
ಆಕ್ಲೆಂಡ್(ಜೂ.22): ನ್ಯೂಜಿಲೆಂಡ್ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್'ಮನ್ ಲ್ಯೂಕ್ ರೊಂಚಿ ಅಂತಾರಾಷ್ಟ್ರೀಯ ಕ್ರಿಕೆಟ್'ಗೆ ವಿದಾಯ ಹೇಳಿದ್ದಾರೆ.
ಕುಟುಂಬದತ್ತ ಹೆಚ್ಚಿನ ಗಮನ ನೀಡಬೇಕಾಗಿರುವ ಕಾರಣ ಈ ನಿರ್ಧಾರ ಕೈಗೊಂಡಿರುವುದಾಗಿ ರೊಂಚಿ ತಿಳಿಸಿದ್ದಾರೆ.
ವಿಶೇಷವೆಂದರೆ ಕಿವೀಸ್ ಪರ ಆಡುವ ಮೊದಲು ರೊಂಚಿ, ಆಸ್ಟ್ರೇಲಿಯಾ ತಂಡದಲ್ಲಿ ಆಡಿದ್ದರು.
2008ರಲ್ಲಿ ಆಸ್ಟ್ರೇಲಿಯಾ ಪರ ಅಂತರಾಷ್ಟ್ರೀಯ ಕ್ರಿಕೆಟ್'ಗೆ ಪಾದಾರ್ಪಣೆ ಮಾಡಿದ್ದ ಅವರು 2012ರಲ್ಲಿ ಆಸೀಸ್ ತಂಡವನ್ನು ತೊರೆದು ನ್ಯೂಜಿಲೆಂಡ್ ತಂಡವನ್ನು ಸೇರಿಕೊಂಡಿದ್ದರು.
ನ್ಯೂಜಿಲೆಂಡ್ ಪರವಾಗಿ 4 ಟೆಸ್ಟ್, 85 ಏಕದಿನ ಹಾಗೂ 32 ಟಿ20 ಪಂದ್ಯಗಳನ್ನಾಡಿರುವ ರೊಂಚಿ, ಆಸ್ಟ್ರೇಲಿಯಾ ಪರವಾಗಿ 4 ಏಕದಿನ ಹಾಗೂ 3 ಟಿ20 ಪಂದ್ಯವನ್ನಾಡಿದ್ದರು.
2015ರಲ್ಲಿ ರೊಂಚಿ ಶ್ರೀಲಂಕಾ ವಿರುದ್ಧ ಕೇವಲ 99 ಎಸೆತಗಳಲ್ಲಿ 170 ರನ್ ಸಿಡಿಸಿ ಮಿಂಚಿದ್ದರು. ರೊಂಚಿ ಅಂತರಾಷ್ಟ್ರೀಯ ಕ್ರಿಕೆಟ್'ಗೆ ನಿವೃತ್ತಿ ಘೋಷಿಸಿದ್ದರೂ ಇಂಗ್ಲೀಷ್ ಕೌಂಟಿ ಕ್ರಿಕೆಟ್ ಆಡಲಿದ್ದಾರೆ ಎನ್ನಲಾಗಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.