲಿಯಾ ಇಲೆವೆನ್ ವಿರುದ್ಧದ ಅಭ್ಯಾಸ ಪಂದ್ಯದ ವೇಳೆ ಕ್ಯಾಚ್ ಹಿಡಿಯುವ ವೇಳೆ ಪಾದದ ಗಾಯಕ್ಕೆ ತುತ್ತಾಗಿದ್ದರು. ಪೃಥ್ವಿ, ತಮ್ಮ ಫಿಟ್ನೆಸ್ ಹೆಚ್ಚಿಸಿಕೊಳ್ಳಲು ಸೋಮವಾರ ತಮ್ಮ ಎಡಗಾಲಿನ ಪಾದಕ್ಕೆ ಪಟ್ಟಿ ಕಟ್ಟಿಕೊಂಡು ಓಡುವ ಅಭ್ಯಾಸ ನಡೆಸಿದರು. ಒಂದು ವೇಳೆ ಪೂರ್ಣ ಚೇತರಿಸಿಕೊಳ್ಳದೇ ಪರ್ತ್ ಟೆಸ್ಟ್‌ಗೆ ಮರಳಲು ಸಾಧ್ಯವಾಗದಿದ್ದರೆ, ಮೆಲ್ಬರ್ನ್ ಟೆಸ್ಟ್‌ನಲ್ಲಿ ಆಡುವ ಸಾಧ್ಯತೆ ಹೆಚ್ಚಿದೆ.
ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ ಪರ ಪದಾರ್ಪಣೆ ಮಾಡಿದ್ದ ಪೃಥ್ವಿ, ಚೊಚ್ಚಲ ಪಂದ್ಯದಲ್ಲೇ ಶತಕ ಸಿಡಿಸಿ ಗಮನ ಸೆಳೆದಿದ್ದರು. ಅಲ್ಲದೇ ಸರಣಿ ಶ್ರೇಷ್ಠ ಗೌರವಕ್ಕೂ ಭಾಜನರಾಗಿದ್ದರು. ಪೃಥ್ವಿ ಅನುಪಸ್ಥಿತಿಯಲ್ಲಿ ಆರಂಭಿಕರಾಗಿ ಕಣಕ್ಕಿಳಿದಿದ್ದ ಮರುಳಿ ವಿಜಯ್-ಕೆ.ಎಲ್ ರಾಹುಲ್ ನಿರೀಕ್ಷಿತ ಪ್ರದರ್ಶನ ತೋರಲು ವಿಫಲವಾಗಿದ್ದರು. ವಿಜಯ್ 11&18 ರನ್ ಬಾರಿಸಿದ್ದರೆ, ರಾಹುಲ್ 02&44 ರನ್ ಬಾರಿಸಿದ್ದರು. ಇದೀಗ ಪೃಥ್ವಿ ಆಗಮನ ಯಾರ ಸ್ಥಾನಕ್ಕೆ ಕುತ್ತು ಬರಲಿದೆ ಎನ್ನುವುದನ್ನು ಕಾದು ನೋಡಬೇಕಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.