
ಚೆನ್ನೈ[ಏ.28]: ಕತಾರ್‌ನಲ್ಲಿ ನಡೆದ ಏಷ್ಯನ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ ಗೆದ್ದ ತಮಿಳುನಾಡು ಮೂಲದ ಅಥ್ಲೀಟ್ ಗೋಮತಿ ಮಾರಿಮುತ್ತುಗೆ ಡಿಎಂಕೆ ಹಾಗೂ ಕಾಂಗ್ರೆಸ್ ಪಕ್ಷ ₹15 ಲಕ್ಷ ನಗದು ಬಹುಮಾನ ಘೋಷಿಸಿದೆ.
ಗೋಮತಿ, ಮಹಿಳೆಯರ 800 ಮೀಟರ್ ಓಟದಲ್ಲಿ 2 ನಿಮಿಷ 02.70 ಸೆಕೆಂಡ್‌ನಲ್ಲಿ ಗುರಿ ಮುಟ್ಟುವ ಮೂಲಕ ಸ್ವರ್ಣಕ್ಕೆ ಮುತ್ತಿಟ್ಟಿದ್ದರು. ಡಿಎಂಕೆ ಅಧ್ಯಕ್ಷ ಎಂ.ಕೆ.ಸ್ಟಾಲಿನ್ ಗೋಮತಿಗೆ ₹10 ಲಕ್ಷ ಹಾಗೂ 4/400 ಮೀಟರ್ ಮಿಶ್ರ ರಿಲೇಯಲ್ಲಿ ಬೆಳ್ಳಿ ಜಯಿಸಿದ್ದ ಆರೋಕ್ಯ ರಾಜೀವ್'ಗೆ ₹5 ಲಕ್ಷ ನಗದು ಬಹುಮಾನ ಘೋಷಿಸಿದ್ದಾರೆ.
ಗೋಮತಿ ಬೆಂಗಳೂರಿನಲ್ಲಿ ಆದಾಯ ತೆರಿಗೆ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಆದರೆ ಅಥ್ಲೇಟಿಕ್ಸ್’ನಲ್ಲಿ ತಮಿಳುನಾಡು ತಂಡವನ್ನು ಪ್ರತಿನಿಧಿಸುತ್ತಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.