
ಮುಂಬೈ(ಫೆ.15): ಬಹುನಿರೀಕ್ಷಿತ 11ನೇ ಆವೃತ್ತಿಯ IPL ವೇಳಾಪಟ್ಟಿ ಪ್ರಕಟಗೊಂಡಿದ್ದು, 51 ದಿನಗಳ ಕಾಲ ನಡೆಯಲಿರುವ ಟೂರ್ನಿಗೆ ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ 9 ನಗರಗಳು ಆತಿಥ್ಯ ವಹಿಸಲಿವೆ.
ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್'ಕಿಂಗ್ಸ್ ತಂಡಗಳು ಏಪ್ರಿಲ್ 7ರಂದು ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ. ಉದ್ಘಾಟನಾ ಪಂದ್ಯ ಹಾಗೂ ಫೈನಲ್ ಪಂದ್ಯಕ್ಕೆ ಮುಂಬೈನ ವಾಂಖೆಡೆ ಮೈದಾನ ಸಾಕ್ಷಿಯಾಗಲಿದೆ.
ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 11ನೇ ಆವೃತ್ತಿಯ ಮೊದಲ ಪಂದ್ಯವನ್ನು ಏ.8 (ಭಾನುವಾರ)ರಂದು ಆಡಲಿದೆ. ಭಾರತದ ಕ್ರಿಕೆಟ್ ಕಾಶಿ ಈಡನ್ ಗಾರ್ಡನ್ಸ್ ಮೈದಾನದಲ್ಲಿ 2 ಬಾರಿ ಚಾಂಪಿಯನ್ ಕೋಲ್ಕತಾ ನೈಟ್'ರೈಡರ್ಸ್ ತಂಡವನ್ನು ಆರ್‌ಸಿಬಿ ಎದುರಿಸಲಿದೆ. ಬೆಂಗಳೂರು ತಂಡ ತವರಿನಲ್ಲಿ ತನ್ನ ಮೊದಲ ಪಂದ್ಯವನ್ನು ಏ.13ರಂದು ಆಡಲಿದ್ದು, ಕರ್ನಾಟಕದ ತಾರಾ ಆಟಗಾರರಿಂದ ಕೂಡಿರುವ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡವನ್ನು ಎದುರಿಸಲಿದೆ. ತವರಿನಲ್ಲಿ ಆರ್‌ಸಿಬಿ ಒಟ್ಟು 7 ಪಂದ್ಯಗಳನ್ನು ಆಡಲಿದೆ.
RCB ತಂಡದ ವೇಳಾಪಟ್ಟಿ ಇಲ್ಲಿದೆ ನೋಡಿ:
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.