
ಅಹಮದಾಬಾದ್(ಡಿ.11): ಶುಕ್ರವಾರದಿಂದ ಕಾಣೆಯಾಗಿದ್ದ ಭಾರತ ಕ್ರಿಕೆಟ್ ತಂಡದ ವೇಗಿ ಜಸ್‌ಪ್ರೀತ್ ಬುಮ್ರಾರ, ಅಜ್ಜ ಸಂತೋಕ್ ಸಿಂಗ್ ಬುಮ್ರಾ (84) ಅವರ ಶವ ಇಲ್ಲಿನ ಸಬರಮತಿ ನದಿಯಲ್ಲಿ ಭಾನುವಾರ ಪತ್ತೆಯಾಗಿದೆ.
ಬುಮ್ರಾಗೆ ಜನ್ಮದಿನದ ಶುಭಾಶಯ ಕೋರಲು ಸಂತೋಕ್ ಡಿ.6ರಂದು ಅಹಮದಾಬಾದ್'ಗೆ ಆಗಮಿಸಿದ್ದರು. ಆದರೆ, ಕೌಟುಂಬಿಕ ಮನಸ್ತಾಪದ ಕಾರಣ ಬುಮ್ರಾರ ತಾಯಿ, ಅಜ್ಜ-ಮೊಮ್ಮಗನ ಭೇಟಿಗೆ ಅವಕಾಶ ಮಾಡಿಕೊಟ್ಟಿರಲಿಲ್ಲ ಎಂಬ ಆರೋಪ ಕೇಳಿಬಂದಿತ್ತು.
ಮೊಮ್ಮಗನ ಭೇಟಿ ಅಸಾಧ್ಯವಾದ ಕಾರಣ ಸಂತೋಕ್ ಸಿಂಗ್ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಸ್ಥಳೀಯ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.