ಕ್ರಿಕೆಟ್ ಸೀಕ್ರೆಟ್ಸ್: ಮಾಜಿ ನಾಯಕ, ಕನ್ನಡಿಗ ಅನಿಲ್ ಕುಂಬ್ಳೆಗೆ ಬರ್ತ್‌ಡೇ ಸಂಭ್ರಮ!

By Web DeskFirst Published Oct 17, 2018, 5:56 PM IST
Highlights

ಕ್ರಿಕೆಟ್‌ನಲ್ಲಿ ಪ್ರತಿ ದಿನವೂ ಒಂದಲ್ಲ ಒಂದು ದಾಖಲೆಗಳು ನಿರ್ಮಾಣವಾಗುತ್ತೆ. ಇಂತಹ ದಾಖಲೆಗಳು, ಐತಿಹಾಸಿಕ ನಿಮಿಷಗಳನ್ನ ಮೆಲುಕು ಹಾಕುವ ವಿಶೇಷ ಪ್ರಯತ್ನವೇ ಕ್ರಿಕೆಟ್ ಸೀಕ್ರೆಟ್ಸ್. ಹಾಗಾದರೆ ಅಕ್ಟೋಬರ್ 17 ಸ್ಪೆಷಾಲಿಟಿ ಏನು? ಇಲ್ಲಿದೆ ವಿವರ.
 

ಬೆಂಗಳೂರು(ಅ.17): ಟೀಂ ಇಂಡಿಯಾ ಮಾಜಿ ನಾಯಕ, ದಿಗ್ಗಜ ಸ್ಪಿನ್ನರ್ ಅನಿಲ್ ಕುಂಬ್ಳೆಗೆ ಇಂದು ಹುಟ್ಟು ಹಬ್ಬದ ಸಂಭ್ರಮ. ಅಕ್ಟೋಬರ್ 17, 1970ರಲ್ಲಿ ಹುಟ್ಟಿದ ಅನಿಲ್ ಕುಂಬ್ಳೆ ಇಂದು 48ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. 

1990ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ಅನಿಲ್ ಕುಂಬ್ಳೆ, ಟೆಸ್ಟ್ ಕ್ರಿಕೆಟ್‌ನಲ್ಲಿ 619 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಟೆಸ್ಟ್‌ನಲ್ಲಿ ಗರಿಷ್ಠ ವಿಕೆಟ್ ಕಬಳಿಸಿದ 3ನೇ ಬೌಲರ್ ಅನ್ನೋ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

1999ರಲ್ಲಿ ನಡೆದ ದೆಹಲಿ ಟೆಸ್ಟ್ ಪಂದ್ಯದಲ್ಲಿ ಅನಿಲ್ ಕುಂಬ್ಳೆ, ಎದುರಾಳಿ ಪಾಕಿಸ್ತಾನದ ಎಲ್ಲಾ 10 ವಿಕೆಟ್ ಕಬಳಿಸಿ ದಾಖಲೆ ಬರೆದಿದ್ದರು. 2007ರಲ್ಲಿ ಇಂಗ್ಲೆಂಡ್‌ನ ಒವಲ್ ಮೈದಾನದಲ್ಲಿ ಶತಕ ಸಿಡಿಸಿ ಮಿಂಚಿದ್ದರು.

2008ರಲ್ಲಿ ಆಸ್ಟ್ರೇಲಿಯಾ ವಿರುದ್ದದ ಟೆಸ್ಟ್ ಪಂದ್ಯದಲ್ಲಿ ಕುಂಬ್ಳೆ ಕ್ರಿಕೆಟ್‌ಗೆ ವಿದಾಯ ಹೇಳಿದರು. ಬಳಿಕ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಕುಂಬ್ಳೆ, ಟೀಂ ಇಂಡಿಯಾ ಮುಖ್ಯ ಕೋಚ್ ಆಗಿಯೂ ಅದ್ವಿತೀಯ ಸಾಧನೆ ಮಾಡಿದ್ದಾರೆ. 48ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ತಿರೋ ಕುಂಬ್ಳೆಗೆ ಹ್ಯಾಪಿ ಬರ್ತ್‌ಡೇ.

ಅರವಿಂದ್ ಡಿಸಿಲ್ವ:
ಶ್ರೀಲಂಕಾ ತಂಡದ ಮಾಜಿ ಕ್ರಿಕೆಟಿಗ, ವಿಶ್ವಕಪ್ ವಿಜೇತ ತಂಡದ ಪ್ರಮುಖ ಬ್ಯಾಟ್ಸ್‌ಮನ್ ಅರವಿಂದ್ ಡಿಸಿಲ್ವ ಇಂದು 53ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. 1996ರ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದ ಅರವಿಂದ್ ಡಿಸಿಲ್ವ ಏಕದಿನದಲ್ಲಿ 9284 ರನ್ ಸಿಡಿಸಿದ್ದಾರೆ.

click me!