
ನವದೆಹಲಿ: ವಂಚನೆ ಪ್ರಕರಣವೊಂದರಲ್ಲಿ ಭಾರತದ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್‌ಗೆ ಇಲ್ಲಿ ಸ್ಥಳೀಯ ನ್ಯಾಯಾಲಯ ಜಾಮೀನು ಸಹಿತ ವಾರಂಟ್ ಹೊರಡಿಸಿದೆ.
ಗಂಭೀರ್ ಪ್ರಚಾರ ರಾಯಭಾರಿಯಾಗಿದ್ದ ರಿಯಲ್ ಎಸ್ಟೇಟ್ ಸಮೂಹ ರುದ್ರ ಬಿಲ್ಡ್‌ವೆಲ್ ಯೋಜನೆಯ ವಿರುದ್ಧ ವಂಚನೆ, ದುರುಪಯೋಗ ಮತ್ತು ಸಂಚು ರೂಪಿಸಿದ್ದ ಆರೋಪ ದಾಖಲಿಸಲಾಗಿತ್ತು. ಈ ಸಂಬಂಧ ಗಂಭೀರ್ ಕೋರ್ಟ್‌ಗೆ ಹಾಜರಾಗಬೇಕಿತ್ತು. ಆದರೆ ಗಂಭೀರ್ ವಿಚಾರಣೆಗೆ ನಿರಂತರವಾಗಿ ಹಾಜರಾಗದೆ ಇದ್ದಿದ್ದರಿಂದ ಅವರಿಗೆ ವಾರಂಟ್ ನೀಡಲಾಗಿದೆ.
ಗಂಭೀರ್, 2019 ಜನವರಿ 24 ರಂದು ನ್ಯಾಯಾಲಯದ ಮುಂದೆ ಹಾಜರಾಗಬೇಕಿದೆ. ಗೃಹ ನಿರ್ಮಾಣ ಯೋಜನೆಗಾಗಿ 2011ರಲ್ಲಿ ಆಸಕ್ತರಿಂದ ಕೋಟಿಗಟ್ಟಲೆ ಹಣ ಹೂಡಿಕೆ ಮಾಡಿಸಿಕೊಳ್ಳಲಾಗಿತ್ತು. ಈ ಯೋಜನೆ ಆರಂಭವಾಗಿರಲಿಲ್ಲ. ಹೀಗಾಗಿ ಕಂಪೆನಿ ವಿರುದ್ಧ 2016ರಲ್ಲಿ ಪ್ರಕರಣ ದಾಖಲಿಸಲಾಗಿತ್ತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.