ವಿಶ್ವಕಪ್ 2019: ಟೀಂ ಇಂಡಿಯಾ ಪ್ರಕಟಿಸಿದ VVS ಲಕ್ಷ್ಮಣ್!

Published : Mar 04, 2019, 03:58 PM ISTUpdated : Mar 04, 2019, 04:44 PM IST
ವಿಶ್ವಕಪ್ 2019: ಟೀಂ ಇಂಡಿಯಾ ಪ್ರಕಟಿಸಿದ VVS ಲಕ್ಷ್ಮಣ್!

ಸಾರಾಂಶ

ವಿಶ್ವಕಪ್ ಟೂರ್ನಿಗೆ ಟೀಂ ಇಂಡಿಯಾ ಆಯ್ಕೆ ಕಸರತ್ತು ನಡೆಯುತ್ತಿದೆ. ಆಯ್ಕೆ ಸಮಿತಿ ತಂಡದ ಆಯ್ಕೆಗೆ ನಿದ್ದೆಗೆಟ್ಟು ಅಂಕಿ ಅಂಶ ಕಲೆಹಾಕುತ್ತಿದೆ. ಇದೀಗ ಮಾಜಿ ಕ್ರಿಕೆಟಿಗ VVS ಲಕ್ಷ್ಮಣ್ ವಿಶ್ವಕಪ್ ತಂಡವನ್ನು ಆಯ್ಕೆ ಮಾಡಿದ್ದಾರೆ. VVS ತಂಡದಲ್ಲಿ ಸ್ಥಾನ ಪಡೆದ ಆಟಗಾರರು ಯಾರು? ಇಲ್ಲಿದೆ.

ಮುಂಬೈ(ಮಾ.04): ಆಸ್ಟ್ರೇಲಿಯಾ ವಿರುದ್ದದ ಏಕದಿನ ಸರಣಿಯಲ್ಲಿ ಶುಭಾರಂಭ ಮಾಡೋ ಮೂಲಕ ಟೀಂ ಇಂಡಿಯಾ ಮುಂಬರುವ ವಿಶ್ವಕಪ್ ಟೂರ್ನಿಗೆ ತಯಾರಿ ಆರಂಭಿಸಿದೆ. 2019ರ ವಿಶ್ವಕಪ್ ಟೂರ್ನಿಗೆ ಬಿಸಿಸಿಐ ಆಯ್ಕೆ ಸಮಿತಿ ಆಟಗಾರರ ಪಟ್ಟಿಯನ್ನ ಅಂತಿಮಗೊಳಿಸುತ್ತಿದೆ. ಇದರ ಬೆನ್ನಲ್ಲೇ ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಭಾರತದ ವಿಶ್ವಕಪ್ ತಂಡವನ್ನು ಪ್ರಕಟಿಸಿದ್ದಾರೆ.

ಇದನ್ನೂ ಓದಿ: ವಿಶ್ವಕಪ್ 2019: ಇಂಡೋ-ಪಾಕ್ ಪಂದ್ಯದ ಬಗ್ಗೆ ನಿರ್ಧಾರ ಪ್ರಕಟಿಸಿದ ಐಸಿಸಿ

ವಿವಿಎಸ್ ಲಕ್ಷ್ಮಣ್ ತಂಡದಲ್ಲಿ ಆರಂಭಿಕರಾಗಿ ರೋಹಿತ್ ಶರ್ಮಾ ಹಾಗೂ ಶಿಖರ್ ಧವನ್ ಸ್ಥಾನ ಪಡೆದಿದ್ದಾರೆ. ಇನ್ನು ಬ್ಯಾಕ್ ಅಪ್ ಒಪನರ್ ಆಗಿ ಕೆ.ಎಲ್.ರಾಹುಲ್ ಸ್ಥಾನ ಪಡೆದಿದ್ದಾರೆ. ಎಂ.ಎಸ್.ಧೋನಿಗೆ ಬ್ಯಾಕ್ ಅಪ್ ವಿಕೆಟ್ ಕೀಪರ್ ಆಗಿ ದಿನೇಶ್ ಕಾರ್ತಿಕ್‌ಗೆ ಸ್ಥಾನ ನೀಡಿದ VVS, ರಿಷಬ್ ಪಂತ್‌ಗೆ ಅವಕಾಶ ನೀಡಿಲ್ಲ.

ಇದನ್ನೂ ಓದಿ: ವಿಶ್ವಕಪ್‌ನಲ್ಲಿ ಸ್ಥಾನ ಭದ್ರಪಡಿಸಿಕೊಳ್ಳಲು ನಾಲ್ವರಿಗೆ ಕೊನೆ ಚಾನ್ಸ್!

ವೇಗಿಗಳಲ್ಲಿ ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ ಹಾಗೂ ಖಲೀಲ್ ಅಹಮ್ಮದ್‌ಗೆ ಅವಕಾಶ ನೀಡಿರುವ ಲಕ್ಷ್ಮಣ್, ಸ್ಪಿನ್ನರ್‌ಗಳಾಗಿ ಕುಲ್ದೀಪ್ ಯಾದವ್ ಹಾಗೂ ಯಜುವೇಂದ್ರ ಚಹಾಲ್ ಸ್ಥಾನ ಪಡೆದಿದ್ದಾರೆ. ಆದರೆ ರವೀಂದ್ರ ಜಡೇಜಾ ಹಾಗೂ ಆರ್ ಅಶ್ವಿನ್‌ಗೆ ಸ್ಥಾನ ನೀಡಿಲ್ಲ.

ಇದನ್ನೂ ಓದಿ: ಐಪಿಎಲ್ ಕ್ರಿಕೆಟ್, ವಿಶ್ವಕಪ್ ತಂಡದ ಆಯ್ಕೆ -ಕೊಹ್ಲಿ ಬಿಚ್ಟಿಟ್ಟ ಸತ್ಯ!

ವಿವಿಎಸ್ ಲಕ್ಷ್ಮಣ್ ಆಯ್ಕೆ ಮಾಡಿದ ಟೀಂ ಇಂಡಿಯಾ:
ವಿರಾಟ್ ಕೊಹ್ಲಿ(ನಾಯಕ), ರೋಹಿತ್ ಶರ್ಮಾ, ಶಿಖರ್ ಧವನ್, ಕೆ.ಎಲ್.ರಾಹುಲ್, ಎಂ.ಎಸ್.ಧೋನಿ, ಅಂಬಾಟಿ ರಾಯುಡು, ಕೇದಾರ್ ಜಾಧವ್, ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ಕುಲ್ದೀಪ್ ಯಾದವ್, ಯುಜುವೇಂದ್ರ ಚಹಾಲ್, ಜಸ್ಪ್ರೀತ್  ಬುಮ್ರಾ, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಖಲೀಲ್ ಅಹಮ್ಮದ್
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿರಾಟ್ ಕೊಹ್ಲಿಯಲ್ಲ, ಈ ಆಟಗಾರ ಹೆಚ್ಚು ಹಾರ್ಡ್‌ ವರ್ಕ್ ಮಾಡುವ ಆಟಗಾರ ಎಂದ ಯಶಸ್ವಿ ಜೈಸ್ವಾಲ್!
ನಿವೃತ್ತಿಗೆ ಯು ಟರ್ನ್ ಹೊಡೆದ ವಿನೇಶ್ ಫೋಗಟ್; 2028ರ ಒಲಿಂಪಿಕ್ಸ್ ಮೇಲೆ ಕಣ್ಣಿಟ್ಟ ಕಾಂಗ್ರೆಸ್ ಶಾಸಕಿ!