ಭುವನೇಶ್ವರ್-ಕುಲದೀಪ್ ವಿರುದ್ಧ ಇಂಗ್ಲೆಂಡ್ ವೇಗಿ ಗರಂ ಆಗಿದ್ದೇಕೆ?

First Published Jul 6, 2018, 3:53 PM IST
Highlights

ಟೀಂ ಇಂಡಿಯಾ ವೇಗಿ ಭುವನೇಶ್ವರ್ ಕುಮಾರ್ ಹಾಗೂ ಕುಲದೀಪ್ ಯಾದವ್ ವಿರುದ್ದ ಇಂಗ್ಲೆಂಡ್ ಕ್ರಿಕೆಟಿಗ ಡೇವಿಡ್ ವಿಲೆ ಗಂಭೀರ ಆರೋಪ ಮಾಡಿದ್ದಾರೆ. ಅಷ್ಟಕ್ಕೂ ವಿಲೆ ಸಿಟ್ಟಿಗೆ ಕಾರಣವೇನು? ಇಲ್ಲಿದೆ ವಿವಿರ.

ಕಾರ್ಡಿಫ್(ಜು.06): ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ವೇಗಿ ಭುವನೇಶ್ವರ್ ಕುಮಾರ್ ಹಾಗು ಸ್ಪಿನ್ನರ್ ಕುಲದೀಪ್ ಯಾದವ್ ನಿಯಮ ಮೀರಿ ವರ್ತಿಸಿದ್ದಾರೆ ಎಂದು ಇಂಗ್ಲೆಂಡ್ ವೇಗಿ ಡೇವಿಡ್ ವಿಲೆ ಆರೋಪಿಸಿದ್ದಾರೆ.

ಮೊದಲ ಪಂದ್ಯದ ವೇಳೆ ಭುವನೇಶ್ವರ್ ಕುಮಾರ್ ಹಾಗೂ ಕುಲದೀಪ್ ಯಾದವ್ ಇಂಗ್ಲೆಂಡ್ ಬ್ಯಾಟ್ಸ್‌ಮನ್‌ಗಳ ವಿರುದ್ಧ ಮಾತಿನ ಚಕಮಕಿ ನಡೆಸಲು ಮುಂದಾಗಿದ್ದಾರೆ. ಇಂಗ್ಲೆಂಡ್ ಆಟಗಾರರನ್ನ ಕೆಣಕಿ ಸ್ಲೆಡ್ಜಿಂಗ್ ಮಾಡಿದ್ದಾರೆ. ಈ ಮೂಲಕ ಕ್ರೀಡಾ ಸ್ಪೂರ್ತಿ ಮರೆತಿದ್ದಾರೆ ಎಂದು ವಿಲೆ ಆರೋಪಿಸಿದ್ದಾರೆ.

ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಮೇಲುಗೈ ಸಾಧಿಸುತ್ತಿದ್ದಂತೆ, ತಂಡದ ಆಟಗಾರರು ಸ್ಲೆಡ್ಜಿಂಗ್ ಜೋರಾಗಿದೆ. ಪಂದ್ಯದ ಫಲಿತಾಂಶ ಏನೇ ಇರಬಹುದು, ಆದರೆ ಕ್ರೀಡಾ ಸ್ಪೂರ್ತಿಯಿಂದ ಆಡಬೇಕು ಎಂದು ವಿಲೆ ಸೂಚಿಸಿದ್ದಾರೆ.

ಮೊದಲ ಟಿ20 ಪಂದ್ಯದಲ್ಲಿ ಭಾರತ 8 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿತ್ತು. ಇಂದು ಕಾರ್ಡಿಫ್‌ನಲ್ಲಿ ಭಾರತ ಹಾಗೂ ಇಂಗ್ಲೆಂಡ್ 2ನೇ ಟಿ20 ಪಂದ್ಯ ಆಡಲಿದೆ. 3 ಪಂದ್ಯಗಳ ಸರಣಿಯಲ್ಲಿ ಭಾರತ 1-0 ಮುನ್ನಡೆ ಸಾಧಿಸಿದೆ.


 

click me!