ಅಪರೂಪದ ದಾಖಲೆ ಬರೆಯಲು ರೆಡಿಯಾದ ಎಬಿ ಡಿವಿಲಿಯರ್ಸ್..!

Published : Apr 21, 2019, 05:20 PM IST
ಅಪರೂಪದ ದಾಖಲೆ ಬರೆಯಲು ರೆಡಿಯಾದ ಎಬಿ ಡಿವಿಲಿಯರ್ಸ್..!

ಸಾರಾಂಶ

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅತ್ಯಂತ ನಂಬಿಕಸ್ಥ ಬ್ಯಾಟ್ಸ್’ಮನ್ ಎಬಿ ಡಿವಿಲಿಯರ್ಸ್ ಚೆನ್ನೈ ಸೂಪರ್’ಕಿಂಗ್ಸ್ ವಿರುದ್ಧ ಕಣಕ್ಕಿಳಿದರೆ ಅಪರೂಪದ ದಾಖಲೆ ಬರೆಯಲಿದ್ದಾರೆ. ಏನದು ದಾಖಲೆ ನೀವೇ ನೋಡಿ..

ಬೆಂಗಳೂರು[ಏ.21]: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅತ್ಯಂತ ನಂಬಿಕಸ್ಥ ಬ್ಯಾಟ್ಸ್’ಮನ್ ಎಬಿ ಡಿವಿಲಿಯರ್ಸ್ ಚೆನ್ನೈ ಸೂಪರ್’ಕಿಂಗ್ಸ್ ವಿರುದ್ಧ ಕಣಕ್ಕಿಳಿದರೆ ಅಪರೂಪದ ದಾಖಲೆ ಬರೆಯಲಿದ್ದಾರೆ.

ಹೌದು, ಎಬಿಡಿ ಇಂದು ಚಿನ್ನಸ್ವಾಮಿ ಮೈದಾನದಲ್ಲಿ ನಡೆಯಲಿರುವ ಚೆನ್ನೈ ಸೂಪರ್’ಕಿಂಗ್ಸ್ ತಂಡದ ವಿರುದ್ಧ ಕಣಕ್ಕಿಳಿದರೆ 150 ಐಪಿಎಲ್ ಪಂದ್ಯಗಳನ್ನಾಡಿದ ಸಾಧನೆ ಮಾಡಲಿದ್ದಾರೆ. ಈ ಮೂಲಕ ಐಪಿಎಲ್’ನಲ್ಲಿ 150 ಪಂದ್ಯಗಳನ್ನಾಡಿದ ಮೊದಲ ವಿದೇಶಿ ಕ್ರಿಕೆಟಿಗ ಎನ್ನುವ ಅಪರೂಪದ ದಾಖಲೆಗೆ ಮಿ.360 ಪಾತ್ರರಾಗಲಿದ್ದಾರೆ. ಇದುವರೆಗೆ ಭಾರತದ 12 ಕ್ರಿಕೆಟಿಗರು 150 ಪಂದ್ಯಗಳನ್ನಾಡಿದ ಸಾಧನೆ ಮಾಡಿದ್ದಾರೆ.

ಐಪಿಎಲ್ ಬ್ರೇಕ್ ಬಗ್ಗೆ ತುಟಿಬಿಚ್ಚಿದ ಎಬಿಡಿ..

2008ರಲ್ಲಿ ಡೆಲ್ಲಿ ಡೇರ್ ಡೆವಿಲ್ಸ್ ತಂಡದ ಪರ ಕಣಕ್ಕಿಳಿಯುವ ಮೂಲಕ ಐಪಿಎಲ್’ಗೆ ಪದಾರ್ಪಣೆ ಮಾಡಿದ್ದ ಎಬಿಡಿ, 28 ಪಂದ್ಯಗಳನ್ನಾಡಿದ್ದರು. 28 ಪಂದ್ಯಗಳಲ್ಲಿ ಒಂದು ಶತಕ ಹಾಗೂ 3 ಅರ್ಧಶತಕ ಸಹಿತ 671 ರನ್ ಬಾರಿಸಿದ್ದರು. ಆ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೇರಿಕೊಂಡ ಎಬಿಡಿ ತಂಡದ ಸ್ಟಾರ್ ಆಟಗಾರರಾಗಿ ಹೊರಹೊಮ್ಮಿದ್ದಾರೆ. ಆರ್’ಸಿಬಿ ಪರ ಎಬಿಡಿ ಒಟ್ಟು 121 ಪಂದ್ಯಗಳನ್ನಾಡಿ 2 ಶತಕ ಹಾಗೂ 29 ಅರ್ಧಶತಕ ಸಹಿತ 3589 ರನ್ ಸಿಡಿಸಿದ್ದಾರೆ.   

ಬೆಂಗಳೂರಲ್ಲಿಂದು ಕೊಹ್ಲಿ vs ಧೋನಿ ಫೈಟ್

ಇತ್ತೀಚೆಗಷ್ಟೇ ಐಪಿಎಲ್’ನಲ್ಲಿ 200 ಸಿಕ್ಸರ್ ಸಿಡಿಸಿದ ಸಾಧನೆ ಮಾಡಿದ್ದ ಎಬಿಡಿ, ಚೆನ್ನೈ ವಿರುದ್ಧ ಅಬ್ಬರಿಸುವ ನಿರೀಕ್ಷೆಯಲ್ಲಿದ್ದಾರೆ. 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಲಿಯೋನಲ್ ಮೆಸ್ಸಿಗೆ ಪಾಸ್ ವೈಡ್ ಪಾಸ್ ಕೊಟ್ಟು ವೈರಲ್ ಆದ ಸಿಎಂ ರೇವಂತ್ ರೆಡ್ಡಿ
ಸೌತ್ ಆಫ್ರಿಕಾ ವಿರುದ್ದ 3ನೇ ಟಿ20 ಗೆದ್ದ ಟೀಂ ಇಂಡಿಯಾ, ಸರಣಿಯಲ್ಲಿ 2-1 ಮುನ್ನಡೆ