
ಬೆಂಗಳೂರು[ಡಿ.26]: ಕರ್ನಾಟಕದ ಪ್ರತಿಭಾನ್ವಿತ ಕ್ರಿಕೆಟಿಗ ಮಯಾಂಕ್ ಅಗರ್’ವಾಲ್ ಪದಾರ್ಪಣೆ ಪಂದ್ಯದಲ್ಲೇ ಭರ್ಜರಿ ಅರ್ಧಶತಕ ಸಿಡಿಸುವ ಮೂಲಕ ಸಿಡಿಸುವ ಮೂಲಕ ಸ್ಮರಣೀಯವಾಗಿಸಿಕೊಂಡಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ಮಯಾಂಕ್ 76 ರನ್ ಸಿಡಿಸಿ ಮಿಂಚಿದರು.
ಕಳೆದೊಂದು ವರ್ಷದಿಂದಲೂ ರಾಷ್ಟ್ರೀಯ ತಂಡದ ಕದ ತಟ್ಟುತ್ತಿದ್ದ ಮಯಾಂಕ್ ಕೊನೆಗೂ ಸಿಕ್ಕ ಅವಕಾಶವನ್ನು ಸಂಪೂರ್ಣವಾಗಿ ಬಳಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. 2017ರ ನಂತರ ಆಡಿದ 75 ಇನ್ನಿಂಗ್ಸ್’ಗಳಲ್ಲಿ 56ರ ಸರಾಸರಿಯಲ್ಲಿ 4000ಕ್ಕೂ ಹೆಚ್ಚು ರನ್ ಬಾರಿಸಿದ್ದ ಮಯಾಂಕ್ ಅಗರ್’ವಾಲ್ ಇದೀಗ ಮೆಲ್ಬರ್ನ್ ಮೈದಾನದಲ್ಲೂ ತಮ್ಮ ಬ್ಯಾಟಿಂಗ್ ಪ್ರತಿಭೆಯನ್ನು ಅನಾವರಣ ಮಾಡಿದ್ದಾರೆ.
ಮಯಾಂಕ್ ಅಗರ್’ವಾಲ್ ಬ್ಯಾಟಿಂಗ್ ನೋಡಿದ ಕ್ರಿಕೆಟ್ ಅಭಿಮಾನಿಗಳು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಟ್ವಿಟರಿಗರು ಏನಂದ್ರು ನೀವೇ ನೋಡಿ..
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.