ಧೋನಿ ನಿವೃತ್ತಿ ಮಾತು; ಸಂಜೆ 7ಕ್ಕೆ ಸುದ್ದಿಗೋಷ್ಠಿ?

Published : Sep 12, 2019, 03:59 PM IST
ಧೋನಿ ನಿವೃತ್ತಿ ಮಾತು; ಸಂಜೆ 7ಕ್ಕೆ ಸುದ್ದಿಗೋಷ್ಠಿ?

ಸಾರಾಂಶ

ಟೀಂ ಇಂಡಿಯಾ ಹಿರಿಯ ಕ್ರಿಕೆಟಿಗ ಎಂ.ಎಸ್.ಧೋನಿ ಎಲ್ಲಾ ಮಾದರಿ ಕ್ರಿಕೆಟ್‌ಗೆ ವಿದಾಯ ಹೇಳಲಿದ್ದಾರೆ ಅನ್ನೋ ಮಾತುಗಳು ಕೇಳಿ ಬರುತ್ತಿದೆ. ಇದರ ಬೆನ್ನಲ್ಲೇ ಧೋನಿ ದಿಢೀರ್ ಸುದ್ದಿಗೋಷ್ಠಿ ಕರೆದಿದ್ದಾರೆ ಎನ್ನಲಾಗುತ್ತಿದೆ. ಸಂಜೆ 7 ಗಂಟೆಗೆ ಧೋನಿ ತಮ್ಮ ನಿರ್ಧಾರ ಪ್ರಕಟಿಸುತ್ತಾರಾ? ಇಲ್ಲಿದೆ ವಿವರ.

ಮುಂಬೈ(ಸೆ.12): ವಿಶ್ವಕಪ್ ಟೂರ್ನಿ ಬಳಿಕ ಕ್ರಿಕೆಟ್‌ನಿಂದ ದೂರ ಉಳಿದಿರುವ ಟೀಂ ಇಂಡಿಯಾ ಹಿರಿಯ ಕ್ರಿಕೆಟಿಗ ಎಂ.ಎಸ್.ಧೋನಿ ಇದೀಗ ನಿವೃತ್ತಿ ಹೇಳಲಿದ್ದಾರೆ ಅನ್ನೋ ಮಾತುಗಳು ಕೇಳಿಬರುತ್ತಿದೆ. ವೆಸ್ಟ್ ಇಂಡೀಸ್ ಹಾಗೂ ಸೌತ್ ಆಫ್ರಿಕಾ ವಿರುದ್ದದ ಸರಣಿಯಿಂದ ವಿಶ್ರಾಂತಿ ಪಡೆದಿರುವ ಧೋನಿ ಇಂದು(ಸೆ.12) ಸಂಜೆ ತಮ್ಮ ನಿರ್ಧಾರವನ್ನು ಖಚಿತಪಡಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಧೋನಿ ನಿವೃತ್ತಿ ಸುಳಿವು ನೀಡಿದ್ರಾ ಕೊಹ್ಲಿ?

ಎಂ.ಎಸ್.ಧೋನಿ ಸಂಜೆ 7 ಗಂಟೆಗೆ ದಿಢೀರ್ ಸುದ್ದಿಗೋಷ್ಠಿ ಕರೆದಿದ್ದಾರೆ ಅನ್ನೋ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇಂದು ಸಂಜೆ ಧೋನಿ ನಿವೃತ್ತಿ ಹೇಳಲಿದ್ದಾರೆ ಇದಕ್ಕಾಗಿ ಸುದ್ದಗೋಷ್ಠಿ ಕರೆಯಲಾಗಿದೆ ಅನ್ನೋ ಆತಂಕ ಅಭಿಮಾನಿಗಳು ವ್ಯಕ್ತಪಡಿಸಿದ್ದಾರೆ. ಆದರೆ  ಧೋನಿ ಅಧೀಕೃತವಾಗಿ ಯಾವುದೇ ಸುದ್ದಿಗೋಷ್ಠಿ ಕರೆದಿಲ್ಲ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಪೋಸ್ಟ್‌ಗಳಿಗೆ ಯಾವುದೇ ಖಚಿತತೆ ಇಲ್ಲ. 

ಇದನ್ನೂ ಓದಿ: ಧೋನಿ ಭವಿಷ್ಯದ ಬಗ್ಗೆ ಶೀಘ್ರವೇ ನಿರ್ಧಾರಕ್ಕೆ ಬನ್ನಿ: ಕುಂಬ್ಳೆ

ಹಾಗಂತ ಧೋನಿ ದಿಢೀರ್ ಸುದ್ದಿಗೋಷ್ಠಿ ಮಾಡಿದರೂ ಆಶ್ಚರ್ಯವಿಲ್ಲ. ಕಾರಣ, ಟೆಸ್ಟ್ ಮಾದರಿಗೆ ನಿವೃತ್ತಿ ಹೇಳುವ ಮೊದಲು ಧೋನಿ ಯಾವುದೇ ಮುನ್ಸೂಚನೆ ನೀಡಿರಲಿಲ್ಲ. ದಿಢೀರ್ ಸುದ್ದಿಗೋಷ್ಠಿ ಕರೆದು ನಿವೃತ್ತಿ ಹೇಳಿದ್ದರು. ಹೀಗಾಗಿ ಧೋನಿ ನಿರ್ಧಾರವನ್ನು ಮೊದಲೇ ಊಹಿಸಲು ಅಸಾಧ್ಯ.

ಇದನ್ನೂ ಓದಿ: MS ಧೋನಿ ಭವಿಷ್ಯ ಇನ್ನೂ ಸಸ್ಪೆನ್ಸ್‌!

ಸೌತ್ ಆಫ್ರಿಕಾ ಸರಣಿ ಸನಿಹದಲ್ಲಿ ಧೋನಿ ನಿವೃತ್ತಿಯಾಗಬೇಕು, ತಂಡದಲ್ಲಿರಬೇಕು ಅನ್ನೋ ಚರ್ಚೆಗಳು ಜೋರಾಗಿ ನಡೆಯುತ್ತಿದೆ. ಇತ್ತೀಚೆಗೆ ಮಾಜಿ ನಾಯಕ ಅನಿಲ್ ಕುಂಬ್ಳೆ, ಧೋನಿ ನಿವೃತ್ತಿ ಹೇಳುವುದಾದರೆ ವಿದಾಯದ ಪಂದ್ಯ ಬೇಕೇ ಬೇಕು ಎಂದಿದ್ದರು. 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಒನ್‌8 ಬ್ರ್ಯಾಂಡ್‌ ಸೇಲ್‌: ತನ್ನ ಆಪ್ತ ಗೆಳೆಯನ ಈ ಸಂಸ್ಥೆಯಲ್ಲಿ ಕೊಹ್ಲಿ 40 ಕೋಟಿ ಹೂಡಿಕೆ!
IPL 2026 ಮಿನಿ ಹರಾಜು: 2 ಕೋಟಿ ಮೂಲ ಬೆಲೆ ಹೊಂದಿದ 5 ಸ್ಟಾರ್ ಆಟಗಾರರಿವರು!