ಧೋನಿ ಭಾರತ ಕಂಡ ಅತ್ಯಂತ ಯಶಸ್ವಿ ನಾಯಕ. ಧೋನಿ ಯುವ ಕ್ರಿಕೆಟಿಗರಿಗೆ ಹಾಗೂ ನಾಯಕ ವಿರಾಟ್ ಕೊಹ್ಲಿಗೆ ಎಲ್ಲಾ ಸಂದರ್ಭಗಳಲ್ಲೂ ಸೂಕ್ತ ಮಾರ್ಗದರ್ಶನ ನೀಡುತ್ತಾರೆ. ವಿಶ್ವಕಪ್ ಟೂರ್ನಿಯಲ್ಲಿ ಧೋನಿ ಉಪಸ್ಥಿತಿ ಕೆಲವೊಂದು ನಿರ್ಧಾರ ತೆಗೆದುಕೊಳ್ಳುವಾಗ ಪ್ರಮುಖ ಪಾತ್ರ ವಹಿಸುತ್ತದೆ ಎಂದು 2011ರ ವಿಶ್ವಕಪ್ ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದ ಯುವಿ ಹೇಳಿದ್ದಾರೆ.
ಮುಂಬೈ[ಫೆ.09]: ಮುಂಬರುವ ವಿಶ್ವಕಪ್ ಟೂರ್ನಿಯಲ್ಲಿ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಉಪಸ್ಥಿತಿ ತಂಡಕ್ಕೆ ವರದಾನವಾಗಲಿದೆ ಎಂದು 2011ರ ಏಕದಿನ ವಿಶ್ವಕಪ್ ಹೀರೋ ಯುವರಾಜ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ. ಇಂಗ್ಲೆಂಡ್’ನಲ್ಲಿ ನಡೆಯಲಿರುವ ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲು ಧೋನಿಯ ಮಾರ್ಗದರ್ಶನ ಸಹಕಾರಿಯಾಗಲಿದೆ ಎಂದು ಯುವರಾಜ್ ಸಿಂಗ್ ಹೇಳಿದ್ದಾರೆ.
ಧೋನಿ ಇರುವಾಗ ಗೆರೆ ದಾಟಬೇಡಿ: ಇದು ICC ನೀಡಿದ ಎಚ್ಚರಿಕೆ..!
ಧೋನಿ ಭಾರತ ಕಂಡ ಅತ್ಯಂತ ಯಶಸ್ವಿ ನಾಯಕ. ಧೋನಿ ಯುವ ಕ್ರಿಕೆಟಿಗರಿಗೆ ಹಾಗೂ ನಾಯಕ ವಿರಾಟ್ ಕೊಹ್ಲಿಗೆ ಎಲ್ಲಾ ಸಂದರ್ಭಗಳಲ್ಲೂ ಸೂಕ್ತ ಮಾರ್ಗದರ್ಶನ ನೀಡುತ್ತಾರೆ. ವಿಶ್ವಕಪ್ ಟೂರ್ನಿಯಲ್ಲಿ ಧೋನಿ ಉಪಸ್ಥಿತಿ ಕೆಲವೊಂದು ನಿರ್ಧಾರ ತೆಗೆದುಕೊಳ್ಳುವಾಗ ಪ್ರಮುಖ ಪಾತ್ರ ವಹಿಸುತ್ತದೆ ಎಂದು 2011ರ ವಿಶ್ವಕಪ್ ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದ ಯುವಿ ಹೇಳಿದ್ದಾರೆ.
2019ರ ವಿಶ್ವಕಪ್‌ಗೆ ಯುವರಾಜ್ ಸಿಂಗ್ ಕಮ್‌ಬ್ಯಾಕ್ ಗುರಿ!
2019ರ ಏಕದಿನ ವಿಶ್ವಕಪ್ ಟೂರ್ನಿಯು ಮೇ 30ರಿಂದ ಆರಂಭವಾಗಲಿದ್ದು, ಉದ್ಘಾಟನಾ ಪಂದ್ಯದಲ್ಲಿ ಆತಿಥ್ಯ ವಹಿಸಿರುವ ಇಂಗ್ಲೆಂಡ್ ತಂಡವು ದಕ್ಷಿಣ ಆಫ್ರಿಕಾ ಎದುರು ಸೆಣಸಲಿದೆ. 10 ತಂಡಗಳು ಪ್ರಶಸ್ತಿಗಾಗಿ ಕಾದಾಡಲಿದ್ದು, ಭಾರತ ಜೂನ್ 05ರಂದು ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಪಂದ್ಯವನ್ನಾಡಲಿದೆ.
ಅಬ್ ಆಯೇಗಾ ಮಜಾ: ಮುಂಬೈ ಸೇರಿದ ಯುವಿ ಖಡಕ್ ವಾರ್ನಿಂಗ್..!
ಯುವರಾಜ್ ಸಿಂಗ್ ಈ ಬಾರಿ ಐಪಿಎಲ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ಪರ ಕಣಕ್ಕಿಳಿಯಲಿದ್ದಾರೆ.