ಟಿ20 ಸರಣಿ: ಆಸ್ಟ್ರೇಲಿಯಾಗೆ ವಾರ್ನರ್ ಕ್ಯಾಪ್ಟನ್

By Suvarna Web DeskFirst Published Jan 22, 2018, 5:26 PM IST
Highlights

ದಕ್ಷಿಣ ಆಫ್ರಿಕಾ ಪ್ರವಾಸವನ್ನು ಗಮನದಲ್ಲಿಟ್ಟುಕೊಂಡು ಆಸೀಸ್ ನಾಯಕ ಸ್ಟೀವ್ ಸ್ಮಿತ್‌'ಗೆ ವಿಶ್ರಾಂತಿ ನೀಡಲಾಗಿದೆ. ಸ್ಮಿತ್ ಜತೆಗೆ ಪ್ಯಾಟ್ ಕಮ್ಮಿನ್ಸ್, ಮಿಚೆಲ್ ಸ್ಟಾರ್ಕ್ ಹಾಗೂ ಜೋಸ್ ಹ್ಯಾಜಲ್'ವುಡ್'ಗೂ ವಿಶ್ರಾಂತಿ ನೀಡಲಾಗಿದೆ. ಇದೀಗ ಸ್ಮಿತ್ ಗೈರು ಹಾಜರಿಯಲ್ಲಿ ವಾರ್ನರ್ ತಂಡವನ್ನು ಮುನ್ನಡೆಸಲಿದ್ದಾರೆ. ಇನ್ನೂ ಇಂಗ್ಲೆಂಡ್ ವಿರುದ್ಧ ಏಕದಿನ ಸರಣಿಯಿಂದ ಹೊರಬಿದ್ದಿದ್ದ ಆಲ್ರೌಂಡರ್ ಗ್ಲೇನ್ ಮ್ಯಾಕ್ಸ್'ವೆಲ್ ತಂಡವನ್ನು ಕೂಡಿಕೊಂಡಿದ್ದಾರೆ.

ಮೆಲ್ಬರ್ನ್(ಜ.22): ಇಂಗ್ಲೆಂಡ್, ನ್ಯೂಜಿಲೆಂಡ್ ವಿರುದ್ಧ ಮುಂದಿನ ತಿಂಗಳಿನಿಂದ ಆರಂಭವಾಗಲಿರುವ ತ್ರಿಕೋನ ಟಿ20 ಸರಣಿಗಾಗಿ ಆಸ್ಟ್ರೇಲಿಯಾ ತಂಡವನ್ನು ಪ್ರಕಟಿಸಲಾಗಿದ್ದು, ಆರಂಭಿಕ ಬ್ಯಾಟ್ಸ್‌ಮನ್ ಡೇವಿಡ್ ವಾರ್ನರ್ ಮುನ್ನಡೆಸಲಿದ್ದಾರೆ.

ದಕ್ಷಿಣ ಆಫ್ರಿಕಾ ಪ್ರವಾಸವನ್ನು ಗಮನದಲ್ಲಿಟ್ಟುಕೊಂಡು ಆಸೀಸ್ ನಾಯಕ ಸ್ಟೀವ್ ಸ್ಮಿತ್‌'ಗೆ ವಿಶ್ರಾಂತಿ ನೀಡಲಾಗಿದೆ. ಸ್ಮಿತ್ ಜತೆಗೆ ಪ್ಯಾಟ್ ಕಮ್ಮಿನ್ಸ್, ಮಿಚೆಲ್ ಸ್ಟಾರ್ಕ್ ಹಾಗೂ ಜೋಸ್ ಹ್ಯಾಜಲ್'ವುಡ್'ಗೂ ವಿಶ್ರಾಂತಿ ನೀಡಲಾಗಿದೆ. ಇದೀಗ ಸ್ಮಿತ್ ಗೈರು ಹಾಜರಿಯಲ್ಲಿ ವಾರ್ನರ್ ತಂಡವನ್ನು ಮುನ್ನಡೆಸಲಿದ್ದಾರೆ. ಇನ್ನೂ ಇಂಗ್ಲೆಂಡ್ ವಿರುದ್ಧ ಏಕದಿನ ಸರಣಿಯಿಂದ ಹೊರಬಿದ್ದಿದ್ದ ಆಲ್ರೌಂಡರ್ ಗ್ಲೇನ್ ಮ್ಯಾಕ್ಸ್'ವೆಲ್ ತಂಡವನ್ನು ಕೂಡಿಕೊಂಡಿದ್ದಾರೆ.

'ಸ್ಮಿತ್ ಅನುಪಸ್ಥಿತಿಯಲ್ಲಿ ಡೇವಿಡ್ ವಾರ್ನರ್ ಆಸೀಸ್ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಲಿದ್ದಾರೆ ಎನ್ನುವ ಬಗ್ಗೆ ವಿಶ್ವಾಸವಿದೆ' ಎಂದು ಆಯ್ಕೆ ಸಮಿತಿ ಮುಖ್ಯಸ್ಥ ಟ್ರೆವೂರ್ ಹಾನ್ಸ್ ಹೇಳಿದ್ದಾರೆ.

click me!