
ಉತ್ತರಪ್ರದೇಶ(ಫೆ.12): ಕಾರು ಅಪಘಾತದಲ್ಲಿ ಟೀಂ ಇಂಡಿಯಾ ಕ್ರಿಕೆಟಿಗ ಸುರೇಶ್ ರೈನಾ ಸಾವನ್ನಪ್ಪಿದ್ದಾರೆ ಅನ್ನೋ ಸುಳ್ಳು ಸುದ್ದಿ ಕೆಲ ದಿನಗಳಿಂದ ಹರಿದಾಡುತ್ತಿದೆ. ಯುಟ್ಯೂಬ್ ಚಾನೆಲ್‌ಗಳಲ್ಲಿ ಈ ರೀತಿ ಸುದ್ದಿ ವೈರಲ್ ಆಗಿತ್ತು. ಈ ಸುಳ್ಳು ಸುದ್ದಿಯಿಂದ ಆಘಾತಕ್ಕೊಳಗಾಗಿದ್ದ ಅಭಿಮಾನಿಗೆ ಸ್ವತಃ ಸುರೇಶ್ ರೈನಾ ಟ್ವೀಟ್ ಮೂಲಕ ಉತ್ತರಿಸಿದ್ದಾರೆ.
ಇದನ್ನೂ ಓದಿ: ಏಕದಿನ ವಿಶ್ವಕಪ್’ಗೆ ಭಜ್ಜಿ ಆಯ್ಕೆ ಮಾಡಿದ ಟೀಂ ಇಂಡಿಯಾವಿದು
ಕಳೆದ ಕೆಲ ದಿನಗಳಿಂದ ಕಾರು ಅಪಘಾತದಲ್ಲಿ ಸುರೇಶ್ ರೈನಾ ಸಾವನ್ನಪ್ಪಿದ್ದಾರೆ ಎಂದು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಇದರಿಂದ ನನ್ನ ಕುಟುಂಬ, ಗೆಳೆಯರು ಹಾಗೂ ಅಭಿಮಾನಿಗಳಿಗೆ ನೋವಾಗಿದೆ. ಈ ರೀತಿ ಸುಳ್ಳು ಸುದ್ದಿಯಿಂದ ದೂರವಿರಿ. ದೇವರ ಕೃಪೆಯಿಂದ ನಾನು ಆರೋಗ್ಯವಾಗಿದ್ದೇನೆ. ಸುಳ್ಳು ಸುದ್ದಿ ಹರಡಿದ ಯುಟ್ಯೂಬ್ ಚಾನೆಲ್ ವಿರುದ್ಧ ದೂರು ದಾಖಲಿಸಲಾಗಿದೆ ಎಂದು ರೈನಾ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ: ರೋಹಿತ್’ಗೆ ರೆಸ್ಟ್; ಈ ಇಬ್ಬರಿಗೆ ವಿಶ್ವಕಪ್ ಎಂಟ್ರಿ ಕೊಡಲು ಕೊನೆಯ ಚಾನ್ಸ್..?
ಯುಟ್ಯೂಬ್ ಚಾನೆಲ್‌ನಲ್ಲಿ ರೈನಾ ಅಪಘಾತ ಸುದ್ದಿಯನ್ನ ಹರಡಲಾಗಿತ್ತು. ಇದು ಸಾಮಾಜಿಕ ಜಾಲತಾಣಗಳಲ್ಲಿ ಹರದಾಡುತ್ತಿತ್ತು. ಕುಟುಂಬ ಸದಸ್ಯರು ಹಾಗೂ ಆಪ್ತರು ಈ ಕುರಿತು ರೈನಾಗೆ ಮಾಹಿತಿ ತಿಳಿಸಿದ್ದಾರೆ. ತಕ್ಷಣವೇ ರೈನಾ ಟ್ವೀಟ್ ಮೂಲಕ ಉತ್ತರಿಸಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.