
ದೆಹಲಿ(ಮಾ.14): 12ನೇ ಆವೃತ್ತಿ ಪ್ರಶಸ್ತಿ ಮೇಲೆ 8 ಫ್ರಾಂಚೈಸಿಗಳು ಕಣ್ಣಿಟ್ಟಿದೆ. ಕಳೆದ 11 ಆವೃತ್ತಿಗಳಲ್ಲಿ ನಿರಾಸೆ ಅನುಭವಿಸಿರುವ ಡೆಲ್ಲಿ ಕ್ಯಾಪಿಟಲ್ಸ್(ಡೆಲ್ಲಿ ಡೇರ್‌ಡೆವಿಲ್ಸ್) ಇದೀಗ ಪ್ರಶಸ್ತಿ ಗೆಲ್ಲಲು ಮಾಸ್ಟರ್ ಪ್ಲಾನ್ ಮಾಡಿದೆ. ಪಂದ್ಯ ಆರಂಭಕ್ಕೆ ಕೆಲ ದಿನ ಬಾಕಿ ಇರುವಾಗಲೇ ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ಡೆಲ್ಲಿ ಕ್ಯಾಪಿಟಲ್ಸ್ ಸೇರಿಕೊಂಡಿದ್ದಾರೆ.
ಇದನ್ನೂ ಓದಿ: ರಾತ್ರಿ 8ರ ಬದಲು 7ಕ್ಕೆ ಐಪಿಎಲ್- ಮುಂಬೈ ಇಂಡಿಯನ್ಸ್ ವಿರೋಧ!
ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸಲಹೆಗಾರನಾಗಿ ಸೌರವ್ ಗಂಗೂಲಿಯನ್ನ ನೇಮಕ ಮಾಡಲಾಗಿದೆ. ಡೆಲ್ಲಿ ತಂಡ ಗಂಗೂಲಿ ಸೇವೆ ಬಳಸಿಕೊಳ್ಳಲು ಉತ್ಸುಕವಾಗಿದೆ ಎಂದಿದೆ. ಗಂಗೂಲಿ ನೇಮಕದೊಂದಿಗೆ ದೆಹಲಿ ತಂಡ ದಿಗ್ಗಜ ಸ್ಟಾಫ್ ಹೊಂದಿದೆ ತಂಡ ಅನ್ನೋ ಹೆಗ್ಗಳಿಕೆಗೂ ಪಾತ್ರವಾಗಿದೆ.
ಇದನ್ನೂ ಓದಿ: ಐಪಿಎಲ್ ಆರಂಭಕ್ಕೂ ಮುನ್ನ ಸನ್‌ರೈಸರ್ಸ್ ಹೈದರಾಬಾದ್‌ಗೆ ನಿರಾಸೆ!
ಆಸ್ಟ್ರೇಲಿಯಾ ದಿಗ್ಗಜ ರಿಕಿ ಪಾಂಟಿಂಗ್ ದೆಹಲಿ ತಂಡದ ಮುಖ್ಯ ಕೋಚ್ ಆಗಿ ಆಯ್ಕೆ ಮಾಡಿದ್ದರೆ, ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಮೊಹಮ್ಮದ್ ಕೈಫ್ ಸಹಾಯಕ ಕೋಚ್ ಆಗಿ ನೇಮಕ ಮಾಡಲಾಗಿದೆ. ಇದೀಗ ಸಲಹೆಗಾರನಾಗಿ ಗಂಗೂಲಿ ಕೂಡ ಸೇರಿಕೊಂಡಿರುವುದು ಡೆಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.