ನಟನೆಯತ್ತ ಮುಖ ಮಾಡಿದ ಯುವರಾಜ್ ಸಿಂಗ್

Published : Jun 30, 2019, 04:39 PM IST
ನಟನೆಯತ್ತ ಮುಖ ಮಾಡಿದ ಯುವರಾಜ್ ಸಿಂಗ್

ಸಾರಾಂಶ

ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ನಟನೆಯತ್ತ ಮುಖ ಮಾಡಿದ್ದಾರೆ. ಈ ಕುರಿತಾದ ವಿವರ ಇಲ್ಲಿದೆ ನೋಡಿ... 

ಮುಂಬೈ[ಜೂ.30]: ಭಾರತದ ಮಾಜಿ ಕ್ರಿಕೆಟಿಗ ಯುವರಾಜ್‌ ಸಿಂಗ್‌ ನಟನೆಯತ್ತ ಮೊದಲ ಹೆಜ್ಜೆ ಇರಿಸಿದ್ದಾರೆ. ‘ದಿ ಆಫೀಸ್‌’ ಎನ್ನುವ ವೆಬ್‌ ಸೀರೀಸ್‌ನಲ್ಲಿ ಯುವಿ ಕಾಣಿಸಿಕೊಳ್ಳಲಿದ್ದಾರೆ. 

ಯುವಿ ದಿಢೀರ್ ಕ್ರಿಕೆಟ್‌ಗೆ ಗುಡ್ ಬೈ ಹೇಳಿದ್ದೇಕೆ..?

ಹಾಟ್‌ ಸ್ಟಾರ್‌ನಲ್ಲಿ ಈ ಸೀರೀಸ್‌ ಪ್ರಸಾರವಾಗಲಿದ್ದು, ಒಟ್ಟು 13 ಸಂಚಿಕೆಗಳನ್ನು ಒಳಗೊಂಡಿರಲಿದೆ. ‘ಇದೊಂದು ಹೊಸ ಪ್ರಯತ್ನ. ಕ್ರಿಕೆಟ್‌ ನನಗೆ ಎಲ್ಲವನ್ನೂ ಕೊಟ್ಟಿದೆ. ಆದರೆ ಕ್ರಿಕೆಟ್‌ ಹೊರತುಪಡಿಸಿ ಜೀವನದಲ್ಲಿ ಬೇರೆ ಏನನ್ನೂ ಮಾಡಿಲ್ಲ. ಹೀಗಾಗಿ ಹೊಸ ಕಲೆಯತ್ತ ಸಾಗಿದ್ದೇನೆ’ ಎಂದು ಯುವರಾಜ್‌ ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ. ವೆಬ್‌ ಸೀರೀಸ್‌ಗಾಗಿ ಈಗಾಗಲೇ ಸಿದ್ಧತೆ ಆರಂಭಿಸಿರುವ ಯುವರಾಜ್‌, ಕಾಪೋರೇಟ್‌ ಆಫೀಸ್‌ ಸಿಬ್ಬಂದಿಯ ಜೀವನ ಹೇಗಿರಲಿದೆ ಎನ್ನುವುದರ ಅಧ್ಯಯನ ನಡೆಸುತ್ತಿದ್ದಾರೆ ಎನ್ನಲಾಗಿದೆ.

#BIGBREAKING ಅಂತರಾಷ್ಟ್ರೀಯ ಕ್ರಿಕೆಟ್‌ಗೆ ಯುವಿ ಗುಡ್‌ಬೈ...!

ಟೀಂ ಇಂಡಿಯಾ ಆಲ್ರೌಂಡರ್ ಕೆಲದಿನಗಳ ಹಿಂದಷ್ಟೇ ಅಂತರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ್ದರು. ಇದರ ಜತೆಗೆ ವಿದೇಶಿ ಟಿ20 ಲೀಗ್‌ನಲ್ಲಿ ಪಾಲ್ಗೊಳ್ಳುವ ಇರಾದೆ ವ್ಯಕ್ತಪಡಿಸಿದ್ದಾರೆ. 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಚಿನ್ನಸ್ವಾಮಿಯಲ್ಲಿ ಮತ್ತೆ ಐಪಿಎಲ್ : ಇಂದು ನಿರ್ಧಾರ
ಸಂಜು ಸ್ಯಾಮ್ಸನ್ ನನ್ನ ಅಣ್ಣನಿದ್ದಂತೆ; ಇಬ್ಬರ ಪೈಪೋಟಿ ಬಗ್ಗೆ ಮನಬಿಚ್ಚಿ ಮಾತಾಡಿದ ಜಿತೇಶ್ ಶರ್ಮಾ