
ಇಂದೋರ್(ಮೇ.15): ಶ್ರೀಲಂಕಾ ಎ ಹಾಗೂ ವೆಸ್ಟ್ ಇಂಡೀಸ್ ಎ ವಿರುದ್ದದ ಸರಣಿಗಾಗಿ ಭಾರತ ಎ ತಂಡ ಪ್ರಕಟಿಸಲಾಗಿದೆ. ತಂಡದ ಆಯ್ಕೆ ರಣಜಿ ಹಾಗೂ ದೇಸಿ ಟೂರ್ನಿಗಳಲ್ಲಿ ಸ್ಥಿರ ಪ್ರದರ್ಶನ ನೀಡಿದ ಆಲ್ರೌಂಡರ್ ಜಲಜ್ ಸಕ್ಸೇನಾಗೆ ಆಘಾತ ನೀಡಿದೆ. ಅತ್ಯುತ್ತಮ ಪ್ರದರ್ಶನ ನೀಡಿದ ಜಲಜ್ ಸಕ್ಸೇನಾಗೆ ಕೊಕ್ ನೀಡಲಾಗಿದೆ.
ಇದನ್ನೂ ಓದಿ: ವೆಸ್ಟ್ಇಂಡೀಸ್, ಶ್ರೀಲಂಕಾ ಎ ಸರಣಿಗಾಗಿ ಭಾರತ ಎ ತಂಡ ಪ್ರಕಟ!
ಬಿಸಿಸಿಐ ಭಾರತ ಎ ತಂಡ ಪ್ರಕಟಿಸುತ್ತಿದ್ದಂತೆ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಜಲಜ್ ತೀವ್ರ ನಿರಾಸೆಯಾಗಿದೆ. ಹೀಗಾಗಿ ಟ್ವಿಟರ್ ಮೂಲಕ ನೋವು ತೋಡಿಕೊಂಡಿದ್ದಾರೆ. ನಾನೇನು ತಪ್ಪು ಮಾಡಿದೆ? ನನಗ್ಯಾಕೆ ಈ ಶಿಕ್ಷೆ? ಎಂದು ಮೊದಲು ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ: ಧೋನಿ ವಿರುದ್ಧ ತಿರುಗಿ ಬಿದ್ರಾ ಕುಲ್ದೀಪ್ ಯಾದವ್?
ಮೊದಲ ಟ್ವೀಟ್ ಬಳಿಕ ಜಲಜ್, ತಾನು ಯಾಕೆ ಆಯ್ಕೆಯಾಗಬೇಕು ಅನ್ನೋದನ್ನೂ ಹೇಳಿದ್ದಾರೆ. ಕಳೆದ 5 ವರ್ಷಗಳಲ್ಲಿ ರಣಜಿಯಲ್ಲಿ ಗರಿಷ್ಠ ವಿಕೆಟ್ ಕಬಳಿಸಿದ್ದೇನೆ. 3000ಕ್ಕೂ ಹೆಚ್ಚು ರನ್ ಸಿಡಿಸಿದ್ದೇನೆ. ದೇಸಿ ಟೂರ್ನಿಯಲ್ಲಿ ಗರಿಷ್ಠ ವಿಕೆಟ್, ಅತ್ಯುತ್ತಮ ಆಲ್ರೌಂಡರ್ ಹಾಗೂ ಶತಕ ಹಾಗೂ 8 ವಿಕೆಟ್ ಕಬಳಿಸಿದ ಮೊದಲ ಕ್ರಿಕೆಟಿಗ ಅನ್ನೋ ದಾಖಲೆ ಬರೆದಿದ್ದೇನೆ ಎಂದು ಟ್ವೀಟ್ ಮೂಲಕ ಹೇಳಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.