ತಂಡದ ಆಯ್ಕೆ ಎಡವಟ್ಟು -ಕೊಹ್ಲಿ ,ಶಾಸ್ತ್ರಿಗೆ ಖಡಕ್ ಎಚ್ಚರಿಕೆ!

By Web DeskFirst Published Dec 19, 2018, 9:24 PM IST
Highlights

ಪರ್ತ್ ಟೆಸ್ಟ್ ಸೋಲಿನ ಬೆನ್ನಲ್ಲೇ, ನಾಯಕ ವಿರಾಟ್ ಕೊಹ್ಲಿ ಹಾಗೂ ಕೋಚ್ ರವಿ ಶಾಸ್ತ್ರಿ ಟೀಂ ಸೆಲೆಕ್ಷನ್ ಕುರಿತು ಅಪಸ್ವರ ಕೇಳಿಬಂದಿದೆ. ಇದೀಗ ಕೊಹ್ಲಿ ಹಾಗೂ ಶಾಸ್ತ್ರಿಗೆ ಖಡಕ್ ಎಚ್ಚರಿಕೆ ನೀಡಲಾಗಿದೆ. ಅಷ್ಟಕ್ಕೂ ವಾರ್ನಿಂಗ್ ನೀಡಿದ್ದು ಯಾರು? ಇಲ್ಲಿದೆ.

ಮೆಲ್ಬೋರ್ನ್(ಡಿ.19): ಆಸ್ಟ್ರೇಲಿಯಾ ವಿರುದ್ದದ ದ್ವಿತೀಯ ಟೆಸ್ಟ್ ಪಂದ್ಯದ ಸೋಲಿಗೆ  ಟೀಂ ಇಂಡಿಯಾ ಪ್ಲೇಯಿಂಗ್ 11 ಆಯ್ಕೆ ಕೂಡ ಒಂದು ಕಾರಣ. ತಂಡದಲ್ಲಿ ಆಯ್ಕೆಯಲ್ಲಿ ಎಡವಟ್ಟು ಮಾಡುತ್ತಿರುವ  ನಾಯಕ ವಿರಾಟ್ ಕೊಹ್ಲಿ ಹಾಗೂ ಕೋಚ್ ರವಿ ಶಾಸ್ತ್ರಿ ವಿರುದ್ಧ ಮಾಜಿ ನಾಯಕ ಸುನಿಲ್ ಗವಾಸ್ಕರ್ ಗರಂ ಆಗಿದ್ದಾರೆ.

ಇದನ್ನೂ ಓದಿ: ಆರ್‌ಸಿಬಿ ಸೇರಿಕೊಂಡ ಸಂತಸ-ಶಿಮ್ರೊನ್ ಹೆಟ್ಮೆರ್ ವೀಡಿಯೋ ವೈರಲ್!

ಕಳಪೆ ಆಸ್ಟ್ರೇಲಿಯಾ ವಿರುದ್ಧ ಸೋಲು ಕಂಡಿರುವ ಭಾರತ ಮುಂದಿನ ಪಂದ್ಯದಲ್ಲಿ ಗೆಲುವು ಸಾಧಿಸದಿದ್ದರೆ, ಕೊಹ್ಲಿ ಹಾಗೂ ಶಾಸ್ತ್ರಿ ಪರಿಣಾಮ ಎದುರಿಸಬೇಕಾಗುತ್ತೆ ಎಂದು ಗವಾಸ್ಕರ್ ಹೇಳಿದ್ದಾರೆ. ತಂಡದಲ್ಲಿ ಆಯ್ಕೆಯಲ್ಲಿ ಮಾಡಿದ ತಪ್ಪಿನಿಂದ ಸೌತ್ಆಫ್ರಿಕಾ ಪ್ರವಾಸದಲ್ಲೂ ಭಾರತ ಸೋಲು ಕಂಡಿತ್ತು. ಇದೀಗ ಆಸ್ಟ್ರೇಲಿಯಾದಲ್ಲೂ ಮುಂದುವರಿದಿದೆ ಎಂದು ಗವಾಸ್ಕರ್ ಹೇಳಿದ್ದಾರೆ.

ಇದನ್ನೂ ಓದಿ: ಐಪಿಎಲ್ ಹರಾಜಿನಲ್ಲಿ ಅನ್‌ಸೋಲ್ಡ್-ಗರಂ ಆದ ಟೀಂ ಇಂಡಿಯಾ ಕ್ರಿಕೆಟಿಗ!

ಸ್ಟೀವ್ ಸ್ಮಿತ್ ಹಾಗೂ ಡೇವಿಡ್ ವಾರ್ನರ್ ಇಲ್ಲದ ಆಸ್ಟ್ರೇಲಿಯಾ ತಂಡದ ವಿರುದ್ದ ಭಾರತ ಆಡುತ್ತಿದೆ. ಇಷ್ಟಾದರೂ ಪರ್ತ್ ಟೆಸ್ಟ್‌ನಲ್ಲಿ ಸೋಲು ಕಂಡಿದೆ ಎಂದರೆ ಅದು ಭಾರತದ ತಪ್ಪಿನಿಂದಲೇ ಆಗಿದೆ. ಪರಿಸ್ಥಿತಿಯ ಲಾಭ ಪಡೆದುಕೊಳ್ಳೋ ಬದಲು ಟೀಂ ಇಂಡಿಯಾ ತಪ್ಪುಗಳನ್ನೇ ಮಾಡುತ್ತಿದೆ ಎಂದು ಗವಾಸ್ಕರ್ ಹೇಳಿದ್ದಾರೆ.

ಇದನ್ನೂ ಓದಿ: ಪರ್ತ್ ಟೆಸ್ಟ್ ಸೋಲು: ಕಾರಣ ಬಿಚ್ಚಿಟ್ಟ ಸೆಹ್ವಾಗ್-ಸಚಿನ್!

click me!