
ಬೆಂಗಳೂರು(ಜು.23): ಟೀಂ ಇಂಡಿಯಾ ಯುವ ಸ್ಪಿನ್ನರ್ ಯಜುವೇಂದ್ರ ಚೆಹಾಲ್‌ಗೆ ಇಂದು ಹುಟ್ಟುಹಬ್ಬದ ಸಂಭ್ರಮ. 28ನೇ ವಯಸ್ಸಿಗೆ ಕಾಲಿಟ್ಟ ಯಜುವೇಂದ್ರ ಚೆಹಾಲ್, ಸದ್ಯ ಭಾರತ ನಿಗಧಿತ ತಂಡದ ಖಾಯಂ ಸದಸ್ಯನಾಗಿ ಸ್ಥಾನ ಪಡೆದಿದ್ದಾರೆ.
ಹರಿಯಾಣ ಮೂಲದ ಯಜುವೇಂದ್ರ ಚೆಹಾಲ್ ಜನಪ್ರೀಯವಾಗಿದ್ದು ಐಪಿಎಲ್ ಟೂರ್ನಿಯಲ್ಲಿ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಮಿಂಚಿನ ಪ್ರದರ್ಶನ ನೀಡಿದ ಚಹಾಲ್, ಟೀಂ ಇಂಡಿಯಾಗೂ ಪದಾರ್ಪಣೆ ಮಾಡಿದರು.
2016ರಲ್ಲಿ ಟೀಂ ಇಂಡಿಯಾಗೆ ಪದಾರ್ಪಣೆ ಮಾಡಿದ ಚೆಹಾಲ್, 26 ಏಕದಿನ ಪಂದ್ಯದಿಂದ 45 ವಿಕೆಟ್ ಹಾಗೂ 26 ಟಿ20 ಪಂದ್ಯದಿಂದ 43 ವಿಕೆಟ್ ಕಬಳಿಸಿದ್ದಾರೆ. ಇತ್ತೀಚೆಗಿನ ಇಂಗ್ಲೆಂಡ್ ಪ್ರವಾಸದ ಟಿ20 ಟೂರ್ನಿಯಲ್ಲಿ ಚೆಹಾಲ್ ಉತ್ತಮ ಪ್ರದರ್ಶನ ನೀಡಿ ಗಮನಸೆಳೆದಿದ್ದರು. ಇದೀಗ 28ನೇ ವರ್ಷದ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿರುವ ಚೆಹಾಲ್‌ಗೆ ಹುಟ್ಟುಹಬ್ಬದ ಶುಭಾಶಯಗಳು.
ಮಹಿಳಾ ವಿಶ್ವಕಪ್ ಫೈನಲ್ 2017: ಜುಲೈ 23, 2017ರಂದು ಇಂಗ್ಲೆಂಡ್‌ನಲ್ಲಿ ನಡೆದ ಮಹಿಳಾ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನ ಎದುರಿಸಿತ್ತು. ರೋಚಕ ಹೋರಾಟದಲ್ಲಿ ಇಂಗ್ಲೆಂಡ್ ನೀಡಿದ 229 ರನ್ ಗುರಿ ಬೆನ್ನಟ್ಟಿದ ಭಾರತ 219ರನ್‌ಗಳಿಗೆ ಆಲೌಟ್ ಆಯಿತು. ಈ ಮೂಲಕ ಫೈನಲ್‌ನಲ್ಲಿ ಮುಗ್ಗರಿಸಿ ರನ್ನರ್ ಅಪ್ ಪ್ರಶಸ್ತಿ ಪಡದುಕೊಂಡಿತು.
ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಸೋತರೂ, ಟೀಂ ಇಂಡಿಯಾ ಮಹಿಳಾ ತಂಡದ ಸಾಧನೆಗೆ ಭಾರಿ ಮೆಚ್ಚುಗೆ ವ್ಯಕ್ತವಾಗಿತ್ತು. ಭಾರತದ ವಿಶ್ವಕಪ್ ಹೋರಾಟದಲ್ಲಿ ಕರ್ನಾಟಕದ ವೇದಾ ಕೃಷ್ಣಮೂರ್ತಿ ಹಾಗೂ ರಾಜೇಶ್ವರಿ ಗಾಯಕ್ವಾಡ್ ಪ್ರಮುಖ ಪಾತ್ರ ನಿರ್ವಹಿಸಿದ್ದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.