ಪಂತ್ ಬದಲು ದಿನೇಶ್ ಕಾರ್ತಿಕ್- ವಿಶ್ವಕಪ್ ಆಯ್ಕೆ ಸೀಕ್ರೆಟ್ ಬಿಚ್ಚಿಟ್ಟ ಕೊಹ್ಲಿ!

Published : May 16, 2019, 09:30 AM IST
ಪಂತ್ ಬದಲು ದಿನೇಶ್ ಕಾರ್ತಿಕ್- ವಿಶ್ವಕಪ್ ಆಯ್ಕೆ ಸೀಕ್ರೆಟ್ ಬಿಚ್ಚಿಟ್ಟ ಕೊಹ್ಲಿ!

ಸಾರಾಂಶ

ವಿಶ್ವಕಪ್ ಟೂರ್ನಿಗೆ ಆಯ್ಕೆ ಮಾಡಿರುವ ಟೀಂ ಇಂಡಿಯಾದಲ್ಲಿ ರಿಷಬ್ ಪಂತ್‌ಗೆ ಯಾಕೆ ಸ್ಥಾನ ನೀಡಿಲ್ಲ ಅನ್ನೋ ಟೀಕೆಗಗಳು ಕೇಳಿ ಬಂದಿತ್ತು. ಅತ್ಯುತ್ತಮ ಪ್ರದರ್ಶದ ಮೂಲಕ ಗಮನಸೆಳೆದಿರುವ ಪಂತ್ ಬದಲು ದಿನೇಶ್ ಕಾರ್ತಿಕ್‌ಗೆ ಅವಕಾಶ ನೀಡಲಾಗಿದೆ. ನಾಯಕ ವಿರಾಟ್ ಕೊಹ್ಲಿ ಇದೀಗ ಕಾರ್ತಿಕ್ ಆಯ್ಕೆ ಸೀಕ್ರೆಟ್ ಬಹಿರಂಗ ಪಡಿಸಿದ್ದಾರೆ.

ಮುಂಬೈ(ಮೇ.16): ದ್ವಿಪಕ್ಷೀಯ ಹಾಗೂ ಐಪಿಎಲ್ ಟೂರ್ನಿಯಲ್ಲಿ ಅದ್ಬುತ ಪ್ರದರ್ಶನ ನೀಡಿ ಗಮನಸೆಳೆದಿರುವ ರಿಷಬ್ ಪಂತ್ ಬದಲು ಅನುಭವಿ ದಿನೇಶ್ ಕಾರ್ತಿಕ್‌ಗೆ ವಿಶ್ವಕಪ್ ಟೂರ್ನಿಯಲ್ಲಿ ಸ್ಥಾನ ನೀಡಲಾಗಿದೆ. ಇದು ಭಾರಿ ಚರ್ಚೆಗೆ ಕಾರಣವಾಗಿತ್ತು. ಇದೀಗ ಪಂತ್ ಬದಲು ಕಾರ್ತಿಕ್‌ಗೆ ಸ್ಥಾನ ನೀಡಿರುವುದು ಯಾಕೆ ಅನ್ನೋದನ್ನು ನಾಯಕ ವಿರಾಟ್ ಕೊಹ್ಲಿ ಬಾಯ್ಬಿಟ್ಟಿದ್ದಾರೆ.

ಇದನ್ನೂ ಓದಿ: ವಿಶ್ವಕಪ್’ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗಿದು ಗುಡ್ ನ್ಯೂಸ್..!

ದಿನೇಶ್ ಕಾರ್ತಿಕ್ ಅನುಭವಿ ಆಟಗಾರ. ಒತ್ತಡದ ಸಂದರ್ಭದಲ್ಲಿ ತಂಡವನ್ನು ಸಮರ್ಥವಾಗಿ ನಿಭಾಯಿಸಬಲ್ಲ ಸಾಮರ್ಥ್ಯ ಹೊಂದಿದ್ದಾರೆ. ಇಷ್ಟೇ ಅಲ್ಲ ಹಲವು ಭಾರಿ ದಿನೇಶ್ ಕಾರ್ತಿಕ್ ಒತ್ತಡದ ಸಂದರ್ಭ ಎದುರಿ ಯಶಸ್ವಿಯಾಗಿದ್ದಾರೆ. ಹೀಗಾಗಿ ಕಾರ್ತಿಕ್ 15 ಆಟಗಾರರ ವಿಶ್ವಕಪ್ ತಂಡಕ್ಕೆ ಆಯ್ಕೆ ಮಾಡಲಾಗಿದೆ ಎಂದು ಕೊಹ್ಲಿ ಹೇಳಿದ್ದಾರೆ.

ಇದನ್ನೂ ಓದಿ:ವಿಶ್ವಕಪ್ 2019: 80,000 ಭಾರತೀಯರು ಇಂಗ್ಲೆಂಡ್‌ಗೆ!

ಎಂ.ಎಸ್.ಧೋನಿಗೆ ಮೀಸಲು ವಿಕೆಟ್ ಕೀಪರ್ ಆಗಿ ದಿನೇಶ್ ಕಾರ್ತಿಕ್ ಆಯ್ಕೆ ಮಾಡಲಾಗಿದೆ. ಕಾರ್ತಿಕ್ 2004ರಲ್ಲಿ ಟೀಂ ಇಂಡಿಯಾಗೆ ಪಾದಾರ್ಪಣೆ ಮಾಡಿದ್ದಾರೆ. 91 ಏಕದಿನ ಪಂದ್ಯ ಆಡಿದ  ಅನುಭವ ದಿನೇಶ್ ಕಾರ್ತಿಕ್‌ಗೆ ಇದೆ. ಆದರೆ 21 ವರ್ಷದ ರಿಷಬ್ ಪಂತ್ 5 ಏಕದಿನ ಪಂದ್ಯ ಆಡಿದ್ದಾರೆ. ಉತ್ತಮ ಪ್ರದರ್ಶನ ನೀಡಿರುವ ರಿಷಬ್ ಪಂತ್‌ಗೆ ಅನುಭವದ ಕೊರತೆ ಇದೆ.  ಹೀಗಾಗಿ ದಿನೇಶ್ ಕಾರ್ತಿಕ್ ಆಯ್ಕೆ ಮಾಡಲಾಗಿದೆ ಎಂದಿದ್ದಾರೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಂಜು ಸ್ಯಾಮ್ಸನ್ ಔಟ್, ಶುಭ್‌ಮನ್ ಗಿಲ್ ಇನ್: ಅಸಲಿ ಸತ್ಯ ಬಿಚ್ಚಿಟ್ಟ ರವಿಚಂದ್ರನ್ ಅಶ್ವಿನ್!
ಮೊದಲ ಸಲ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಸಂಬಳ ಕಟ್! ಬಿಸಿಸಿಐ ಮಹತ್ವದ ತೀರ್ಮಾನ?