ಹಿಂದಿ ನಟ ಕರಣ್ ಜೋಹರ್ ನಡೆಸಿಕೊಡುವ ’ಕಾಫಿ ವಿತ್ ಕರಣ್’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಹಾರ್ದಿಕ್ ಪಾಂಡ್ಯ, ಕಾಮ ಪ್ರಚೋದಕ ಹೇಳಿಕೆ ನೀಡಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದ್ದು, ಹಾರ್ದಿಕ್ ಹೇಳಿಕೆ ವ್ಯಾಪಕ ಟೀಕೆಗೆ ಗುರಿಯಾಗುತ್ತಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಅವರು ಕ್ಷಮೆಯಾಚಿಸಿದ್ದಾರೆ.
ನವದೆಹಲಿ[ಜ.09]: ಖಾಸಗಿ ಚಾನೆಲ್’ವೊಂದರ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ವಿವಾದಾತ್ಮಕ ಹೇಳಿಕೆ ನೀಡಿ ವ್ಯಾಪಕ ಟೀಕೆಗೆ ಗುರಿಯಾಗಿರುವ ಟೀಂ ಇಂಡಿಯಾ ಕ್ರಿಕೆಟಗರಾದ ಹಾರ್ದಿಕ್ ಪಾಂಡ್ಯ ಹಾಗೂ ಕೆ.ಎಲ್ ರಾಹುಲ್’ಗೆ ವಿವರಣೆ ಕೋರಿ ಬಿಸಿಸಿಐ ಶೋಕಾಸ್ ನೋಟಿಸ್ ನೀಡಿದೆ.
ಹಿಂದಿ ನಟ ಕರಣ್ ಜೋಹರ್ ನಡೆಸಿಕೊಡುವ ’ಕಾಫಿ ವಿತ್ ಕರಣ್’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಹಾರ್ದಿಕ್ ಪಾಂಡ್ಯ, ಕಾಮ ಪ್ರಚೋದಕ ಹೇಳಿಕೆ ನೀಡಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದ್ದು, ಹಾರ್ದಿಕ್ ಹೇಳಿಕೆ ವ್ಯಾಪಕ ಟೀಕೆಗೆ ಗುರಿಯಾಗುತ್ತಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಅವರು ಕ್ಷಮೆಯಾಚಿಸಿದ್ದಾರೆ.
ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ಬಿಸಿಸಿಐ, ಪಾಂಡ್ಯ ಹಾಗೂ ರಾಹುಲ್’ಗೆ ಸ್ಪಷ್ಟನೆ ಕೋರಿ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಸಿಸಿಐ ಮುಖ್ಯಸ್ಥ ವಿನೋದ್ ರಾಯ್, ಇಬ್ಬರು ಆಟಗಾರರಿಗೂ ವಿವರಣೆ ನೀಡಲು 24 ಗಂಟೆಗಳ ಕಾಲಾವಕಾಶ ನೀಡಲಾಗಿದೆ ಎಂದು ಹೇಳಿದ್ದಾರೆ.
ಹಾರ್ದಿಕ್ ಪಾಂಡ್ಯ ಇದೀಗ ಆಸ್ಟ್ರೇಲಿಯಾ ವಿರುದ್ಧ ಏಕದಿನ ಸರಣಿಯಾಡಲು ಸಜ್ಜಾಗುತ್ತಿದ್ದು, ಜನವರಿ 12ರಿಂದ ಆರಂಭವಾಗಲಿರುವ ಏಕದಿನ ಪಂದ್ಯದಲ್ಲಿ ಪಾಂಡ್ಯ ಕಣಕ್ಕಿಳಿಯುವ ಸಾಧ್ಯತೆಯಿದೆ. ಕಳೆದ ವರ್ಷ ಯುಎಇನಲ್ಲಿ ನಡೆದ ಏಷ್ಯಾಕಪ್ ಟೂರ್ನಿಯ ವೇಳೆ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಗಾಯಕ್ಕೆ ತುತ್ತಾಗಿದ್ದ ಪಾಂಡ್ಯ ತಂಡದಿಂದ ಹೊರಬಿದ್ದಿದ್ದರು.