ಪುಲ್ವಾಮಾ ಹುತಾತ್ಮ ಯೋಧರ ಕುಟುಂಬಕ್ಕೆ CSK ನೆರವು

Published : Mar 21, 2019, 04:42 PM ISTUpdated : Mar 21, 2019, 04:48 PM IST
ಪುಲ್ವಾಮಾ ಹುತಾತ್ಮ ಯೋಧರ ಕುಟುಂಬಕ್ಕೆ CSK ನೆರವು

ಸಾರಾಂಶ

ಬಿಸಿಸಿಐ, ಕಿಂಗ್ಸ್ ಇಲೆವೆನ್ ಪಂಜಾಬ್ ಬಳಿಕ ಇದೀಗ ಚೆನ್ನೈ ಸೂಪರ್ ಕಿಂಗ್ಸ್ ಕೂಡ ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಕುಟುಂಬಕ್ಕೆ ನೆರವು ನೀಡಿದೆ.  ಹುತಾತ್ಮ ಯೋಧರ ಕುಟುಂಬಕ್ಕೆ ಗೌರವ ಲೆಫ್ಟಿನೆಂಟ್ ಕರ್ನಲ್, CSK ನಾಯಕ ಧೋನಿ ಚೆಕ್ ವಿತರಸಲಿದ್ದಾರೆ. ಈ ಕುರಿತ ಹೆಚ್ಚಿನ ಮಾಹಿತಿ ಇಲ್ಲಿದೆ.  

ಚೆನ್ನೈ(ಮಾ.21): 12ನೇ ಆವೃತ್ತಿ ಐಪಿಎಲ್ ಟೂರ್ನಿ ಮಾ.23 ರಿಂದ ಆರಂಭಗೊಳ್ಳುತ್ತಿದೆ. ಉದ್ಘಾಟಾನ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಖಾಮುಖಿಯಾಗುತ್ತಿದೆ. ಈ ಪಂದ್ಯಕ್ಕಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ. ಇದೀಗ CSK ಉದ್ಘಾಟನಾ ಪಂದ್ಯದ ಸಂಪೂರ್ಣ ಆದಾಯವನ್ನು ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರ ಕುಟುಂಬಕ್ಕೆ ನೀಡುವುದಾಗಿ ಘೋಷಿಸಿದೆ.

ಇದನ್ನೂ ಓದಿ: IPL 2019:ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಟೈಂ ಟೇಬಲ್!

CSK vs RCB ನಡುವಿನ ಮೊದಲ ಪಂದ್ಯದ ಎಲ್ಲಾ ಟಿಕೆಟ್‌ಗಳು ಮಾರಾಟವಾಗಿದೆ. ಟಿಕೆಟ್ ಮಾರಾಟದ ಹಣ ಸೇರಿದಂತೆ ಮೊದಲ ಪಂದ್ಯದ ಎಲ್ಲಾ ಆದಾಯ ಕೂಡ ಹುತಾತ್ಮ ಕುಟುಂಬಕ್ಕೆ ನೀಡುವುದಾಗಿ ಚೆನ್ನೈ ಸೂಪರ್ ಕಿಂಗ್ಸ್ ಸ್ಪಷ್ಟಪಡಿಸಿದೆ. ಇಷ್ಟೇ ಅಲ್ಲ ಈ ಹಣವನ್ನು CSK ನಾಯಕ, ಭಾರತೀಯ ಸೇನೆಯ ಗೌರವ ಲೆಫ್ಟಿನೆಂಟ್ ಕರ್ನಲ್ ಎಂ.ಎಸ್.ಧೋನಿ ಚೆಕ್ ಮೂಲಕ ವಿತರಿಸಲಿದ್ದಾರೆ.

ಇದನ್ನೂ ಓದಿ: ಐಪಿಎಲ್ 2019: ಪುಲ್ವಾಮಾ ಹುತಾತ್ಮ ಕುಟುಂಬಕ್ಕೆ ಕಿಂಗ್ಸ್ XI ಪಂಜಾಬ್ ನೆರವು!

ಈಗಾಗಲೇ ಬಿಸಿಸಿಐ ಐಪಿಎಲ್ ಉದ್ಘಾಟನಾ ಸಮಾರಂಭವನ್ನು ರದ್ದುಗೊಳಿಸಿ ಈ ಹಣವನ್ನು ಪುಲ್ವಾಮಾ ಹುತಾತ್ಮ ಕುಟುಂಬಕ್ಕೆ ನೀಡಿದೆ. ಇನ್ನು ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ 25 ಲಕ್ಷ ರೂಪಾಯಿ ಹಣದ ನೆರವನ್ನು ನೀಡಿದೆ. ಈ ಮೂಲಕ ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಕುಟುಂಬದ ಜೊತೆಗೆ ನಾವಿದ್ದೇವೆ ಅನ್ನೋ ಸಂದೇಶವನ್ನೂ ಸಾರಿದೆ.

ಫೆಬ್ರವರಿ 14 ರಂದು CRPF ಯೋಧರ ಮೇಲೆ ಪಾಕಿಸ್ತಾನದ ಜೈಶ್-ಇ-ಮೊಹಮ್ಮದ್ ಭಯೋತ್ಪಾದಕ ಸಂಘಟನೆ ಬಾಂಬ್ ದಾಳಿ ಮಾಡಿತ್ತು. ಜಮ್ಮು ಮತ್ತು ಕಾಶ್ಮೀರದ ಇತಿಹಾಸದಲ್ಲಿ ನಡೆದ ರಣಭೀಕರ ದಾಳಿಯಲ್ಲಿ 40ಕ್ಕೂ ಹೆಚ್ಚು   CRPF ಯೋಧರು ಹುತಾತ್ಮರಾಗಿದ್ದರು. 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಂಗಳೂರಲ್ಲಿ ಐಪಿಎಲ್‌ ನಡೆಸಲು ಸಂಪುಟ ಅಸ್ತು
ಡಿಕಾಕ್‌ ಡ್ಯಾಶಿಂಗ್‌ ಆಟದ ಮುಂದೆ ಥಂಡಾ ಹೊಡೆದ ಟೀಮ್‌ ಇಂಡಿಯಾ!