ಐಪಿಎಲ್ ವೇಳಾಪಟ್ಟಿ ಬದಲು..? ನಿಗದಿಗಿಂತ ಮುಂಚೆ ಐಪಿಎಲ್ ಆರಂಭ..?

By Web DeskFirst Published Nov 10, 2018, 11:32 AM IST
Highlights

ಇದೀಗ ವಿಶ್ವಕಪ್‌ಗೂ ಮುನ್ನ ಆಟಗಾರರಿಗೆ ಕನಿಷ್ಠ 2 ವಾರಗಳ ವಿಶ್ರಾಂತಿ ಸಿಗಬೇಕು ಎನ್ನುವ ದೃಷ್ಟಿಯಿಂದ 2019ರ ಐಪಿಎಲ್‌ ಪಂದ್ಯಾವಳಿಯನ್ನು ಒಂದು ವಾರ ಮುಂಚಿತವಾಗಿಯೇ ಆರಂಭಿಸಲು ಬಿಸಿಸಿಐ ಚಿಂತನೆ ನಡೆಸಿದೆ ಎನ್ನಲಾಗಿದೆ.

ಮುಂಬೈ(ನ.10]: 2019ರ ಐಸಿಸಿ ಏಕದಿನ ವಿಶ್ವಕಪ್‌ಗೆ ಭಾರತ ತಂಡ ಸಿದ್ಧತೆ ಆರಂಭಿಸಿರುವ ಬೆನ್ನಲ್ಲೇ, 12ನೇ ಆವೃತ್ತಿಯ ಐಪಿಎಲ್‌ ಕುರಿತ ಗೊಂದಲ ಮುಂದುವರಿದಿದೆ. ಇತ್ತೀಚೆಗಷ್ಟೇ ನಾಯಕ ವಿರಾಟ್‌ ಕೊಹ್ಲಿ, ಐಪಿಎಲ್‌ನಿಂದ ಪ್ರಮುಖ ವೇಗದ ಬೌಲರ್‌ಗಳಿಗೆ ವಿಶ್ರಾಂತಿ ನೀಡಬೇಕು ಎಂದು ಸುಪ್ರೀಂ ಕೋರ್ಟ್‌ ನೇಮಿತ ಬಿಸಿಸಿಐ ಆಡಳಿತ ಸಮಿತಿ ಮುಂದೆ ಪ್ರಸ್ತಾಪವಿಟ್ಟಿದ್ದರು. 

2019 ಐಪಿಎಲ್ ಟೂರ್ನಿ ಆಡಲ್ಲ ಟೀಂ ಇಂಡಿಯಾ ಬೌಲರ್ಸ್?

ಇದೀಗ ವಿಶ್ವಕಪ್‌ಗೂ ಮುನ್ನ ಆಟಗಾರರಿಗೆ ಕನಿಷ್ಠ 2 ವಾರಗಳ ವಿಶ್ರಾಂತಿ ಸಿಗಬೇಕು ಎನ್ನುವ ದೃಷ್ಟಿಯಿಂದ 2019ರ ಐಪಿಎಲ್‌ ಪಂದ್ಯಾವಳಿಯನ್ನು ಒಂದು ವಾರ ಮುಂಚಿತವಾಗಿಯೇ ಆರಂಭಿಸಲು ಬಿಸಿಸಿಐ ಚಿಂತನೆ ನಡೆಸಿದೆ ಎನ್ನಲಾಗಿದೆ. ವಿಶ್ವಕಪ್‌ನಂತಹ ಮಹತ್ವದ ಪಂದ್ಯಾವಳಿಗೂ ಮುನ್ನ ಆಟಗಾರರಿಗೆ ವಿಶ್ರಾಂತಿ ಅಗತ್ಯವಿದೆ ಎಂದು ವಿರಾಟ್‌ ಹಾಗೂ ಕೋಚ್‌ ರವಿಶಾಸ್ತ್ರಿ, ಬಿಸಿಸಿಐಗೆ ಮನವರಿಕೆ ಮಾಡಿಕೊಟ್ಟಿದ್ದಾರೆ ಎಂದು ವರದಿಗಳು ತಿಳಿಸಿವೆ. ಹೀಗಾಗಿ, ಮಾ.29ರಂದು ಆರಂಭಗೊಳ್ಳಬೇಕಿರುವ ಐಪಿಎಲ್‌ ಮಾ.23ರಂದೇ ಶುರುವಾಗಲಿದೆ ಎಂದು ಮೂಲಗಳು ತಿಳಿಸಿವೆ. 

ಐಪಿಎಲ್ 2019 ಆಟಗಾರರ ಹರಾಜು ದಿನಾಂಕ ಪ್ರಕಟ-ಸಂಪ್ರದಾಯ ಮುರಿದ ಬಿಸಿಸಿಐ!

ಮೇ 19ರಂದು ಫೈನಲ್‌ ಪಂದ್ಯ ನಿಗದಿಯಾಗಿದೆ. ಒಂದೊಮ್ಮೆ ಮಾ.23ಕ್ಕೇ ಟೂರ್ನಿ ಆರಂಭಗೊಂಡರೆ, ಫೈನಲ್‌ ಸಹ ಒಂದು ವಾರ ಮೊದಲೇ ನಡೆಯಲಿದೆ. ಮೇ 30ಕ್ಕೆ ಇಂಗ್ಲೆಂಡ್‌ನಲ್ಲಿ ವಿಶ್ವಕಪ್‌ ಆರಂಭಗೊಳ್ಳಲಿದ್ದು, ಭಾರತ ತಂಡ ಜೂ.5ರಂದು ದಕ್ಷಿಣ ಆಫ್ರಿಕಾ ವಿರುದ್ಧ ಸೌಥಾಂಪ್ಟನ್‌ನಲ್ಲಿ ತನ್ನ ಮೊದಲ ಪಂದ್ಯವನ್ನು ಆಡಲಿದೆ.

click me!