ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಬ್ಯಾಟಿಂಗ್ ಹಾಗೂ ನಾಯಕತ್ವಕ್ಕೆ ವೆಸ್ಟ್ ಇಂಡೀಸ್ ದಿಗ್ಗಜ ವಿವ್ ರಿಚರ್ಡ್ಸ್ ಫುಲ್ ಮಾರ್ಕ್ಸ್ ನೀಡಿದ್ದಾರೆ. ಅದರಲ್ಲೂ ಕೊಹ್ಲಿ ಬ್ಯಾಟಿಂಗ್ ಕುರಿತು ರಿಚರ್ಡ್ಸ್ ಹೇಳಿದ್ದೇನು? ಇಲ್ಲಿದೆ ವಿವರ.
ಮೆಲ್ಬರ್ನ್(ಡಿ.27): ವಿರಾಟ್ ಕೊಹ್ಲಿ ಅಗ್ರೆಸ್ಸಿವ್ ನಾಯಕತ್ವ ಹಾಗೂ ಸ್ಲೆಡ್ಜಿಂಗ್ ತಂಡಕ್ಕೆ ಸಹಕಾರಿಯಾಗಲಿದೆ ಎಂದು ವೆಸ್ಟ್ಇಂಡೀಸ್ ದಿಗ್ಗಜ ಕ್ರಿಕೆಟಿಗ ವಿವ್ ರಿಚರ್ಡ್ಸ್ ಹೇಳಿದ್ದಾರೆ. ಈ ಹಿಂದೆ ಟೀಂ ಇಂಡಿಯಾ ನಾಲ್ವರು ಸ್ಪಿನ್ನರ್‌ಗಳನ್ನ ಕಣಕ್ಕಿಳಿಸುತಿತ್ತು. ಆದರೆ ಕೊಹ್ಲಿ ನಾಲ್ವರು ವೇಗಿಗಳನ್ನ ಆಡಿಸಿದ್ದಾರೆ. ಇದು ಉತ್ತಮ ಬೆಳೆವಣಿಗೆ ಎಂದಿದ್ದಾರೆ.
ಇದನ್ನೂ ಓದಿ: ಹುಟ್ಟ ಹಬ್ಬ ಆಚರಿಸಿಕೊಂಡ ಸಲ್ಮಾನ್ ಖಾನ್‌ಗೆ ಕ್ರಿಕೆಟಿಗರ ವಿಶ್!
ಕೊಹ್ಲಿ ಬ್ಯಾಟಿಂಗ್ ನನ್ನ ಆಟವನ್ನೇ ನೆನಪಿಸುವಂತಿದೆ ಎಂದಿದ್ದಾರೆ. ನಾನು ಕೊಹ್ಲಿಯ ದೊಡ್ಡ ಅಭಿಮಾನಿ. ಆಕ್ರಮಣಕಾರಿ ಮನೋಭಾವ ನನಗಿಷ್ಟ. ಆಸ್ಟ್ರೇಲಿಯಾ ನೆಲದಲ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಿರುವ ಕೊಹ್ಲಿ ಆಟವೇ ಖುಷಿ ನೀಡುತ್ತೆ ಎಂದು ರಿಚರ್ಡ್ಸ್ ಹೇಳಿದ್ದಾರೆ.
ಇದನ್ನೂ ಓದಿ: ಆಸ್ಟ್ರೇಲಿಯಾ ವಿರುದ್ಧ ಅಬ್ಬರಿಸಿದ ಮಯಾಂಕ್‌ಗೆ ಕಿಚ್ಚ ಸುದೀಪ್ ಟ್ವೀಟ್!
ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಬ್ಯಾಟಿಂಗ್‌ನ್ನ ಆಸ್ಟ್ರೇಲಿಯಾ ದಿಗ್ಗಜ ಡಾನ್ ಬ್ರಾಡ್ಮನ್ ನೆನಪಿಸಿದ್ದರು. ಸಚಿನ್ ನನ್ನಂತೆ ಆಡುತ್ತಿದ್ದಾರೆ ಎಂದಿದ್ದರು. ಇದೀಗ ವಿರಾಟ್ ಕೊಹ್ಲಿಗೆ ವಿಂಡೀಸ್ ದಿಗ್ಗಜ ಇದೇ ಮಾತನ್ನ ಹೇಳಿದ್ದಾರೆ. ಮೆಲ್ಬರ್ನ್ ಟೆಸ್ಟ್‌ನಲ್ಲಿ ಭಾರತ ಇನ್ನಷ್ಟು ಪ್ರಯತ್ನ ಮಾಡಬೇಕಿದೆ ಎಂದು ಸಲಹೆ ನೀಡಿದ್ದಾರೆ.